ರಾಜ್ಯದಲ್ಲಿ ಇಂದು ಕೊರೋನಾದಿಂದ ನಾಲ್ವರು ಸಾವು, ಬೆಂಗಳೂರಿನಲ್ಲಿ 172 ಸೇರಿ 289 ಮಂದಿಗೆ ಪಾಸಿಟಿವ್

ರಾಜ್ಯದಲ್ಲಿ ಕೊರೋನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆಯಲ್ಲಿ ಏರಿಳಿತ ಮುಂದುವರೆದಿದ್ದು, ಕಳೆದ 24 ಗಂಟೆಯಲ್ಲಿ 289 ಹೊಸ ಪಾಸಿಟಿವ್ ಪ್ರಕರಣಗಳು ವರದಿಯಾಗಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 30,04876ಕ್ಕೆ ಏರಿಕೆಯಾಗಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆಯಲ್ಲಿ ಏರಿಳಿತ ಮುಂದುವರೆದಿದ್ದು, ಕಳೆದ 24 ಗಂಟೆಯಲ್ಲಿ 289 ಹೊಸ ಪಾಸಿಟಿವ್ ಪ್ರಕರಣಗಳು ವರದಿಯಾಗಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 30,04876ಕ್ಕೆ ಏರಿಕೆಯಾಗಿದೆ.

ಇನ್ನೂ ರಾಜ್ಯದಲ್ಲಿ ಮಹಾಮಾರಿ ಕೊರೋನಾದಿಂದ ಇಂದು ನಾಲ್ವರು ಮೃತಪಟ್ಟಿದ್ದು, ಇದರೊಂದಿಗೆ ಸಾವಿನ ಸಂಖ್ಯೆ 38316ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

ಬೆಂಗಳೂರಿನಲ್ಲಿ ಇಂದು 172 ಮಂದಿಗೆ ಸೋಂಕು ದೃಢಪಟ್ಟಿದ್ದು, ಇದರೊಂದಿಗೆ ನಗರದಲ್ಲಿ ಸೋಂಕಿತರ ಸಂಖ್ಯೆ 12,61,728ಕ್ಕೆ ಏರಿಕೆಯಾಗಿದೆ. ಇಂದು ನಗರದಲ್ಲಿ ಕೊರೋನಾದಿಂದ ಇಬ್ಬರು ಮೃತಪಟ್ಟಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹೇಳಿದೆ.

ರಾಜ್ಯದಲ್ಲಿ ಇಂದು 254 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 29,59,082ಕ್ಕೆ ಏರಿಕೆಯಾಗಿದೆ. ಇನ್ನು 7449 ಸಕ್ರಿಯ ಪ್ರಕರಣಗಳಿವೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com