ವರ್ಷಾಂತ್ಯಕ್ಕೆ ಮೈಕೊರೆಯುವ ಚಳಿ ಅನುಭವಿಸಲು ಸಿದ್ಧರಾಗಿ: ಹವಾಮಾನ ಇಲಾಖೆ ಮಾಹಿತಿ

ವರ್ಷಾಂತ್ಯಕ್ಕೆ ರಾಜ್ಯದ ಹಲವು ಭಾಗಗಳಲ್ಲಿ ಚಳಿ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೀದರ್, ವಿಜಯಪುರ ಮೊದಲಾದ ಜಿಲ್ಲೆಗಳಲ್ಲಿ ಈಗಾಗಲೇ ಚಳಿಯು ಹೆಚ್ಚಾಗಿ ಸಾಮಾನ್ಯಕ್ಕಿಂತ 5ರಿಂದ 6 ಡಿಗ್ರಿ ಸೆಲ್ಸಿಯಸ್ ಕಡಿಮೆ ದಾಖಲಾಗಿದೆ. ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಈಗಾಗಲೇ ಚಳಿಯು ಸಹಜ ತಾಪಮಾನಕ್ಕಿಂತ 1-2 ಡಿಗ್ರಿ ಸೆಲ್ಸಿಯಸ್ ಕಡಿಮೆಯಾಗಿದೆ. 
ಮೈಸೂರಿನಲ್ಲಿ ನಿನ್ನೆ ಕಂಡುಬಂದ ದೃಶ್ಯ
ಮೈಸೂರಿನಲ್ಲಿ ನಿನ್ನೆ ಕಂಡುಬಂದ ದೃಶ್ಯ

ಬೆಂಗಳೂರು: ವರ್ಷಾಂತ್ಯಕ್ಕೆ ರಾಜ್ಯದ ಹಲವು ಭಾಗಗಳಲ್ಲಿ ಚಳಿ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೀದರ್, ವಿಜಯಪುರ ಮೊದಲಾದ ಜಿಲ್ಲೆಗಳಲ್ಲಿ ಈಗಾಗಲೇ ಚಳಿಯು ಹೆಚ್ಚಾಗಿ ಸಾಮಾನ್ಯಕ್ಕಿಂತ 5ರಿಂದ 6 ಡಿಗ್ರಿ ಸೆಲ್ಸಿಯಸ್ ಕಡಿಮೆ ದಾಖಲಾಗಿದೆ. ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಈಗಾಗಲೇ ಚಳಿಯು ಸಹಜ ತಾಪಮಾನಕ್ಕಿಂತ 1-2 ಡಿಗ್ರಿ ಸೆಲ್ಸಿಯಸ್ ಕಡಿಮೆಯಾಗಿದೆ. 

ನಿನ್ನೆ ಬೆಂಗಳೂರಿನಲ್ಲಿ ಗರಿಷ್ಠ 28.2 ಡಿಗ್ರಿ ಸೆಲ್ಸಿಯಸ್ ದಾಖಲಾಗಿದ್ದು ಅದು ಸಾಮಾನ್ಯಕ್ಕಿಂತ 2 ಡಿಗ್ರಿ ಸೆಲ್ಸಿಯಸ್ ಹೆಚ್ಚಾಗಿದೆ. ಡಿಸೆಂಬರ್ 18ಕ್ಕೆ ಬೀದರ್ ನಲ್ಲಿ 9.6 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದ್ದರೆ ಡಿಸೆಂಬರ್ 19ಕ್ಕೆ ಬೀದರ್ ನಲ್ಲಿ 9.4 ಡಿಗ್ರಿ ಸೆಲ್ಸಿಯಸ್, ಹೆಚ್ ಎಎಲ್ ವಿಮಾನ ನಿಲ್ದಾಣದಲ್ಲಿ 13.6 ಡಿಗ್ರಿ ಮತ್ತು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 14.40 ಡಿಗ್ರಿ ಸೆಲ್ಸಿಯಸ್ ಕನಿಷ್ಠ ತಾಪಮಾನ ದಾಖಲಾಗಿದೆ.

ಈ ಬಗ್ಗೆ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಗೆ ಮಾಹಿತಿ ನೀಡಿದ ಭಾರತೀಯ ಹವಾಮಾನ ಇಲಾಖೆಯ ಬೆಂಗಳೂರು ವಲಯ ನಿರ್ದೇಶಕಿ ಗೀತಾ ಅಗ್ನಿಹೋತ್ರಿ, ಶುಭ್ರ ಆಕಾಶ ಮತ್ತು ಉತ್ತರದ ಕಡೆಯಿಂದ ಶೀತಗಾಳಿ ಬೀಸುವುದರಿಂದ ತಾಪಮಾನವು ಕುಸಿಯುತ್ತಿದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಕಡಿಮೆಯಾಗಲಿದೆ. ಜನವರಿಯಲ್ಲಿ ಬೀದರ್‌ನಲ್ಲಿ ಇದುವರೆಗೆ ಕನಿಷ್ಠ 6.2 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.

ರಾಜ್ಯದಾದ್ಯಂತ ಹೆಚ್ಚಿನ ಜಿಲ್ಲೆಗಳಲ್ಲಿ ಗರಿಷ್ಠ ತಾಪಮಾನವು ಸಾಮಾನ್ಯಕ್ಕಿಂತ 1-2 ಡಿಗ್ರಿ ಸೆಲ್ಸಿಯಸ್ ಕಡಿಮೆಯಾಗಿದೆ. ಬೆಂಗಳೂರಿನಲ್ಲಿ ಡಿಸೆಂಬರ್ 29, 1883 ರಂದು ಅತ್ಯಂತ ಕಡಿಮೆ ಕನಿಷ್ಠ 8.9 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ನಗರದಲ್ಲಿ 2011 ರಲ್ಲಿ 12.8 ಡಿಗ್ರಿ, ಡಿಸೆಂಬರ್ 11, 2016 ರಂದು 12 ಡಿಗ್ರಿ ಸೆಲ್ಸಿಯಸ್. ಡಿಸೆಂಬರ್ 22, 2020 ರಂದು ಬೆಂಗಳೂರಿನಲ್ಲಿ ಕನಿಷ್ಠ ಕನಿಷ್ಠ 14.20 ದಾಖಲಾಗಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com