ಕಾಯ್ದೆ ಮೂಲಕ ಬಲವಂತದ ಮತಾಂತರ ನಿಯಂತ್ರಿಸಲಾಗುವುದು: ರಾಮ್ ಮಾಧವ್

ಕರ್ನಾಟಕ ಸರ್ಕಾರದ ಮತಾಂತರ ನಿಷೇಧ ಕಾಯ್ದೆಯನ್ನು ಶನಿವಾರ ಸಮರ್ಥಿಸಿಕೊಂಡಿರುವ ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ರಾಷ್ಟ್ರೀಯ ಕಾರ್ಯಕಾರಿಣಿ ಸದಸ್ಯ ರಾಮ್ ಮಾಧವ ಅವರು, ಕಾಯ್ದೆಯು ಬಲವಂತದ ಮತಾಂತರವನ್ನು ನಿಯಂತ್ರಿಸುವ ಉದ್ದೇಶವನ್ನು ಹೊಂದಿದೆ ಎಂದು ಹೇಳಿದ್ದಾರೆ.
ರಾಮ್ ಮಾಧವ್
ರಾಮ್ ಮಾಧವ್
Updated on

ಬೆಂಗಳೂರು: ಕರ್ನಾಟಕ ಸರ್ಕಾರದ ಮತಾಂತರ ನಿಷೇಧ ಕಾಯ್ದೆಯನ್ನು ಶನಿವಾರ ಸಮರ್ಥಿಸಿಕೊಂಡಿರುವ ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ರಾಷ್ಟ್ರೀಯ ಕಾರ್ಯಕಾರಿಣಿ ಸದಸ್ಯ ರಾಮ್ ಮಾಧವ ಅವರು, ಕಾಯ್ದೆಯು ಬಲವಂತದ ಮತಾಂತರವನ್ನು ನಿಯಂತ್ರಿಸುವ ಉದ್ದೇಶವನ್ನು ಹೊಂದಿದೆ ಎಂದು ಹೇಳಿದ್ದಾರೆ.

ಇತ್ತೀಚೆಗೆ ಬೆಳಗಾವಿಯಲ್ಲಿ ನಡೆದ ಚಳಿಗಾಲದ ಅಧಿವೇಶನದಲ್ಲಿ ವಿಧಾನಸಭೆಯಲ್ಲಿ ಅಂಗೀಕಾರಗೊಂಡ ಮಸೂದೆಗೆ ಕ್ರಿಶ್ಚಿಯನ್ ಸಮುದಾಯದ ಮುಖಂಡರು ಆತಂಕ ವ್ಯಕ್ತಪಡಿಸಿದ್ದು, ಕಾಯ್ದೆಯು ಜನವರಿಯಲ್ಲಿ ವಿಧಾನ ಪರಿಷತ್ತಿನಲ್ಲಿ ಮಂಡನೆಯಾಗಲಿದೆ.

ಈ ಹಿನ್ನೆಲೆಯಲ್ಲಿ ಪ್ರತಿಕ್ರಿಯೆ ನೀಡಿರುವ ರಾಮ್ ಮಾಧವ್ ಅವರು, ಮಸೂದೆ ಯಾವುದನ್ನೂ ನಿಷೇಧಿಸುವುದಿಲ್ಲ. ಬಲ, ವಂಚನೆ ಅಥವಾ ಆಮಿಷದ ಮೂಲಕ ಮತಾಂತರಗಳನ್ನು ಮಾಡಿದರೆ, ಅಂತಹ ಮತಾಂತರಗಳನ್ನು ಒಪ್ಪಿಕೊಳ್ಳಲಾಗುವುದಿಲ್ಲ, ಬಲವಂತದ ಮತಾಂತರವನ್ನು ನಿಯಂತ್ರಿಸುವುದೇ ಕಾಯ್ದೆಯ ಉದ್ದೇಶವಾಗಿದೆ ಎಂದು ಹೇಳಿದ್ದಾರೆ.

ಕಾನೂನನ್ನು ಯಾವುದೇ ನಿರ್ದಿಷ್ಟ ಸಮುದಾಯದ ವಿರುದ್ಧವಲ್ಲದೆ, ಕೆಲವು ದುಷ್ಕೃತ್ಯಗಳ ವಿರುದ್ಧ ಮಾತ್ರ ಕಾಯ್ದೆಯನ್ನು ಜಾರಿಗೆ ತರಲಾಗುತ್ತಿದೆ. ಜನರನ್ನು ದಾರಿ ತಪ್ಪಿಸುವ ಅಥವಾ ಮತಾಂತರಗೊಳ್ಳಲು ಆಮಿಷಗಳನ್ನು ಬಳಸುವುದರ ವಿರುದ್ಧ ಕಾಯ್ದೆ ಜಾರಿಗೆ ತರಲಾಗುತ್ತಿದೆ.

ಮತಾಂತರವು ಕೌಟುಂಬಿಕ ಸಂಬಂಧಿತ ಉದ್ವಿಗ್ನತೆ ಮತ್ತು ಕೋಮು ಶಾಂತಿಗೆ ಭಂಗ ತರುವಂತಹ ಮೇಲಾಧಾರ ಪರಿಣಾಮಗಳಿಗೆ ಮತಾಂತರ ಕಾರಣವಾಗುವುದರಿಂದ ಕೆಲವನ್ನು ನಿಯಂತ್ರಿಸುವುದು ಈ ಕಾನೂನಿನ ಉದ್ದೇಶವಾಗಿದೆ. ಅದನ್ನು ಗಮನದಲ್ಲಿಟ್ಟುಕೊಂಡು, ಮಸೂದೆಯನ್ನು ಪ್ರಸ್ತಾಪಿಸಲಾಗಿದೆ. ಸದನದ ಮುಂದೆ ಕಾಯ್ದೆ ಇರಿಸಲಾಗಿದ್ದು, ಈ ನಿಟ್ಟಿನಲ್ಲಿ ನಿರ್ಧಾರ ಕೈಗೊಳ್ಳಳಾಗುತ್ತದೆ ಎಂದು ತಿಳಿಸಿದ್ದಾರೆ.

ಇದೇ ವೇಳೆ ಪೌರತ್ವ (ತಿದ್ದುಪಡಿ) ಕಾಯ್ದೆಯ ವಿರುದ್ಧದ ಪ್ರತಿಭಟನೆಗಳ ಕುರಿತು ಮಾತನಾಡಿ, ವಿವಾದಗಳನ್ನು ಸೃಷ್ಟಿಸಲು ಉದ್ದೇಶಪೂರ್ವಕವಾಗಿ ಪ್ರಚಾರಗಳ ನಡೆಸಲಾಗುತ್ತಿದೆ. ಯಾರೊಬ್ಬರ ಪೌರತ್ವವನ್ನು ಇಲ್ಲಿ ಕಸಿಯಲಾಗುವುದಿಲ್ಲ. ತಪ್ಪು ತಿಳುವಳಿಕೆಯನ್ನು ತೆರವುಗೊಳಿಸಲಾಗುವುದು ಮತ್ತು ಶೀಘ್ರದಲ್ಲೇ ಸರ್ಕಾರವು ಸಿಎಎಗೆ ನಿಯಮಗಳನ್ನು ತರಲಾಗುತ್ತದೆ ಎಂದಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com