ಕೆಎಸ್ ಆರ್ ಟಿಸಿ, ಬಿಎಂಟಿಸಿ ಖಾಸಗೀಕರಣ ಇಲ್ಲ: ಮೇಲ್ಮನೆಯಲ್ಲಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಹೇಳಿಕೆ

ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗಳ ಖಾಸಗೀಕರಣದ ಪ್ರಸ್ತಾವನೆ ಸರ್ಕಾರದ ಮುಂದಿಲ್ಲ ಎಂದು ಸಮಾಜ ಕಲ್ಯಾಣ ಸಚಿವರು ಆಗಿರುವ ಸಭಾನಾಯಕ ಕೋಟಾ ಶ್ರೀನಿವಾಸ ಪೂಜಾರಿ ವಿಧಾನ ಪರಿಷತ್ ನಲ್ಲಿ ಹೇಳಿದ್ದಾರೆ.
ಕೆಎಸ್ ಆರ್ ಟಿ, ಬಿಎಂಟಿಸಿ
ಕೆಎಸ್ ಆರ್ ಟಿ, ಬಿಎಂಟಿಸಿ

ಬೆಳಗಾವಿ: ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗಳ ಖಾಸಗೀಕರಣದ ಪ್ರಸ್ತಾವನೆ ಸರ್ಕಾರದ ಮುಂದಿಲ್ಲ ಎಂದು ಸಮಾಜ ಕಲ್ಯಾಣ ಸಚಿವರು ಆಗಿರುವ ಸಭಾನಾಯಕ ಕೋಟಾ ಶ್ರೀನಿವಾಸ ಪೂಜಾರಿ ವಿಧಾನ ಪರಿಷತ್ ನಲ್ಲಿ ಹೇಳಿದ್ದಾರೆ.

ಸದಸ್ಯ ಮುನಿರಾಜು ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಕೆಎಸ್ ಆರ್ ಟಿಸಿ ಸಂಸ್ಥೆಯನ್ನು ಖಾಸಗೀಕರಣ ಮಾಡುವ ಪ್ರಶ್ನೆಯೇ ಇಲ್ಲ, ಇದರಿಂದ ಲಾಭ ಬಂದರೂ ಸರಿ ಅಥವಾ ನಷ್ಟವಾದರೂ ಸರಿ, ಯಾವುದೇ ಕಾರಣಕ್ಕೂ ಸರ್ಕಾರವೇ ನಡೆಸಿಕೊಂಡು ಹೋಗುತ್ತದೆ ಎಂದು ಸ್ಪಷ್ಟಪಡಿಸಿದರು.

ಇದೇ ವೇಳೆ ಬಿಎಂಟಿಸಿ ಕುರಿತು ಉತ್ತರಿಸಿದ ಸಚಿವರು, 15 ವರ್ಷದ ವರೆಗೂ ಉತ್ತಮ ಸ್ಥಿತಿಯಲ್ಲಿರುತ್ತದೆ ಎಂದು ಸಂಬಂಧಿಸಿದ ಸಂಸ್ಥೆಗಳು ಪ್ರಮಾಣೀಕರಿಸಿರುವ ಬಸ್ಸುಗಳನ್ನು  ಕೇವಲ ಮೂರು ವರ್ಷಗಳಲ್ಲಿ ಕಡಿಮೆ ಬೆಲೆಗೆ ಮಾರಾಟ ಮಾಡಿ ಸರ್ಕಾರದ ಬೊಕ್ಕಸಕ್ಕೆ ಹೊರೆ ಮಾಡುವುದು ಎಷ್ಟು ಎಷ್ಟು ಸರಿ ಎಂದು ಪ್ರಶ್ನೆಮಾಡಿದರು. 

ಬಿಎಂಟಿಸಿ 733 ಕೋಟಿ ಪಡೆದಿದ್ದು, 195 ಕೋಟಿ ಮರು ಪಾವತಿ ಮಾಡಲಾಗಿದೆ. 11 ವರ್ಷಾವಧಿ ಅಥವಾ 8 ಲಕ್ಷ ಕಿಲೋ ಮೀಟರ್ ವರೆಗೆ ಸಂಚಾರ ಮಾಡಿರುವ ಬಸ್ ಗಳನ್ನು ಮಾತ್ರ ಮಾರಾಟ ಮಾಡಲು ತಯಾರಿ ನಡೆಸಲಾಗಿದೆ. ಈಗ ಹೊಸದಾಗಿ ಸಾಮಾನ್ಯ ಬಸ್ ಗಳನ್ನು ಮಾತ್ರ ಖರೀದಿಸಲು ಚಿಂತನೆ ನಡೆಸಲಾಗಿದೆ ಎಂದು ತಿಳಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com