ಬೆಳಗಾವಿ ಅಧಿವೇಶನ ಮುಗಿಸಿ ದುಬೈಗೆ ತೆರಳಿದ ಬಿ.ಎಸ್. ಯಡಿಯೂರಪ್ಪ
ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಕುಟುಂಬ ಸಮೇತ ದುಬೈ ಪ್ರವಾಸ ಕೈಗೊಂಡಿದ್ದಾರೆ. ಬೆಳಗಾವಿಯಲ್ಲಿ ನಡೆದ ಚಳಿಗಾಲದ ಅಧಿವೇಶನ ಮುಗಿದ ಬೆನ್ನಲ್ಲೇ ಬಿಎಸ್ ವೈ ಮೂರು ದಿನಗಳ ವಿದೇಶ ಪ್ರವಾಸಕ್ಕೆ ತೆರಳಿದ್ದಾರೆ.
Published: 25th December 2021 08:53 AM | Last Updated: 25th December 2021 01:26 PM | A+A A-

ಬಿ.ಎಸ್ ಯಡಿಯೂರಪ್ಪ
ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಕುಟುಂಬ ಸಮೇತ ದುಬೈ ಪ್ರವಾಸ ಕೈಗೊಂಡಿದ್ದಾರೆ. ಬೆಳಗಾವಿಯಲ್ಲಿ ನಡೆದ ಚಳಿಗಾಲದ ಅಧಿವೇಶನ ಮುಗಿದ ಬೆನ್ನಲ್ಲೇ ಬಿಎಸ್ ವೈ ಮೂರು ದಿನಗಳ ವಿದೇಶ ಪ್ರವಾಸಕ್ಕೆ ತೆರಳಿದ್ದಾರೆ.
ಅಧಿವೇಶನ ಮುಗಿಯುವ ಒಂದು ದಿನ ಮೊದಲೇ ಬೆಳಗಾವಿಯಿಂದ ಬೆಂಗಳೂರಿಗೆ ಆಗಮಿಸಿದ ಯಡಿಯೂರಪ್ಪ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಕುಟುಂಬ ಸದಸ್ಯರ ಜೊತೆಗೆ ದುಬೈಗೆ ತೆರಳಿದರು.
ಇದನ್ನೂ ಓದಿ: ಕಾಂಗ್ರೆಸ್ ವರ್ತನೆಗೆ ಯಡಿಯೂರಪ್ಪ ಗರಂ; ನಾವು ಮುಸ್ಲಿಂ, ಕ್ರಿಶ್ಚಿಯನ್ ವಿರೋಧಿಗಳಲ್ಲ ಎಂದ ಮಾಜಿ ಸಿಎಂ
ದುಬೈ ಕನ್ನಡ ಸಂಘದ ಶಾಲಾ ಉದ್ಘಾಟನಾ ಕಾರ್ಯಕ್ರಮದಲ್ಲಿ ಯಡಿಯೂರಪ್ಪ ಪಾಲ್ಗೊಳ್ಳಲಿದ್ದು, ಮೂರು ದಿನಗಳ ನಂತರ ವಾಪಸ್ಸಾಗಲಿದ್ದಾರೆ ಎಂದು ಕುಟುಂಬ ಮೂಲಗಳು ತಿಳಿಸಿವೆ. ಬೆಂಗಳೂರಿಗೆ ಬರುವ ಮೊದಲೇ ಯಡಿಯೂರಪ್ಪ ಕೋವಿಡ್ ಪರೀಕ್ಷೆ ಮಾಡಿಸಿಕೊಂಡರು. ಬೆಳಗಾವಿಯ ಸುವರ್ಣಸೌಧದಲ್ಲಿ ಆರ್ಟಿಪಿಸಿಆರ್ ಪರೀಕ್ಷೆ ಮಾಡಿಸಿ, ನೆಗಟಿವ್ ವರದಿಯೊಂದಿಗೆ ವಿದೇಶಕ್ಕೆ ತೆರಳಿದ್ದಾರೆ.