ಡಿಸೆಂಬರ್ 31 ರಂದು ಕರ್ನಾಟಕ ಬಂದ್ ಕೈಬಿಡಲು ಸಿಎಂ ಮನವಿ

ಕನ್ನಡ ಸಂಘಟನೆಗಳು ಡಿಸೆಂಬರ್ 31 ರಂದು ಕರೆದಿರುವ ಕರ್ನಾಟಕ ಬಂದ್‍ನ್ನು ಕೈಬಿಡುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮನವಿ ಮಾಡಿದರು.
ಸಿಎಂ ಬೊಮ್ಮಾಯಿ
ಸಿಎಂ ಬೊಮ್ಮಾಯಿ

ಬೆಂಗಳೂರು: ಕನ್ನಡ ಸಂಘಟನೆಗಳು ಡಿಸೆಂಬರ್ 31 ರಂದು ಕರೆದಿರುವ ಕರ್ನಾಟಕ ಬಂದ್‍ನ್ನು ಕೈಬಿಡುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮನವಿ ಮಾಡಿದರು.

ಅವರು ಇಂದು ಹುಬ್ಬಳ್ಳಿಯಲ್ಲಿ ರಾಜ್ಯ ಬಿಜೆಪಿ ಕಾರ್ಯಕಾರಿಣಿ ಸಭೆ ಬಳಿಕ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದರು.

ಬೆಳಗಾವಿಯಲ್ಲಿ ಎಂಇಎಸ್ ಪುಂಡಾಟಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕನ್ನಡ ವಿರೋಧಿಗಳ ವಿರುದ್ಧ ಕಠಿಣ ಕ್ರಮವನ್ನು ತೆಗೆದುಕೊಳ್ಳಲಾಗಿದೆ. ಎಂಇಎಸ್ ಸಂಘಟನೆಯನ್ನು ನಿಷೇಧಿಸುವ ಬಗ್ಗೆ ಕಾನೂನು ಪರಿಶೀಲನೆ ಮಾಡಲಾಗುವುದು ಎಂದು ತಿಳಿಸಿದರು.

ಕರ್ನಾಟಕ ಬಂದ್‍ಗೆ ಕರೆ ಕೊಡುವುದು ಸೂಕ್ತವಲ್ಲ. ಬಂದ್ ಮಾಡುವುದು ಸಮಸ್ಯೆಗಳಿಗೆ ಉತ್ತರವಲ್ಲ. ಕೋವಿಡ್ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಬಂದ್ ಆಚರಣೆಯನ್ನು ಕೈಬಿಡಲು ಈ ಸಂದರ್ಭದಲ್ಲಿ ಮುಖ್ಯಮಂತ್ರಿಗಳು ಮನವಿ ಮಾಡಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com