ಶಿಕ್ಷಣದ ಗುಣಮಟ್ಟ ಹೆಚ್ಚಿಸಲು ತಂತ್ರಜ್ಞಾನ ಅತ್ಯಗತ್ಯ: ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್

ಪ್ರಸ್ತುತ ದಿನಗಳಲ್ಲಿ ಶಿಕ್ಷಣದ ಗುಣಮಟ್ಟವನ್ನು ಹೆಚ್ಚಿಸಲು ತಂತ್ರಜ್ಞಾನ ಅತ್ಯಗತ್ಯ. ಡಿಜಿಟಲ್ ಕಲಿಕಾ ಪರಿಕರಗಳ ಪರಿಣಾಮಕಾರಿ ಬಳಕೆಯಿಂದ ವಿದ್ಯಾರ್ಥಿಗಳು ತರಗತಿಗಳಲ್ಲಿ ತೊಡಗಿಸಿಕೊಳ್ಳುವಿಕೆ ಹೆಚ್ಚುತ್ತದೆ ಎಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅಭಿಪ್ರಾಯಪಟ್ಟಿದ್ದಾರೆ.
ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್
ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್

ಬೆಂಗಳೂರು: ಪ್ರಸ್ತುತ ದಿನಗಳಲ್ಲಿ ಶಿಕ್ಷಣದ ಗುಣಮಟ್ಟವನ್ನು ಹೆಚ್ಚಿಸಲು ತಂತ್ರಜ್ಞಾನ ಅತ್ಯಗತ್ಯ. ಡಿಜಿಟಲ್ ಕಲಿಕಾ ಪರಿಕರಗಳ ಪರಿಣಾಮಕಾರಿ ಬಳಕೆಯಿಂದ ವಿದ್ಯಾರ್ಥಿಗಳು ತರಗತಿಗಳಲ್ಲಿ ತೊಡಗಿಸಿಕೊಳ್ಳುವಿಕೆ ಹೆಚ್ಚುತ್ತದೆ ಎಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅಭಿಪ್ರಾಯಪಟ್ಟಿದ್ದಾರೆ.

ಚನ್ನೇನಹಳ್ಳಿಯಲ್ಲಿ ಜನಸೇವಾ ವಿಶ್ವಸ್ತ ಮಂಡಳಿ ವತಿಯಿಂದ ಭಾನುವಾರ ಆಯೋಜಿಸಿದ್ದ ಪೂರ್ಣದೆಡೆಗೆಗಿನ ಪಯಣ ಹೊಸ ಚರಣದಾರಂಭ '' ಪೂರ್ಣ ಮಂಡಲೋತ್ಸವ'' ಉದ್ಘಾಟಿಸಿ ಮಾತನಾಡಿದ ರಾಜ್ಯಪಾಲರು, ಮಕ್ಕಳು ಮತ್ತು ಯುವಜನರ ಭವಿಷ್ಯಕ್ಕೆ ಸರಿಯಾದ ಮಾರ್ಗ ರೂಪಿಸಲು ಗುಣಮಟ್ಟದ ಶಿಕ್ಷಣ ಉತ್ತೇಜಿಸುವುದು ಅವಶ್ಯಕ ಎಂದರು.

2030ರ ವೇಳೆಗೆ ಎಲ್ಲರನ್ನು ಒಳಗೊಳ್ಳುವ ಮತ್ತು ಸಮಾನ ಗುಣಮಟ್ಟದ ಶಿಕ್ಷಣಕ್ಕಾಗಿ ಅವಕಾಶಗಳನ್ನು ಉತ್ತೇಜಿಸುವ ಗುರಿಯನ್ನು ಭಾರತ ಹೊಂದಿದೆ. ಇದಕ್ಕೆ ಪೂರಕವಾಗಿ ರಾಷ್ಟ್ರೀಯ ಶಿಕ್ಷಣ ನೀತಿ 2020ನ್ನು ಜಾರಿಗೆ ತರಲಾಗಿದೆ. ಇದು 21ನೇ ಶತಮಾನದ  ಮೊದಲ ಶಿಕ್ಷಣ ನೀತಿಯಾಗಿದೆ. ಇಡೀ ದೇಶದಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಜಾರಿಗೆ ತಂದ ಮೊದಲ ರಾಜ್ಯ ಕರ್ನಾಟಕವಾಗಿದೆ ಎಂದು ತಿಳಿಸಿದರು.

ನಮ್ಮ ದೇಶ ಅಭಿವೃದ್ಧಿ ಹಂತದಲ್ಲಿದ್ದು, ಆಧುನಿಕ ಮತ್ತು ಭವಿಷ್ಯದ ಅವಶ್ಯಕತೆಗಳಿಗೆ ಅನುಗುಣವಾಗಿ ನಾವು ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಹೊಂದಿದ್ದೇವೆ. ಜನಸೇವಾ ಸಂಸ್ಥೆಯು ವಿದ್ಯಾರ್ಥಿಗಳಿಗೆ ಮಾನವೀಯ ಮೌಲ್ಯಗಲು ಮತ್ತು ವ್ಯಕ್ತಿತ್ವ ವಿಕಸನದ ಪೂರ್ಣ ಶಿಕ್ಷಣ ನೀಡಲು ಶ್ರದ್ದೆಯಿಂದ ಕಾರ್ಯನಿರ್ವಹಿಸುತ್ತಿದೆ ಎಂದು ರಾಜ್ಯಪಾಲರು ಮೆಚ್ಚುಗೆ ವ್ಯಕ್ತಪಡಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com