1995ಕ್ಕೂ ಮುನ್ನ ಹಾಗೂ ನಂತರ ಸ್ಥಾಪನೆಯಾದ ಖಾಸಗಿ ಶಾಲೆಗಳು ಅನುದಾನಿತ ಶಾಲೆಗಳ ಪಟ್ಟಿಗೆ ಸೇರ್ಪಡೆ

ರಾಜ್ಯದ ಹಣಕಾಸು ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು, 1995 ಕ್ಕೂ ಮುನ್ನ ಹಾಗೂ ಆ ನಂತರ ಸ್ಥಾಪನೆಯಾದ ಶಾಲೆಗಳನ್ನು ಅನುದಾನಿತ ಶಾಲೆಗಳ ಪಟ್ಟಿಗೆ ತರಲಾಗುವುದು ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. 
ಸಿಎಂ ಬೊಮ್ಮಾಯಿ
ಸಿಎಂ ಬೊಮ್ಮಾಯಿ

ಬೆಳಗಾವಿ: ರಾಜ್ಯದ ಹಣಕಾಸು ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು, 1995 ಕ್ಕೂ ಮುನ್ನ ಹಾಗೂ ಆ ನಂತರ ಸ್ಥಾಪನೆಯಾದ ಶಾಲೆಗಳನ್ನು ಅನುದಾನಿತ ಶಾಲೆಗಳ ಪಟ್ಟಿಗೆ ತರಲಾಗುವುದು ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. 

ಬೆಳಗಾವಿ ವಿಧಾನಸೌಧದಲ್ಲಿ ವಿಧಾನಪರಿಷತ್ ಸಭಾಧ್ಯಕ್ಷ ಬಸವರಾಜ ಹೊರಟ್ಟಿ ನೇತೃತ್ವದಲ್ಲಿ ಖಾಸಗಿ, ಅನುದಾನ ರಹಿತ ಶಿಕ್ಷಣ ಸಂಸ್ಥೆಗಳ ಸಮಸ್ಯೆಗಳ ವಿಷಯವಾಗಿ ನಡೆದ ಸಭೆಯಲ್ಲಿ ಮಾತನಾಡಿದ ಅವರು, 1995ಕ್ಕೂ ಮುನ್ನ ಹಾಗೂ ನಂತರ ಸ್ಥಾಪನೆಯಾದ ಖಾಸಗಿ ಶಾಲೆಗಳನ್ನು ಅನುದಾನಿತ ಶಾಲೆಗಳ ವ್ಯಾಪ್ತಿಗೆ ತರಲು ಶಿಕ್ಷಣ ಇಲಾಖೆಯ ಅಧಿಕಾರಿಗಳು ಹಣಕಾಸು ಇಲಾಖೆ ಅಧಿಕಾರಿಗಳಿಗೆ ಸೂಕ್ತ ದಾಖಲೆ ಹಾಗೂ ಅಂಕಿ-ಅಂಶಗಳೊಂದಿಗೆ ಪ್ರಸ್ತಾವನೆ ಸಲ್ಲಿಸಬೇಕೆಂದು ಹೇಳಿದ್ದಾರೆ. 

ರಾಜ್ಯದಲ್ಲಿ ಹಲವಾರು ಖಾಯಂ ಖಾಸಗಿ ಶಾಲೆಗಳಿವೆ. ಹಣಕಾಸು ಪರಿಸ್ಥಿತಿ ಸುಧಾರಣೆಯಾದಲ್ಲಿ ಈ ಶಾಲೆಗಳನ್ನೂ ಅನುದಾನಿತ ಶಾಲೆಗಳ ವ್ಯಾಪ್ತಿಗೆ ತರಲಾಗುತ್ತದೆ ಎಂದು ಸಿಎಂ ಹೇಳಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com