
ವಿಧಾನಸಭೆ
ಬೆಂಗಳೂರು: ಹಣಕಾಸು ಸಂಸ್ಥೆಗಳಲ್ಲಿ ಠೇವಣಿದಾರರ ಹಿತರಕ್ಷಣೆ ತಿದ್ದುಪಡಿ ವಿದೇಯಕ ಸೇರಿ ಹಲವು ವಿಧೇಯಗಳಿಗೆ ಮಂಗಳವಾರ ವಿಧಾನಸಭೆಯಲ್ಲಿ ಅನುಮೋದನೆ ನೀಡಲಾಗಿದೆ.
ಮುಖ್ಯಮಂತ್ರಿಗಳ ಪರವಾಗಿ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಅವರು ಠೇವಣಿದಾರರ ಹಿತರಕ್ಷಣೆ ತಿದ್ದುಪಡಿ ವಿದೇಯಕವನ್ನು ಮಂಡಿಸಿದರು. ಬಳಿಕ ಮಸೂದೆಗೆ ಅನುಮೋದನೆ ದೊರೆಯಿತು.
ಕರ್ನಾಟಕ ಮೋಟಾರು ವಾಹನಗಳ ತೆರಿಗೆ ನಿರ್ದರಣೆ ತಿದ್ದುಪಡಿ ವಿದೇಯಕ, ಕರ್ನಾಟಕ ಸಾಂಕ್ರಾಮಿಕ ರೋಗಗಳ ತಿದ್ದುಪಡಿ ವಿಧೇಯಕವನ್ನು ವಿಧಾನ ಸಭೆಯಲ್ಲಿ ಮಂಡಿಸಿ ದ್ವನಿ ಮತದ ಒಪ್ಪಿಗೆ ಪಡೆಯಲಾಯಿತು.
ಉಪ ಮುಖ್ಯಮಂತ್ರಿ ಲಕ್ಷ್ಮಣ್ ಸವದಿ ಅವರು ಮೋಟಾರು ವಾಹನಗಳ ತೆರಿಗೆ ನಿರ್ದರಣೆ ತಿದ್ದುಪಡಿ ವಿಧೇಯಕ ಮತ್ತು ಆರೋಗ್ಯ ಸಚಿವ ಡಾ.ಸುಧಾಕರ್ ಅವರು ಸಾಂಕ್ರಾಮಿಕ ರೋಗಗಳ ವಿಧೇಯಕವನ್ನು ಮಂಡಿಸಿ ಅನುಮೋದನೆ ಪಡೆದರು.
ವಿಧೇಯಕವನ್ನು ಪ್ರಸ್ತಾಪಿಸಿ ಮಾತನಾಡಿದ ಆರೋಗ್ಯ ಸಚಿವ ಡಾ. ಕೆ ಸುಧಾಕರ್ ಅವರು, ಸಾಂಕ್ರಾಮಿಕ ರೋಗದ ವೇಳೆ ನಿಯಮಗಳನ್ನು ಉಲ್ಲಂಘನೆ ಮಾಡಿದವರ ವಿರುದ್ಧ ದಂಡ ವಿಧಿಸಲು ಸರ್ಕಾರಕ್ಕೆ ಅಧಿಕಾರ ನೀಡುವ ನಿಟ್ಟಿನಲ್ಲಿ ಈ ತಿದ್ದುಪಡಿಯನ್ನು ಮಾಡಲಾಗಿದೆ ಎಂದರು.
ಪಿಡಿಐ ಹಾಗೂ ಮುಖ್ಯಪೇದೆಗಿಂತ ಉನ್ನತ ಮಟ್ಟದ ಅಧಿಕಾರಿಗಳಿಗೆ ನ್ಯಾಯಾಲಯದ ಅನುಮತಿ ಪಡೆಯದೆ ದಂಡ ವಿಧಿಸುವ ಅಧಿಕಾರ ಈ ತಿದ್ದುಪಡಿ ಮೂಲಕ ನೀಡಿಲಾಗಿದೆ.
ಆದರೆ ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ವಿರೋಧ ಪಕ್ಷಗಳ ಕೆಲ ಸದಸ್ಯರು ಅಧಿಕಾರಿಗಳು ಈ ಅಧಿಕಾರವನ್ನು ದುರುಪಯೋಗ ಪಡಿಸಿಕೊಳ್ಳುವ ಸಾಧ್ಯತೆ ಇದೆ ಎಂದು ತಿಳಿಸಿದರು.