ನೈಟ್ ಕರ್ಫ್ಯೂ: ಸರ್ಕಾರದ ನಿರ್ಧಾರಕ್ಕೆ ಸಿಟಿ ರವಿ ಅಸಮಾಧಾನ

ಕೊರೋನಾ  ರೂಪಾಂತರಿ ವೈರಸ್ ಓಮಿಕ್ರಾನ್ ಭೀತಿಯಿಂದಾಗಿ ರಾಜ್ಯದಲ್ಲಿ ಡಿ.28ರಿಂದ 10ದಿನಗಳ ಕಾಲ ನೈಟ್ ಕರ್ಫ್ಯೂ ಜಾರಿ ಮಾಡಲಾಗಿದ್ದು, ಸರ್ಕಾರ ದಿಢೀರ್ ನಿರ್ಧಾರಕ್ಕೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ.ರವಿಯವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಸಿಟಿ ರವಿ
ಸಿಟಿ ರವಿ
Updated on

ಬೆಂಗಳೂರು: ಕೊರೋನಾ  ರೂಪಾಂತರಿ ವೈರಸ್ ಓಮಿಕ್ರಾನ್ ಭೀತಿಯಿಂದಾಗಿ ರಾಜ್ಯದಲ್ಲಿ ಡಿ.28 ರಿಂದ 10 ದಿನಗಳ ಕಾಲ ನೈಟ್ ಕರ್ಫ್ಯೂ ಜಾರಿ ಮಾಡಲಾಗಿದ್ದು, ಸರ್ಕಾರ ದಿಢೀರ್ ನಿರ್ಧಾರಕ್ಕೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ.ರವಿಯವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು,  ಸರ್ಕಾರದ ನೈಟ್ ಕರ್ಫ್ಯೂ ಆದೇಶದ ಬಗ್ಗೆ ವ್ಯಾಖ್ಯಾನಿಸಲಾಗಲ್ಲ. ಸರಿ, ತಪ್ಪು ಎಂದು ನಾನು ವ್ಯಾಖ್ಯಾನ ಮಾಡುವುದಕ್ಕೆ ಆಗಲ್ಲ. ಓಮಿಕ್ರಾನ್​ಗೆ ಭಯಪಡಬೇಕಿಲ್ಲವೆಂದು ವಿಜ್ಞಾನಿಗಳೇ ಹೇಳಿದ್ದಾರೆ. ಮೂಗು ಇರುವವರಿಗೆ ನೆಗಡಿ ತಪ್ಪಿದ್ದಲ್ಲ. ನೆಗಡಿ ಬಂದರೆ ಆತಂಕ ಪಡಬೇಕಾದ ಅವಶ್ಯಕತೆ ಇಲ್ಲ. ರಾಜ್ಯ ಸರ್ಕಾರ ಜನರನ್ನ ಅನಗತ್ಯ ಭಯಕ್ಕೆ ಒಳಪಡಿಸಬಾರದು. ಸದ್ಯ ಜನಜೀವನ ಸಹಜ ಸ್ಥಿತಿಯಲ್ಲಿದೆ, ಆದರೆ ಎಚ್ಚರವಹಿಸಬೇಕು ಎಂದು ಹೇಳಿದರು.

ರಾಜ್ಯದಲ್ಲಿ ಮಂಗಳವಾರದಿಂದ ನೈಟ್ ಕರ್ಫ್ಯೂ ಜಾರಿಗೊಂಡಿದ್ದು, ಸುಮಾರು 10 ದಿನಗಳ ಕಾಲ ರಾತ್ರಿ ಹತ್ತು ಗಂಟೆಯಿಂದ ಬೆಳಿಗ್ಗೆ 5 ಗಂಟೆ ವರೆಗೆ ಕರ್ಫ್ಯೂ ಜಾರಿಯಲ್ಲಿರಲಿದೆ. ಸರ್ಕಾರದ ಈ ನಿರ್ಣಯ ಕುರಿತು ಇದೀಗ ರಾಜ್ಯದಲ್ಲಿ ಪರ-ವಿರೋಧದ ಚರ್ಚೆಗಳು ಆರಂಭಗೊಂಡಿವೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com