ಸಾರಿಗೆ ಇಲಾಖೆಗೆ ಆರ್ಥಿಕ ಸಂಕಷ್ಟದಲ್ಲಿದೆ: ಡಿಸಿಎಂ ಲಕ್ಷ್ಮಣ ಸವದಿ

ಕೋವಿಡ್ ಕಾರಣದಿಂದ ರಾಜ್ಯದಲ್ಲಿ ಸಾರಿಗೆ ಇಲಾಖೆಯು ಆರ್ಥಿಕ ಸಂಕಷ್ಟಕ್ಕೆ ಸಿಲುಕಿದೆ. ಸದ್ಯಕ್ಕೆ ಬರುತ್ತಿರುವ ಆದಾಯದಲ್ಲಿ ವಾಹನ ಇಂಧನ ಭರ್ತಿ ಮಾಡಲು ಸಾಧ್ಯವಾಗುತ್ತಿದೆ.

Published: 03rd February 2021 11:40 PM  |   Last Updated: 03rd February 2021 11:40 PM   |  A+A-


Karnataka Deputy Chief Minister Laxman Savadi was targeted by Marathi daily Saamna, a Shiv Sena mouthpiece

ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ

Posted By : Lingaraj Badiger
Source : UNI

ಬೆಂಗಳೂರು: ಕೋವಿಡ್ ಕಾರಣದಿಂದ ರಾಜ್ಯದಲ್ಲಿ ಸಾರಿಗೆ ಇಲಾಖೆಯು ಆರ್ಥಿಕ ಸಂಕಷ್ಟಕ್ಕೆ ಸಿಲುಕಿದೆ. ಸದ್ಯಕ್ಕೆ ಬರುತ್ತಿರುವ ಆದಾಯದಲ್ಲಿ ವಾಹನ ಇಂಧನ ಭರ್ತಿ ಮಾಡಲು ಸಾಧ್ಯವಾಗುತ್ತಿದೆ. ನೌಕರರಿಗೆ ಸಂಬಳ ನೀಡಲು ಆದಾಯ ಇಲ್ಲ. ಹೀಗಾಗಿ ವೇತನ ವಿಳಂಬವಾಗುತ್ತಿದೆ ಎಂದು ಉಪಮುಖ್ಯಮಂತ್ರಿ ಲಕ್ಷ್ಮಣ ಸಂಗಪ್ಪ ಸವದಿ ಬುಧವಾರ ವಿಧಾನ ಸಭೆಗೆ ತಿಳಿಸಿದರು.

ವಿಧಾನಸಭೆಯಲ್ಲಿ ನಡೆದ ಕಲಾಪದಲ್ಲಿ ಶಾಸಕ ಹೆಚ್.ಡಿ. ರೇವಣ್ಣ ಪರವಾಗಿ ಎ.ಟಿ. ರಾಮಸ್ವಾಮಿ ಅವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಸಾರಿಗೆ ಸಂಸ್ಥೆಯ 4 ನಿಗಮಗಳು ನಷ್ಟದಲ್ಲಿವೆ. ಸದ್ಯಕ್ಕೆ ನಮಗೆ ಬರುತ್ತಿರುವ ಆದಾಯದಲ್ಲಿ ವಾಹನಗಳಿಗೆ ಇಂಧನ ಭರ್ತಿ ಮಾಡಿಕೊಳ್ಳಬಹುದೇ ಹೊರತು ನೌಕರರಿಗೆ ಸಂಬಳ ನೀಡಲು ಸಾಧ್ಯವಿಲ್ಲ ಎಂದು ಇಲಾಖೆಯ ದುಸ್ಥಿತಿಯನ್ನು ಬಿಚ್ಚಿಟ್ಟರು.

ಕೆ.ಎಸ್.ಆರ್.ಟಿ.ಸಿ. ಪ್ರಾದೇಶಿಕ ಕಾರ್ಯಾಗಾರವನ್ನು ಅಭಿವೃದ್ಧಿಪಡಿಸುವ ಕಾಮಗಾರಿ ಕೆಲಸಗಳನ್ನು ಹಾಗೂ ನೂತನ ಯಂತ್ರೋಪಕರಣಗಳನ್ನು ಅಳವಡಿಸಲು ರೂ. 42 ಕೋಟಿ ರೂ ಅಂದಾಜು ಮಾಡಲಾಗಿದೆ. ಯಂತ್ರೋಪಕರನಗಳಿಗಾಗಿ ನಿಗದಿಪಡಿಸಿರುವ ಮೊತ್ತ ಹೊರತುಪಡಿಸಿ ಕಾಮಗಾರಿ ಕೆಲಸಗಳಿಗೆ 32 ಕೋಟಿಗಳಿಗೆ ಟೆಂಡರ್ ಆಹ್ವಾನಿಸಲಾಗಿದೆ ಎಂದರು.

ಪ್ರಸ್ತುತ ಸರ್ಕಾರದಿಂದ 10 ಕೋಟಿ ಅನುದಾನ ಬಿಡುಗಡೆಯಾಗಿದ್ದು, ಬಾಕಿ ಉಳಿದ ಅನುದಾನ ಬಿಡುಗಡೆಗೊಳಿಸಲು ಆರ್ಥಿಕ ಇಲಾಖೆಯನ್ನು ಕೋರಲಾಗಿದೆ, ಆ ಇಲಾಖೆಯು ಪ್ರಸಕ್ತ ಸಾಲಿನ ಆರ್ಥಿಕ ಪರಿಸ್ಥಿತಿಯು ಅನಿಶ್ಚಿತವಾಗಿದೆ ಎಂದರು.

ಯೋಜನಾ ವೆಚ್ಚವನ್ನು 10 ಕೋಟಿ ರೂ. ಗಳಿಗೆ ಸೀಮಿತಗೊಳಿಸಿ ಕಾಮಗಾರಿಯನ್ನು ಒಂದನೇ ಹಂತದದಲ್ಲಿಯೇ ಪೂರ್ಣಗೊಳಿಸಲು ಅಥವಾ ಉಳಿದ ಅನುದಾನವನ್ನು ನಿಗಮದ ಆಂತರಿಕ ಸಂಪನ್ಮೂಲದಿಂದ ಭರಿಸಿ ಉಳಿದ ಕಾಮಗಾರಿಯನ್ನು ಕೈಗೆತ್ತಿಕೊಳ್ಳಲು ಅಭಿಪ್ರಾಯ ನೀಡಿದೆ ಎಂದು ಡಿಸಿಎಂ ತಿಳಿಸಿದರು.

Stay up to date on all the latest ರಾಜ್ಯ news
Poll
Mamata_PM_Modi1

ಕೋವಿಡ್ ಉಲ್ಬಣದ ಕಾರಣ ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಮತ್ತು ಟಿಎಂಸಿ ಸಾಮೂಹಿಕ ಚುನಾವಣಾ ಪ್ರಚಾರವನ್ನು ಸ್ಥಗಿತಗೊಳಿಸಬೇಕೇ?


Result
ಹೌದು
ಬೇಡ
flipboard facebook twitter whatsapp