ಇಬ್ಬರು ನ್ಯಾಯಾಂಗ ಅಧಿಕಾರಿಗಳು, ಹಿರಿಯ ವಕೀಲರೊಬ್ಬರಿಗೆ ಪದೋನ್ನತಿ: ಜಡ್ಜ್ ಆಗಿ ನೇಮಿಸಲು ಕೊಲಿಜಿಯಂ ಅನುಮೋದನೆ

 ಇಬ್ಬರು ನ್ಯಾಯಾಂಗ ಅಧಿಕಾರಿಗಳು ಹಾಗೂ ಹಿರಿಯ ವಕೀಲರೊಬ್ಬರಿಗೆ ಪದೋನ್ನತಿ ನೀಡಿ  ಹೈಕೋರ್ಟ್‌ನ ನ್ಯಾಯಾಧೀಶರನ್ನಾಗಿ ನೇಮಿಸುವ ಪ್ರಸ್ತಾವಕ್ಕೆ ಸುಪ್ರೀಂ ಕೋರ್ಟ್ ಕೊಲಿಜಿಯಂ ಅನುಮೋದನೆ ನೀಡಿದೆ.

Published: 05th February 2021 04:56 PM  |   Last Updated: 05th February 2021 05:09 PM   |  A+A-


High_Court1

ಹೈಕೋರ್ಟ್

Posted By : Nagaraja AB
Source : The New Indian Express

ಬೆಂಗಳೂರು: ಇಬ್ಬರು ನ್ಯಾಯಾಂಗ ಅಧಿಕಾರಿಗಳು ಹಾಗೂ ಹಿರಿಯ ವಕೀಲರೊಬ್ಬರಿಗೆ ಪದೋನ್ನತಿ ನೀಡಿ  ಹೈಕೋರ್ಟ್‌ನ ನ್ಯಾಯಾಧೀಶರನ್ನಾಗಿ ನೇಮಿಸುವ ಪ್ರಸ್ತಾವಕ್ಕೆ ಸುಪ್ರೀಂ ಕೋರ್ಟ್ ಕೊಲಿಜಿಯಂ ಅನುಮೋದನೆ ನೀಡಿದೆ.

ಆದಿತ್ಯ ಸೋಂಧಿ ಹಿರಿಯ ವಕೀಲರಾಗಿದ್ದು, ರಾಜೇಂದ್ರ ಬಾದಾಮಿಕರ್ ಮತ್ತು ಖಾಜಿ ಜಯಬುನ್ನಿಸಾ ಮೊಹಿಯುದ್ದೀನ್ ನ್ಯಾಯಾಂಗ ಅಧಿಕಾರಿಗಳಾಗಿದ್ದಾರೆ. ಬಾದಾಮಿಕರ್ ಪ್ರಸ್ತುತ ಹೈಕೋರ್ಟ್‌ನ ರಿಜಿಸ್ಟ್ರಾರ್ ಜನರಲ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ.

ಶುಕ್ರವಾರ ನಡೆದ ಸಭೆಯಲ್ಲಿ ಈ ಪ್ರಸ್ತಾವಕ್ಕೆ ಕೊಲಿಜಿಯಂ ಅನುಮೋದನೆ ನೀಡಿದೆ. ಉಚ್ಚ ನ್ಯಾಯಾಲಯದಲ್ಲಿ 62 ನ್ಯಾಯಾಧೀಶರ ಬದಲಿಗೆ ಪ್ರಸ್ತುತ 46 ನ್ಯಾಯಾಧೀಶರು ಕಾರ್ಯನಿರ್ವಹಿಸುತ್ತಿದ್ದಾರೆ.

Stay up to date on all the latest ರಾಜ್ಯ news
Poll
Mamata1

ಪಶ್ಚಿಮ ಬಂಗಾಳ ಚುನಾವಣೆಯಲ್ಲಿ ಟಿಎಂಸಿ ಪಕ್ಷಕ್ಕೆ ಗೆಲುವು: ಮಮತಾ ಬ್ಯಾನರ್ಜಿ ಈಗ ಭಾರತದ ಪ್ರಬಲ ಪ್ರತಿಪಕ್ಷ ನಾಯಕಿಯೇ?


Result
ಹೌದು, ನಿರ್ವಿವಾದವಾಗಿ.
ಇಲ್ಲ, ಪ್ರಾದೇಶಿಕ ನಾಯಕಿ ಅಷ್ಟೇ.
flipboard facebook twitter whatsapp