ಕೃಷಿ ಕ್ಷೇತ್ರಕ್ಕೆ 1 ಲಕ್ಷ ಕೋಟಿ ರೂಪಾಯಿ ಹೂಡಿಕೆ: ಕೇಂದ್ರ ಸಚಿವ ಪ್ರಲ್ಹಾದ್ ಜೋಷಿ
ಮೂಲಸೌಕರ್ಯ ವೃದ್ಧಿ, ಆರೋಗ್ಯ ಮತ್ತು ಕೃಷಿ ಕ್ಷೇತ್ರಕ್ಕೆ ಹೆಚ್ಚಿನ ಆದ್ಯತೆ ಕೊಡುವ ಕೇಂದ್ರದ 2021ರ ಬಜೆಟ್ನಿಂಯದ ದೇಶವು ಪ್ರಗತಿಪಥದಲ್ಲಿ ಸಾಗಲಿದೆ ಎಂದು ಕೇಂದ್ರ ಸಂಸದೀಯ ವ್ಯವಹಾರ, ಕಲ್ಲಿದ್ದಲು ಮತ್ತು ಗಣಿ ಖಾತೆ ಸಚಿವ ಪ್ರಲ್ಹಾದ ಜೋಷಿ ವಿಶ್ವಾಸ ವ್ಯಕ್ತಪಡಿಸಿದರು.
Published: 06th February 2021 09:18 PM | Last Updated: 06th February 2021 09:18 PM | A+A A-

ಪ್ರಹ್ಲಾದ್ ಜೋಷಿ
ಬೆಂಗಳೂರು: ಮೂಲಸೌಕರ್ಯ ವೃದ್ಧಿ, ಆರೋಗ್ಯ ಮತ್ತು ಕೃಷಿ ಕ್ಷೇತ್ರಕ್ಕೆ ಹೆಚ್ಚಿನ ಆದ್ಯತೆ ಕೊಡುವ ಕೇಂದ್ರದ 2021ರ ಬಜೆಟ್ನಿಂಯದ ದೇಶವು ಪ್ರಗತಿಪಥದಲ್ಲಿ ಸಾಗಲಿದೆ ಎಂದು ಕೇಂದ್ರ ಸಂಸದೀಯ ವ್ಯವಹಾರ, ಕಲ್ಲಿದ್ದಲು ಮತ್ತು ಗಣಿ ಖಾತೆ ಸಚಿವ ಪ್ರಲ್ಹಾದ ಜೋಷಿ ವಿಶ್ವಾಸ ವ್ಯಕ್ತಪಡಿಸಿದರು.
ಇಲ್ಲಿನ ಮಲ್ಲೇಶ್ವರದ ಬಿಜೆಪಿ ಕಾರ್ಯಾಲಯ 'ಜಗನ್ನಾಥ ಭವನ'ದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಕ್ಷೇತ್ರಗಳಿಗೆ ಹೆಚ್ಚಿನ ಆದ್ಯತೆ ನೀಡುವುದರಿಂದ ಆಂತರಿಕವಾಗಿ ಉದ್ಯೋಗಾವಕಾಶಗಳೂ ವೃದ್ಧಿಸಲಿವೆ. ದೇಶದ ಆರ್ಥಿಕತೆಯನ್ನು 2025ರ ವೇಳೆಗೆ 5 ಲಕ್ಷ ಕೋಟಿ ಡಾಲರ್ಗೇವರಿಸುವ ಮೂಲಕ ವಿಶ್ವದ ಪ್ರಮುಖ ರಾಷ್ಟ್ರವನ್ನಾಗಿ ಮಾಡಲಾಗುವುದು ಎಂದು ತಿಳಿಸಿದರು.
ಕೃಷಿ ಕ್ಷೇತ್ರಕ್ಕೆ 1 ಲಕ್ಷ ಕೋಟಿ ರೂಪಾಯಿ ಹೂಡಿಕೆ ಮಾಡಲಾಗುವುದು. ಆರೋಗ್ಯ ಕ್ಷೇತ್ರಕ್ಕೆ ಹಿಂದಿನ 94 ಸಾವಿರ ಕೋಟಿ ಬದಲಾಗಿ ಈ ಬಾರಿ 2,23,000 ಕೋಟಿ ರೂಪಾಯಿ ವಿನಿಯೋಗಿಸಲಾಗುವುದು. 17,788 ಗ್ರಾಮೀಣ ಮತ್ತು 11,024 ನಗರ ಆರೋಗ್ಯ ಮತ್ತು ಕಲ್ಯಾಣ ಕೇಂದ್ರಗಳನ್ನು ಮೇಲ್ದರ್ಜೆಗೆ ಏರಿಸಲಾಗುತ್ತಿದೆ. ಇದಕ್ಕಾಗಿ ಪ್ರಧಾನಮಂತ್ರಿ ಆತ್ಮನಿರ್ಭರ ಸ್ವಸ್ಥ ಭಾರತ ಯೋಜನೆಯ ಮೂಲಕ ನೆರವಾಗಲು ಮುಂದಾಗಿದ್ದೇವೆ ಎಂದು ಅವರು ವಿವರಿಸಿದರು.