‘ಬಿ’ ಖಾತೆ ಆಸ್ತಿಗಳನ್ನು ಸಕ್ರಮಗೊಳಿಸುವ ಗುರಿ; 13.56 ಲಕ್ಷ ಸ್ವತ್ತುಗಳಿಗೆ ಆಸ್ತಿ ತೆರಿಗೆ ಘೋಷಣೆ: ಸಿಎಂ ಬಸವರಾಜ ಬೊಮ್ಮಾಯಿ

ಬೆಂಗಳೂರು ನಗರ ಸೇರಿದಂತೆ ರಾಜ್ಯಾದ್ಯಂತ ಇರುವ ‘ಬಿ’ ಖಾತೆಗಳನ್ನು ಸಕ್ರಮಗೊಳಿಸುವ ಗುರಿ ಹೊಂದಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಸಿಎಂ ಬಸವರಾಜ ಬೊಮ್ಮಾಯಿ
ಸಿಎಂ ಬಸವರಾಜ ಬೊಮ್ಮಾಯಿ

ಡಿಸೆಂಬರ್: ಬೆಂಗಳೂರು ನಗರ ಸೇರಿದಂತೆ ರಾಜ್ಯಾದ್ಯಂತ ಇರುವ ‘ಬಿ’ ಖಾತೆಗಳನ್ನು ಸಕ್ರಮಗೊಳಿಸುವ ಗುರಿ ಹೊಂದಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ವಿಧಾನಪರಿಷತ್‍ನಲ್ಲಿ ಡಿ.23 ರಂದು ಸದಸ್ಯ ಎನ್.ರವಿಕುಮಾರ್ ಅವರ ಪ್ರಶ್ನೆಗೆ ಉತ್ತರಿಸಿದ ಸಿಎಂ ಬೊಮ್ಮಾಯಿ ಅವರು ಅಕ್ರಮ-ಸಕ್ರಮ ಯೋಜನೆಗೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್‍ನಲ್ಲಿ ದೂರು ದಾಖಲಾಗಿದೆ. ಈ ದೂರು ದಾಖಲಾಗಿದ್ದರಿಂದ ಅಕ್ರಮ-ಸಕ್ರಮ ಸಂಪೂರ್ಣ ಸ್ಥಗಿತವಾಗಿದೆ. ಅದನ್ನು ಇತ್ಯರ್ಥಗೊಳಿಸುವಲ್ಲಿ ರಾಜ್ಯ ಸರ್ಕಾರ ಗಂಭೀರ ಪ್ರಯತ್ನ ನಡೆಸಿದೆ ಮತ್ತು ದೂರುದಾರರ ಬೇಡಿಕೆಗಳನ್ನು ಆಲಿಸಲಾಗುತ್ತಿದೆ ಎಂದು ಅವರು ವಿವರಿಸಿದರು.

ಬೆಂಗಳೂರು ದಿನದಿಂದ ದಿನಕ್ಕೆ ಬೆಳೆಯುತ್ತಿದ್ದು, ಜನದಟ್ಟಣೆ ಹೆಚ್ಚಾಗುತ್ತಿದೆ ಮತ್ತು 110 ಹಳ್ಳಿಗಳನ್ನು ಬೆಂಗಳೂರು ವ್ಯಾಪ್ತಿಗೆ ಸೇರಿಸಿಕೊಂಡಿದ್ದೇವೆ. ಎಸ್.ಎಂ.ಕೃಷ್ಣ ಅವರ ಅವಧಿಯಲ್ಲಿ 8 ಮುನ್ಸಿಪಾಲಿಟಿಗಳನ್ನು ಸೇರಿಸಿಕೊಳ್ಳಲಾಗಿತ್ತು. ನಗರ ಪ್ರದೇಶದ ಜೊತೆಗೆ ಹಳ್ಳಿಗಳಲ್ಲಿಯೂ ಮೂಲಸೌಕರ್ಯ ಕಲ್ಪಿಸುವ ಸವಾಲು ಇದೆ; ಅಲ್ಲಿಯೂ ಸೌಕರ್ಯ ಒದಗಿಸಲಾಗುವುದು ಎಂದರು.

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ 18,52,802 ಆಸ್ತಿಗಳನ್ನು ತೆರಿಗೆ ವ್ಯಾಪ್ತಿಗೆ ಒಳಪಡಿಸಲಾಗಿದೆ. ಬಿಬಿಎಂಪಿ ವ್ಯಾಪ್ತಿಯಲ್ಲಿರುವ ವಿವಿಧ ರೀತಿಯ ಉಪಯೋಗದ ಕಟ್ಟಡಗಳನ್ನ ವಿವಿಧ ವರ್ಗಗಳಾಗಿ ವಿಂಗಡಿಸಲಾಗಿದ್ದು, ಪ್ರತಿಯೊಂದು ವರ್ಗಕ್ಕೂ ಪ್ರತ್ಯೇಕ ದರಗಳಲ್ಲಿ ಆಸ್ತಿ ತೆರಿಗೆ ನಿಗದಿಪಡಿಸಲಾಗಿದೆ. ವಾಣಿಜ್ಯ ಕಟ್ಟಡಗಳಿಗೆ ಯೂನಿಟ್ ಏರಿಯಾ ವ್ಯಾಲ್ಯೂ ಮೌಲ್ಯದ ಶೇ.25ರಷ್ಟು ತೆರಿಗೆ ಹಾಗೂ ವಸತಿ ಕಟ್ಟಡಗಳಿಗೆ ಶೇ.20ರಷ್ಟು ತೆರಿಗೆ ವಿಧಿಸಲಾಗುತ್ತಿದೆ ಎಂದು ಅವರು ವಿವರಿಸಿದರು.

*13.56 ಲಕ್ಷ ಸ್ವತ್ತುಗಳಿಗೆ ಆಸ್ತಿ ತೆರಿಗೆ ಘೋಷಣೆ: 2021-22ನೇ ಸಾಲಿನಲ್ಲಿಈವರೆಗೂ ಸ್ವಯಂ ಘೋಷಣೆ ಆಸ್ತಿ ತೆರಿಗೆ ಪದ್ದತಿ ಅಡಿಯಲ್ಲಿ ಒಟ್ಟು 13,56,087 ಸ್ವತ್ತುಗಳಿಗೆ ಆಸ್ತಿ ತೆರಿಗೆ ಘೋಷಿಸಿಕೊಂಡು ಆಸ್ತಿತೆರಿಗೆ ಪಾವತಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ವಿವರಿಸಿದರು.

ಇದರಲ್ಲಿ 97,057 ವಾಣಿಜ್ಯ ಕಟ್ಟಡಗಳು,9112 ಬಹುಮಹಡಿ ವಸತಿ ಸಂಕೀರ್ಣಗಳು ಮತ್ತು 12,59,030 ವಸತಿಯೋಗ್ಯ ಮನೆಗಳಿವೆ ಎಂದು ಅವರು ತಿಳಿಸಿದರು.

ತಪ್ಪು ಮಾಹಿತಿ ನೀಡಿ ಆಸ್ತಿ ತೆರಿಗೆ ಘೋಷಿಸಿಕೊಂಡಿರುವ 10516 ಕಟ್ಟಡಗಳಿಗೆ ಆಸ್ತಿತೆರಿಗೆ ಪುನರ್ ಪರಿಷ್ಕರಿಸಿ ಕಾರಣ ಕೇಳಿ ನೋಟಿಸ್ ಜಾರಿ ಮಾಡಲಾಗಿದ್ದು, ಈ ಪ್ರಕರಣಗಳಲ್ಲಿ 56.14ಕೋಟಿ ರೂ. ಆಸ್ತಿ ತೆರಿಗೆ ವಸೂಲು ಮಾಡಲಾಗಿದೆ ಎಂದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com