ಬೆಳಗಾವಿ: 12 ದಿನಗಳ ಹಿಂದೆ ಕೋವಿಡ್ ಲಸಿಕೆ ಪಡೆದಿದ್ದ ಆಶಾ ಕಾರ್ಯಕರ್ತೆ ಸಾವು

ಕೋವಿಡ್ ಲಸಿಕೆ ಪಡೆದಿದ್ದ ಚಿಕ್ಕೋಡಿ ತಾಲೂಕಿನ ಗಳತಗಾ ಗ್ರಾಮದ ಆಶಾ ಕಾರ್ಯಕರ್ತೆಯೊಬ್ಬರು ಮೃತಪಟ್ಟಿದ್ದಾರೆ‌.

Published: 06th February 2021 12:56 PM  |   Last Updated: 06th February 2021 01:13 PM   |  A+A-


Representational image

ಸಾಂದರ್ಭಿಕ ಚಿತ್ರ

Posted By : Shilpa D
Source : Online Desk

ಬೆಳಗಾವಿ: ಕೋವಿಡ್ ಲಸಿಕೆ ಪಡೆದಿದ್ದ ಚಿಕ್ಕೋಡಿ ತಾಲೂಕಿನ ಗಳತಗಾ ಗ್ರಾಮದ ಆಶಾ ಕಾರ್ಯಕರ್ತೆಯೊಬ್ಬರು ಮೃತಪಟ್ಟಿದ್ದಾರೆ‌. 

ಅವರು ಜನವರಿ 22ರಂದು ಕೋವಿಶೀಲ್ಡ್ ಲಸಿಕೆ ಪಡೆದಿದ್ದರು. ಹಲವು ದಿನಗಳ ನಂತರ ಅಂದರೆ ಅವರಿಗೆ ಜ. 30ರಂದು ಪದೇ ಪದೇ ವಾಂತಿಯಾಗಿದೆ. ಬಹಳ ತಲೆನೋವು ಕೂಡ ಬಂದಿತ್ತು. ಚಿಕಿತ್ಸೆಗಾಗಿ ಅವರು ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದರು. 

ಮರುದಿನ ಅವರಿಗೆ ಪಾರ್ಶ್ವವಾಯು ಕೂಡ ಆಗಿತ್ತು. ಹೆಚ್ಚಿನ ಚಿಕಿತ್ಸೆಗಾಗಿ ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ಫೆ.3ರಂದು ಮೃತರಾಗಿದ್ದಾರೆ.

ಮಿದುಳಿನಲ್ಲಿ ರಕ್ತಸಂಚಾರ ಸಮರ್ಪಕವಾಗಿಲ್ಲದ ಕಾರಣ ಅವರು ಮೃತರಾಗಿದ್ದಾರೆ ಎನ್ನುವುದು ವೈದ್ಯಕೀಯ ವರದಿಯಿಂದ ತಿಳಿದುಬಂದಿದೆ’ ಎಂದು ಡಿಎಚ್‌ಒ ಡಾ. ಎಸ್.ವಿ. ಮುನ್ಯಾಳ ಸ್ಪಷ್ಟಪಡಿಸಿದ್ದಾರೆ.

ಅವರಿಗೆ ಪದೇ ಪದೆ ತಲೆನೋವು ಕಾಣಿಸಿಕೊಳ್ಳುತ್ತಿತ್ತು. ಮಾತ್ರೆ ತೆಗೆದುಕೊಳ್ಳುತ್ತಿದ್ದರು ಎಂದು ಕುಟುಂಬದವರು ಕೂಡ ತಿಳಿಸಿದ್ದಾರೆ. ಅವರ ಸಾವು ಕೋವಿಡ್ ಲಸಿಕೆಯಿಂದ ಆಗಿಲ್ಲ ಎಂದು ಇಲಾಖೆಯ ಕೇಂದ್ರ ಕಚೇರಿಗೆ ವರದಿ ಸಲ್ಲಿಸಲಾಗಿದೆ’ ಎಂದು ಡಿಎಚ್‌ಒ ಡಾ.ಎಸ್.ವಿ. ಮುನ್ಯಾಳ ತಿಳಿಸಿದ್ದಾರೆ.

Stay up to date on all the latest ರಾಜ್ಯ news
Poll
Mamata_PM_Modi1

ಕೋವಿಡ್ ಉಲ್ಬಣದ ಕಾರಣ ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಮತ್ತು ಟಿಎಂಸಿ ಸಾಮೂಹಿಕ ಚುನಾವಣಾ ಪ್ರಚಾರವನ್ನು ಸ್ಥಗಿತಗೊಳಿಸಬೇಕೇ?


Result
ಹೌದು
ಬೇಡ
flipboard facebook twitter whatsapp