ಕೆಪಿಎಸ್‌ಸಿ: ಪ್ರಶ್ನೆ ಪತ್ರಿಕೆ ಸೋರಿಕೆಯಿಂದ ಮುಂದೂಡಿಕೆಯಾಗಿದ್ದ ಎಫ್‌ಡಿಎ ಪರೀಕ್ಷೆ ಮರು ದಿನಾಂಕ ಪ್ರಕಟ!

ಪ್ರಶ್ನೆ ಪತ್ರಿಕೆ ಸೋರಿಕೆಯಿಂದ ಮುಂದೂಡಲಾಗಿದ್ದ ಕರ್ನಾಟಕ ಲೋಕಸೇವಾ ಆಯೋಗ(ಕೆಪಿಎಸ್‌ಸಿ)ದ ಎಫ್‌ಡಿಎ ಪರೀಕ್ಷೆಯ ಮರು ದಿನಾಂಕ ಪ್ರಕಟವಾಗಿದೆ.

Published: 02nd February 2021 03:41 PM  |   Last Updated: 02nd February 2021 04:26 PM   |  A+A-


KPSC

ಕೆಪಿಎಸ್ ಸಿ

Posted By : Vishwanath S
Source : Online Desk

ಬೆಂಗಳೂರು: ಪ್ರಶ್ನೆ ಪತ್ರಿಕೆ ಸೋರಿಕೆಯಿಂದ ಮುಂದೂಡಲಾಗಿದ್ದ ಕರ್ನಾಟಕ ಲೋಕಸೇವಾ ಆಯೋಗ(ಕೆಪಿಎಸ್‌ಸಿ)ದ ಎಫ್‌ಡಿಎ ಪರೀಕ್ಷೆಯ ಮರು ದಿನಾಂಕ ಪ್ರಕಟವಾಗಿದೆ.

ಜನವರಿ 24ರಿಂದ ನಡೆಯಬೇಕಿತ್ತು. ಆದರೆ ಪ್ರಶ್ನೆ ಪತ್ರಿಕೆ ಸೋರಿಕೆಯಿಂದ ಪರೀಕ್ಷೆಯನ್ನು ಮುಂದೂಡಲಾಗಿತ್ತು. ಇದೀಗ ಫೆಬ್ರವರಿ 28ರಂದು ಪರೀಕ್ಷೆ ನಡೆಯಲಿದೆ ಎಂದು ಕೆಪಿಎಸ್‌ಸಿ ಕಾರ್ಯದರ್ಶಿ ಜಿ. ಸತ್ಯವತಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 

ರಾಜ್ಯದಾದ್ಯಂತ ಜನವರಿ 24 ನಡೆಯಬೇಕಿದ್ದ ಎಫ್‌ಡಿಎ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಸಂಗತಿಯನ್ನು ಸಿಸಿಬಿ ಪೊಲೀಸರು ಪತ್ತೆ ಮಾಡಿದ್ದರು. ಈ ಸಂಬಂಧ ಹಲವರನ್ನು ಸಿಸಿಬಿ ಬಂಧಿಸಿದೆ. ಬಂಧಿತರ ಪೈಕಿ ರಾಚಪ್ಪ, ಚಂದ್ರ ಎಂಬುವವರ ಮಾಹಿತಿ ಪತ್ತೆಯಾಗಿದೆ. ಇನ್ನು ಬಂಧಿತರಿಂದ ಪ್ರಶ್ನೆ ಪತ್ರಿಕೆಗಳು ಹಾಗೂ 24 ಲಕ್ಷ ರೂ ನಗದನ್ನು ಜಪ್ತಿ ಮಾಡಲಾಗಿತ್ತು.

Stay up to date on all the latest ರಾಜ್ಯ news
Poll
The grand Central Vista project is estimated to cost `20,000 crore

ಕೋವಿಡ್ ಬಿಕ್ಕಟ್ಟಿನ ದೃಷ್ಟಿಯಿಂದ ಪ್ರಧಾನಿ ಮೋದಿ ಸೆಂಟ್ರಲ್ ವಿಸ್ಟಾ ಯೋಜನೆಯನ್ನು ತಡೆಹಿಡಿಯಬೇಕೇ?


Result
ಹೌದು
ಬೇಡ
flipboard facebook twitter whatsapp