ಬೆಂಗಳೂರು: ಬೇಗೂರು ಬಳಿ ಜನರಲ್ಲಿ ಆತಂಕ ಸೃಷ್ಟಿಸಿದ್ದ ಚಿರತೆ ಸೆರೆ!
ಹಲವು ದಿನಗಳಿಂದ ಜನರಲ್ಲಿ ಆತಂಕ ಸೃಷ್ಟಿಸಿದ್ದ ಚಿರತೆಯನ್ನು ಸೆರೆ ಹಿಡಿಯುವಲ್ಲಿ ಕೊನೆಗೂ ಅರಣ್ಯ ಹಾಗೂ ಪೊಲೀಸ್ ಇಲಾಖೆ ಯಶಸ್ವಿಯಾಗಿದೆ. ಬೇಗೂರು ಗ್ರಾಮದಲ್ಲಿ ಕಳೆದ 9 ದಿನಗಳಿಂದ ಕಾರ್ಯಾಚರಣೆ ನಡೆಸಿ, ಚಿರತೆಯನ್ನು ಬೋನಿಗೆ ಬೀಳಿಸಲಾಗಿದ್ದು, ಜನತೆ ನಿಟ್ಟುಸಿರು ಬಿಟ್ಟಿದ್ದಾರೆ.
Published: 01st February 2021 02:42 PM | Last Updated: 01st February 2021 03:13 PM | A+A A-

ಸೆರೆ ಸಿಕ್ಕ ಚಿರತೆ
ಬೆಂಗಳೂರು: ಹಲವು ದಿನಗಳಿಂದ ಜನರಲ್ಲಿ ಆತಂಕ ಸೃಷ್ಟಿಸಿದ್ದ ಚಿರತೆಯನ್ನು ಸೆರೆ ಹಿಡಿಯುವಲ್ಲಿ ಕೊನೆಗೂ ಅರಣ್ಯ ಹಾಗೂ ಪೊಲೀಸ್ ಇಲಾಖೆ ಯಶಸ್ವಿಯಾಗಿದೆ. ಬೇಗೂರು ಗ್ರಾಮದಲ್ಲಿ ಕಳೆದ 9 ದಿನಗಳಿಂದ ಕಾರ್ಯಾಚರಣೆ ನಡೆಸಿ, ಚಿರತೆಯನ್ನು ಬೋನಿಗೆ ಬೀಳಿಸಲಾಗಿದ್ದು, ಜನತೆ ನಿಟ್ಟುಸಿರು ಬಿಟ್ಟಿದ್ದಾರೆ.
ಬೇಗೂರು ಸಮೀಪದ ಅಪಾರ್ಟ್ ಮೆಂಟ್ ವೊಂದರ ಬಳಿ ಇರಿಸಲಾಗಿದ್ದ ಬೋನಿಗೆ ಚಿರತೆ ಸಿಲುಕಿದೆ. ಈ ಚಿರತೆಯನ್ನು ಬನ್ನೇರುಘಟ್ಟ ಜೈವಿಕ ಉದ್ಯಾನವನಕ್ಕೆ ರವಾನಿಸಲು ಅರಣ್ಯ ಇಲಾಖೆ ಚಿಂತನೆ ನಡೆಸಿದೆ.
ಅಪಾರ್ಟ್'ಮೆಂಟ್ ಕಾಂಪ್ಲೆಕ್ಸ್ ವೊಂದರ ಬಳಿ ಚಿರತೆಯೊಂದು ರಸ್ತೆ ದಾಟುತ್ತಿರುವುದು ಸಿಸಿಟಿವಿ ದೃಶ್ಯಾವಳಿಗಳಲ್ಲಿ ಕಂಡು ಬಂದಿತ್ತು. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲೂ ಸಾಕಷ್ಟು ವೈರಲ್ ಆಗಿತ್ತು. ವಿಡಿಯೋ ಕಂಡ ಜನರು ಆತಂಕ ವ್ಯಕ್ತಪಡಿಸಿದ್ದರು.
ಸುದ್ದಿ ತಿಳಿಯುತ್ತಿದ್ದಂತೆಯೇ ಅರಣ್ಯ ಇಲಾಖೆ ಹಾಗೂ ಸ್ಥಳೀಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು, ಕಾರ್ಯಾಚರಣೆ ಆರಂಭಿಸಿದ್ದರು. ಕಳೆದ 9 ದಿನಗಳಿಂದ ಕಾರ್ಯಾಚರಣೆ ನಡೆಸಿ, ಕೊನೆಗೂ ಚಿರತೆ ಸೆರೆ ಹಿಡಿಯುವಲ್ಲಿ ಅರಣ್ಯ ಹಾಗೂ ಪೊಲೀಸ್ ಇಲಾಖೆ ಸಿಬ್ಬಂದಿ ಯಶಸ್ವಿಯಾಗಿದ್ದಾರೆ.
Karnataka: Forest department and Police captured a leopard spotted near an apartment complex in Begur, Bengaluru. pic.twitter.com/MWLoR2HBw1
— ANI (@ANI) February 1, 2021