ಸರ್ಕಾರಿ ವಿದ್ಯಾರ್ಥಿವೇತನದ ನಿರೀಕ್ಷೆಯಲ್ಲಿ ಸಾವಿರಾರು ವಿದ್ಯಾರ್ಥಿಗಳು: ಕಾಲೇಜು ಶುಲ್ಕ ಪಾವತಿಸದ ವಿದ್ಯಾರ್ಥಿಗಳ ಮೇಲೆ ಶಿಕ್ಷಣ ಸಂಸ್ಥೆಗಳ ಒತ್ತಡ

ವಿದ್ಯಾರ್ಥಿವೇತನ ಪಾವರ್ತಿಯಾಗದೇ ಇರುವುದರಿಂದ ವಿದ್ಯಾರ್ಥಿಗಳು ಕಾಲೇಜು ಶುಲ್ಕವನ್ನು ಭರಿಸಿಲ್ಲ. ಇದರಿಂದಾಗಿ ಶಿಕ್ಷಣ ಸಂಸ್ಥೆಗಳು ವಿದ್ಯಾರ್ಥಿಗಳ ಅಂಕ ಪತ್ರಗಳನ್ನು ನೀಡಿಲ್ಲ,
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಬೆಂಗಳೂರು: ಸರ್ಕಾರದ ಕಡೆಯಿಂದ ಸಿಗಬೇಕಿದ್ದ ಸಾವಿರಾರು ವಿದ್ಯಾರ್ಥಿವೇತನದ ಅರ್ಜಿಗಳು ಬಾಕಿ ಉಳಿದುಕೊಂಡಿದ್ದು, ಈ ಬಗ್ಗೆ ಯಾವುದೇ ಮಾಹಿತಿ ಲಭ್ಯವಾಗದೆ ಇರುವುದರಿಂದ ವಿದ್ಯಾರ್ಥಿಗಳು ಆತಂಕದಲ್ಲಿದ್ದಾರೆ.

ವಿದ್ಯಾರ್ಥಿವೇತನ ಪಾವರ್ತಿಯಾಗದೇ ಇರುವುದರಿಂದ ವಿದ್ಯಾರ್ಥಿಗಳು ಕಾಲೇಜು ಶುಲ್ಕವನ್ನು ಭರಿಸಿಲ್ಲ. ಇದರಿಂದಾಗಿ ಶಿಕ್ಷಣ ಸಂಸ್ಥೆಗಳು ವಿದ್ಯಾರ್ಥಿಗಳ ಅಂಕ ಪತ್ರಗಳನ್ನು ನೀಡಿಲ್ಲ, ಅದಿಲ್ಲದೇ ವಿದ್ಯಾರ್ಥಿಗಳಿಗೆ ಉದ್ಯೋಗ ಸಂದರ್ಶನಗಳಿಗೆ ಹಾಜರಾಗಲು ಸಮಸ್ಯೆಯಾಗುತ್ತಿದೆ ಎಂದು ಮಾಜಿ ಸಚಿವ, ಎಂ ಎಲ್ ಎ ಡಾ.ಎಚ್.ಸಿ.ಮಹಾದೇವಪ್ಪ ಹೇಳಿದ್ದಾರೆ.

ವಿದ್ಯಾರ್ಥಿವೇತನ ಗೊಂದಲ ಕುರಿತಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಶಿಕ್ಷಣ ಸಚಿವ ಅಶ್ವತ್ಥ ನಾರಾಯಣ ಹಾಗೂ ಸಮಾಜ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರಿಗೆ ಮಹಾದೇವಪ್ಪ ಅವರು ಪತ್ರ ಬರೆದಿದ್ದು ಸಮಸ್ಯೆ ಬಗೆಹರಿಸುವಂತೆ ಒತ್ತಾಯಿಸಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com