ಅಯೋಧ್ಯೆ ರಾಮ ಮಂದಿರ ನಿರ್ಮಾಣಕ್ಕೆ ಕ್ರೈಸ್ತ ಸಮುದಾಯದಿಂದ 1 ಕೋಟಿ ದೇಣಿಗೆ

ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕೆ ರಾಜ್ಯದ ಕ್ರೈಸ್ತ ಸಮುದಾಯದ ಉದ್ಯಮಿಗಳು, ಶಿಕ್ಷಣ ತಜ್ಞರು ಕೈಜೋಡಿಸಿದ್ದು, ಒಂದು ಕೋಟಿ ರೂಪಾಯಿಗೂ ಹೆಚ್ಚು ದೇಣಿಗೆ ನೀಡಿದ್ದಾರೆ.

Published: 07th February 2021 05:17 PM  |   Last Updated: 07th February 2021 05:17 PM   |  A+A-


ಸಿ.ಎನ್.ಅಶ್ವತ್ಥನಾರಾಯಣ

Posted By : Raghavendra Adiga
Source : UNI

ಬೆಂಗಳೂರು: ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕೆ ರಾಜ್ಯದ ಕ್ರೈಸ್ತ ಸಮುದಾಯದ ಉದ್ಯಮಿಗಳು, ಶಿಕ್ಷಣ ತಜ್ಞರು ಕೈಜೋಡಿಸಿದ್ದು, ಒಂದು ಕೋಟಿ ರೂಪಾಯಿಗೂ ಹೆಚ್ಚು ದೇಣಿಗೆ ನೀಡಿದ್ದಾರೆ.

ಬೆಂಗಳೂರಿನಲ್ಲಿ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಅವರು ಆಯೋಜಿಸಿದ್ದ ಸಭೆಯಲ್ಲಿ ಕ್ರೈಸ್ತ ಸಮುದಾಯದ ಉದ್ಯಮಿಗಳು, ಶಿಕ್ಷಣ ತಜ್ಞರು, ಅನಿವಾಸಿ ಭಾರತೀಯರು, ಸಿಇಒಗಳು, ಮಾರ್ಕೆಟಿಂಗ್ ತಜ್ಞರು, ಸಮಾಜ ಸೇವಕರು, ಸಮುದಾಯದ ಮುಖಂಡರು ಭಾಗಿಯಾಗಿದ್ದರು. ಮಂದಿರ ನಿರ್ಮಾಣಕ್ಕೆ ತಮ್ಮ ಕೈಲಾದ ಅಳಿಲು ಸೇವೆ ಮಾಡುವುದಾಗಿ ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಡಿಸಿಎಂ .ಸಿ.ಎನ್.ಅಶ್ವತ್ಥನಾರಾಯಣ ಬಿಜೆಪಿ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರು ಅಲ್ಪಸಂಖ್ಯಾತ ಸಮುದಾಯಗಳಿಗೆ ವಿರುದ್ಧ ಎನ್ನುವುದು ತಪ್ಪು . 'ಸಬ್ ಕಾ ಸಾಥ್, ಸಬ್ ಕಾ ವಿಕಾಸ್, ಸಬ್ ಕಾ ವಿಶ್ವಾಸ್' ಬಿಜೆಪಿಯ ಮಂತ್ರ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ ಎಂದರು.

ಕ್ರೈಸ್ತ ಸಮುದಾಯದ ಪರವಾಗಿ ಎನ್‌ಆರ್‌ಐ ಉದ್ಯಮಿ ರೊನಾಲ್ಡ್ ಕೊಲಾಕೊ ಮಾತನಾಡಿ  , "ನಮ್ಮ ಸಮುದಾಯವು ದೇಣಿಗೆ ನೀಡುತ್ತಿರುವುದು ಇದೇ ಮೊದಲಲ್ಲ, ದೇಶದ ವಿಷಯಗಳಲ್ಲಿ ನಾವು ಯಾವಾಗಲೂ ಬೆಂಬಲ ನೀಡುತ್ತೇವೆ" ಎಂದು ಹೇಳಿದರು.

Stay up to date on all the latest ರಾಜ್ಯ news
Poll
The grand Central Vista project is estimated to cost `20,000 crore

ಕೋವಿಡ್ ಬಿಕ್ಕಟ್ಟಿನ ದೃಷ್ಟಿಯಿಂದ ಪ್ರಧಾನಿ ಮೋದಿ ಸೆಂಟ್ರಲ್ ವಿಸ್ಟಾ ಯೋಜನೆಯನ್ನು ತಡೆಹಿಡಿಯಬೇಕೇ?


Result
ಹೌದು
ಬೇಡ
flipboard facebook twitter whatsapp