ಹಾವೇರಿ: ಸತ್ತ ಹಲ್ಲಿ ಬಿದ್ದ ಬಿಸಿಯೂಟ ಸೇವಿಸಿ 80 ಶಾಲಾ ಮಕ್ಕಳು ಅಸ್ವಸ್ಥ

ಸತ್ತ ಹಲ್ಲಿ ಬಿದ್ದ ಮಧ್ಯಾಹ್ನದ ಬಿಸಿಯೂಟ ಸೇವಿಸಿದ ಪ್ರಾಥಮಿಕ ಶಾಲೆಯ ಸುಮಾರು 80 ಮಕ್ಕಳು ಅಸ್ವಸ್ಥರಾಗಿರುವ ಘಟನೆ ಹಾವೇರಿ ಜಿಲ್ಲೆಯಲ್ಲಿ ನಡೆದಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಹಾವೇರಿ: ಸತ್ತ ಹಲ್ಲಿ ಬಿದ್ದ ಮಧ್ಯಾಹ್ನದ ಬಿಸಿಯೂಟ ಸೇವಿಸಿದ ಪ್ರಾಥಮಿಕ ಶಾಲೆಯ ಸುಮಾರು 80 ಮಕ್ಕಳು ಅಸ್ವಸ್ಥರಾಗಿರುವ ಘಟನೆ ಹಾವೇರಿ ಜಿಲ್ಲೆಯಲ್ಲಿ ನಡೆದಿದೆ.

ಸೋಮವಾರ ಈ ಘಟನೆ ನಡೆದಿದ್ದು, ಅಸ್ವಸ್ಥ ಮಕ್ಕಳನ್ನು ರಾಣಿಬೆನ್ನೂರಿನ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿತ್ತು ಎಂದು ಜಿಲ್ಲಾ ಆರೋಗ್ಯಾಧಿಕಾರಿ ತಿಳಿಸಿದ್ದಾರೆ. ಚಿಕಿತ್ಸೆ ನಂತರ ಮಕ್ಕಳು ಗುಣಮುಖರಾಗಿದ್ದು, ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಈ ಘಟನೆ ಬೆಳಕಿಗೆ ಬಂದ ನಂತರ ಶಾಲೆಯ ವಿರುದ್ದ ಕಠಿಣ ಕ್ರಮಕ್ಕೆ ಪೋಷಕರು ಆಗ್ರಹಿಸಿದ್ದಾರೆ. ಈ ಘಟನೆಗೆ ಶಾಲಾ ಆಡಳಿತ ಮಂಡಳಿಯ ನಿರ್ಲಕ್ಷ್ಯವೇ ಕಾರಣ ಎಂದು ಪೋಷಕರು ಆರೋಪಿಸಿದ್ದಾರೆ. ಈ ನಿರ್ಲಕ್ಷ್ಯಕ್ಕೆ ಶಾಲೆಯ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಜಿಲ್ಲಾಡಳಿತವು ಅಧಿಕಾರಿಗಳಿಗೆ ಸೂಚನೆ ನೀಡಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com