ಮಸೀದಿಗಳಲ್ಲಿ ಧ್ವನಿವರ್ಧಕ ತೆರವಿನಿಂದ ಮುಸ್ಲಿಂರ ಭಾವನೆಗಳಿಗೆ ಧಕ್ಕೆ: ಶಾಸಕ ಜಮೀರ್ ಅಹಮದ್ ಖಾನ್

ಮಸೀದಿಗಳಲ್ಲಿ ಧ್ವನಿ ವರ್ಧಕ  ತೆರವು ನಿಲ್ಲಿಸಿ, ಈ ಬಗ್ಗೆ ಮೂಡಿರುವ ಗೊಂದಲ ನಿವಾರಿಸುವಂತೆ  ಶಾಸಕ ಬಿ. ಝಡ್ ಜಮೀರ್ ಅಹಮದ್ ಖಾನ್ ಅವರು ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ಅವರಿಗೆ ಮನವಿ ಸಲ್ಲಿಸಿದ್ದಾರೆ. 
ಪ್ರವೀಣ್ ಸೂದ್ ಅವರಿಗೆ ಮನವಿ ಪತ್ರ ಸಲ್ಲಿಸಿದ ಶಾಸಕ ಜಮೀರ್ ಅಹಮದ್ ಖಾನ್
ಪ್ರವೀಣ್ ಸೂದ್ ಅವರಿಗೆ ಮನವಿ ಪತ್ರ ಸಲ್ಲಿಸಿದ ಶಾಸಕ ಜಮೀರ್ ಅಹಮದ್ ಖಾನ್

ಬೆಂಗಳೂರು: ಮಸೀದಿಗಳಲ್ಲಿ ಧ್ವನಿ ವರ್ಧಕ  ತೆರವು ನಿಲ್ಲಿಸಿ, ಈ ಬಗ್ಗೆ ಮೂಡಿರುವ ಗೊಂದಲ ನಿವಾರಿಸುವಂತೆ  ಶಾಸಕ ಬಿ. ಝಡ್ ಜಮೀರ್ ಅಹಮದ್ ಖಾನ್ ಅವರು ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ಅವರಿಗೆ ಮನವಿ ಸಲ್ಲಿಸಿದ್ದಾರೆ. 

ಈ ಕುರಿತು ಟ್ವೀಟ್ ಮಾಡಿರುವ ಜಮೀರ್ ಅಹ್ಮದ್ ಖಾನ್ ಟ್ಯಾಂಕ್ ಗಾರ್ಡನ್ ನ ಮಸೀದಿಯಿಂದ ಇತ್ತೀಚಿಗೆ ಕಾನೂನುಬಾಹಿರವಾಗಿ ಧ್ವನಿವರ್ಧಕಗಳನ್ನು ತೆರವುಗೊಳಿಸಲಾಗಿದೆ. ಇದರ ವಿರುದ್ಧ ಪ್ರವೀಣ್ ಸೂದ್ ಅವರಿಗೆ ಮನವಿ ಸಲ್ಲಿಸಿರುವುದಾಗಿ ತಿಳಿಸಿದ್ದಾರೆ.

ಇದರಿಂದ ಮುಸ್ಲಿಂರ ಭಾವನೆಗಳಿಗೆ ಧಕ್ಕೆಯಾಗಿದ್ದು, ಧ್ವನಿವರ್ಧಕಗಳನ್ನು ಮತ್ತೆ ಹಾಕಲು ಒತ್ತಾಯಿಸುವುದಾಗಿ ಟ್ವೀಟರ್ ನಲ್ಲಿ ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com