ಬೆಳಗಾವಿಯಲ್ಲಿ ಕನ್ನಡ ಬಾವುಟಕ್ಕೆ ಬೆಂಕಿ: ಮೂವರು ಆರೋಪಿಗಳ ಬಂಧನ
ಜಿಲ್ಲೆಯ ಖಾನಾಪುರ ತಾಲ್ಲೂಕಿನ ಹಲಸಿಯಲ್ಲಿ ಕನ್ನಡ ಬಾವುಟ ಸುಟ್ಟ ಮತ್ತು ಜಗಜ್ಯೋತಿ ಬಸವೇಶ್ವರರ ಚಿತ್ರಕ್ಕೆ ಸೆಗಣಿ ಮೆತ್ತಿದ್ದ ಪ್ರಕರಣದ ಸಂಬಂಧ ನಂದಗಡ ಠಾಣೆ ಪೊಲೀಸರು ಮೂವರು ಆರೋಪಿಗಳನ್ನು ಸೋಮವಾರ ತಡರಾತ್ರಿ ಬಂಧಿಸಿದ್ದಾರೆ.
Published: 22nd December 2021 10:57 AM | Last Updated: 22nd December 2021 01:48 PM | A+A A-

ಸಾಂದರ್ಭಿಕ ಚಿತ್ರ
ಬೆಳಗಾವಿ: ಜಿಲ್ಲೆಯ ಖಾನಾಪುರ ತಾಲ್ಲೂಕಿನ ಹಲಸಿಯಲ್ಲಿ ಕನ್ನಡ ಬಾವುಟ ಸುಟ್ಟ ಮತ್ತು ಜಗಜ್ಯೋತಿ ಬಸವೇಶ್ವರರ ಚಿತ್ರಕ್ಕೆ ಸೆಗಣಿ ಮೆತ್ತಿದ್ದ ಪ್ರಕರಣದ ಸಂಬಂಧ ನಂದಗಡ ಠಾಣೆ ಪೊಲೀಸರು ಮೂವರು ಆರೋಪಿಗಳನ್ನು ಸೋಮವಾರ ತಡರಾತ್ರಿ ಬಂಧಿಸಿದ್ದಾರೆ.
ಹಲಸಿ ಗ್ರಾಮದ ಸಂಜು ಗುರವ, ಸಚಿನ ಗುರವ ಹಾಗೂ ಗಣೇಶ ಪೆಡ್ನೇಕರ ಬಂಧಿತರು. ಕತ್ತಲಲ್ಲಿ ಯಾರೂ ಇಲ್ಲದ ವೇಳೆ ಕೃತ್ಯ ನಡೆಸಿದ್ದಾಗಿ ಆರೋಪಿಗಳು ತಪ್ಪೊಪ್ಪಿಕೊಂಡಿದ್ದಾರೆ. ಘಟನೆಯ ಬಳಿಕ ಪೊಲೀಸರು ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡಿದ್ದರು, ನಂದಗಡ ಪೊಲೀಸರು ಮುಂದಿನ ತನಿಖೆ ನಡೆಸುತ್ತಿದ್ದಾರೆ.
ಇದನ್ನೂ ಓದಿ: ಬೆಳಗಾವಿ-ಧಾರವಾಡ ಹೊಸ ರೈಲು ಮಾರ್ಗಕ್ಕೆ ಸಚಿವ ಸಂಪುಟದಿಂದ ಆಡಳಿತಾತ್ಮಕ ಅನುಮೋದನೆ