ರಾಮನಗರ: 14 ವರ್ಷ ಕಳೆದರೂ ಆರೋಗ್ಯ ವಿವಿ ನಿರ್ಮಾಣ ಕಾರ್ಯಾರಂಭಕ್ಕೆ ಇನ್ನೂ ಮೀನಾಮೇಷ!

ರಾಜೀವ್ ಗಾಂಧಿ ಆರೋಗ್ಯ ವಿಶ್ವವಿದ್ಯಾಲಯದ ಕನಸು 14 ವರ್ಷ ಕಳೆದರೂ ಕನಸಾಗಿಯೇ ಉಳಿದಿದೆ ಎಂದು ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯದ (ಆರ್‌ಜಿಯುಹೆಚ್ಎಸ್) ಪ್ರಾಧ್ಯಾಪಕರೊಬ್ಬರು ಬೇಸರ ವ್ಯಕ್ತಪಡಿಸಿದ್ದಾರೆ.

Published: 11th February 2021 08:49 AM  |   Last Updated: 11th February 2021 01:22 PM   |  A+A-


Deputy Chief Minister C N Ashwath Narayan inspects the land where an RGUHS campus has been planned to come up in Ramanagara on Wednesday

ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ ಸ್ಥಾಪಿಸಲು ಉದ್ದೇಶಿಸಿರುವ ಅರ್ಚಕರಹಳ್ಳಿಯಲ್ಲಿನ ಜಾಗವನ್ನು ಡಿಸಿಎಂ ಅಶ್ವತ್ಥ್ ನಾರಾಯಣ ಬುಧವಾರ ವೀಕ್ಷಿಸಿದರು.

Posted By : Manjula VN
Source : The New Indian Express

ರಾಮನಗರ: ರಾಜೀವ್ ಗಾಂಧಿ ಆರೋಗ್ಯ ವಿಶ್ವವಿದ್ಯಾಲಯದ ಕನಸು 14 ವರ್ಷ ಕಳೆದರೂ ಕನಸಾಗಿಯೇ ಉಳಿದಿದೆ ಎಂದು ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯದ (ಆರ್‌ಜಿಯುಹೆಚ್ಎಸ್) ಪ್ರಾಧ್ಯಾಪಕರೊಬ್ಬರು ಬೇಸರ ವ್ಯಕ್ತಪಡಿಸಿದ್ದಾರೆ.

ವಿಶ್ವವಿದ್ಯಾಲಯದ ನಿರ್ಮಾಣ ಕಾರ್ಯ ಆರಂಭವಾದ ಮೇಲೆ ರಾಜ್ಯದಲ್ಲಿ ಐದು ಸರ್ಕಾರಗಳು ಬದಲಾದ್ವು. ನಾಲ್ಕು ಸರ್ಕಾರಗಳು ವಿವಿ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರೆವೇರಿಸಿದ್ವು. ಆದರೆ ಕಳೆದ 14 ವರ್ಷಗಳಿಂದ ಕನಸಾಗಿದ್ದ ವಿಶ್ವವಿದ್ಯಾಲಯ ಕನಸಾಗಿಯೇ ಉಳಿದಿದೆ. ಅಧಿಕಾರಕ್ಕೆ ಬಂದ ಎಲ್ಲ ಸರ್ಕಾರಗಳು ಕೇವಲ ಆಶ್ವಾಸನೆಗಳಲ್ಲೇ ದಿನದೂಡಿವೆ.

ರಾಮನಗರದ ಅರ್ಚಕರಹಳ್ಳಿ ಗ್ರಾಮದ ಬಳಿ ರಾಜೀವ್ ಗಾಂಧಿ ಆರೋಗ್ಯ ವಿವಿ ನಿರ್ಮಾಣಕ್ಕೆ 2006-07 ರಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಸಮ್ಮಿಶ್ರ ಸರ್ಕಾರದಲ್ಲಿ ಸಿಎಂ ಆಗಿದ್ದ ಹೆಚ್.ಡಿ.ಕುಮಾರಸ್ವಾಮಿ ಚಾಲನೆ ನೀಡಿದ್ದರು. ರಾಮನಗರದ ಅರ್ಚಕರಹಳ್ಳಿ ಬಳಿ ೨೧೬.೧೬ ಎಕರೆ ವಿಸ್ತೀರ್ಣದಲ್ಲಿ ಆರೋಗ್ಯ ವಿಶ್ವ ವಿದ್ಯಾಲಯ ಮತ್ತು ಸೂಪರ್ ಸ್ಪೇಷಾಲಿಟಿ ಆಸ್ಪತ್ರೆ ನಿರ್ಮಾಣ ಯೋಜನೆ ಘೊಷಣೆ ಮಾಡಿದ್ದರು. ಇದಕ್ಕಾಗಿ ಬಜೆಟ್‌ನಲ್ಲಿ 330 ಕೋಟಿ ರೂ. ಹಣ ಮಂಜೂರು ಮಾಡಿ ಟೆಂಡರ್ ಪ್ರಕ್ರಿಯೆ ಪೂರ್ಣಗೊಳಿಸಿದ್ದರು.

 ಈ ಯೋಜನೆಯಂತೆ ಇಲ್ಲಿ ಆಡಳಿತ ಭವನ, ವೈಧ್ಯಕೀಯ, ದಂತ, ನರ್ಸಿಂಗ್ ಕಾಲೇಜುಗಳು, 750 ಹಾಸಿಗೆ ಸಾಮರ್ಥ್ಯದ ಸುಸಜ್ಜಿತ ಆಸ್ಪತ್ರೆ ಮತ್ತು 250 ಹಾಸಿಗೆಯ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ, ವಿದ್ಯಾರ್ಥಿನಿಲಯ, ವಸತಿ ಗೃಹಗಳು ಸೇರಿದಂತೆ 12 ಬೃಹತ್ ಕಟ್ಟಡಗಳನ್ನ ಕಟ್ಟಬೇಕು. ಈ ಯೋಜನೆ ಜಾರಿಯಿಂದ ಹಳೇ ಮೈಸೂರು ಭಾಗದ ರಾಮನಗರ, ಮಂಡ್ಯ, ಮೈಸೂರು, ಚಾಮರಾಜನಗರ ಸೇರಿದಂತೆ ಹಲವು ಜಿಲ್ಲೆಗಳ ಜನತೆಗೆ ಅನುಕೂಲವಾಗಲಿದೆ ಎನ್ನುವುದು ಲೆಕ್ಕಾಚಾರವಾಗಿತ್ತು.

 ಮೊದಲಿಗೆ 2006ರಲ್ಲಿ ಹೆಚ್.ಡಿ.ಕುಮಾರಸ್ವಾಮಿ ಚಾಲನೆ ನೀಡಿದ್ದರು. ಬಳಿಕ ಬಿ.ಎಸ್.ಯಡಿಯೂರಪ್ಪ ಚಾಲನೆ ನೀಡಿದ್ದರು. ಇದಾದ ಬಳಿಕ ಅಧಿಕಾರಕ್ಕೆ ಬಂದ ಸಿದ್ದರಾಮಯ್ಯ ಅವರು ಇನ್ನೇನು ವಿಶ್ವವಿದ್ಯಾಲಯ ಕೆಲವೇ ದಿನಗಳಲ್ಲಿ ಕಾರ್ಯ ಮಾಡಲಿದೆ ಎಂದು ಭರವಸೆ ನೀಡಿದ್ದರು. ಮತ್ತೆ ಅಧಿಕಾರಕ್ಕೆ ಬಂದ ಜೆಡಿಎಸ್-ಕಾಂಗ್ರೆಸ್ ಸಮ್ಮಿಶ್ರ ಸರ್ಕಾರದಲ್ಲಿ ವಿವಿ ಕಾರ್ಯಾರಂಭ ಪಕ್ಕಾ ಎಂದು ಹೇಳಲಾಗುತ್ತಿತ್ತು. ಆದರೆ ವಿವಿ ಮಾತ್ರ ಪೇಪರ್‌ ಟೈಗರ್‌ ಆಗಿಯೇ ಉಳಿಯಿತು.

ವಿವಿ ಸ್ಥಾಪನೆಗೆ ಬೆಂಗಳೂರಿನಲ್ಲಿ ಭೂಮಿ ಹುಡುಕಲು ಸರ್ಕಾರ ಮುಂದಾಗಿತ್ತು. ಆದರೆ, ಅದು ಸಾಧ್ಯವಾಗಲಿಲ್ಲ. ನಂತರ 2007ರಲ್ಲಿ ಕುಮಾರಸ್ವಾಮಿ ಸರ್ಕಾರ ಆರ್‌ಜಿಯುಎಚ್‌ಎಸ್ ಕಾಯ್ದೆಗೆ ತಿದ್ದುಪಡಿ ತಂದು ಕ್ಯಾಂಪಸ್ ಅನ್ನು ರಾಮನಗರಕ್ಕೆ ಸ್ಥಳಾಂತರಿಸಲು ನಿರ್ಧರಿಸಲಾಯಿತು. ಇದಕ್ಕಾಗಿ ಭೂಮಿಯನ್ನು ಕೂಡ ಗುರುತಿಸಲಾಗಿತ್ತು, ಇದಾಗಿ 14 ವರ್ಷಗಳು ಕಳೆದರೂ ವಿವಿ ಸ್ಥಾಪನೆ ಕನಸು ಕನಸಾಗಿಯೇ ಉಳಿದಿವೆ ಎಂದು ಪ್ರಾಧ್ಯಾಪಕರೊಬ್ಬರು ಬೇಸರ ವ್ಯಕ್ತಪಡಿಸಿದ್ದಾರೆ.

ಭೂಮಿ ನೀಡಲು ರೈತರು ವಿರೋಧ ವ್ಯಕ್ತಪಡಿಸಿ ನ್ಯಾಯಾಲಯದ ಮೆಟ್ಟಿಲೇರಿದ್ದರಿಂದಾಗಿ ವಿವಿ ಸ್ಥಾಪನೆ ಸಾಧ್ಯವಾಗಲಿಲ್ಲ ಎಂದು ಆರ್‌ಜಿಯುಎಚ್‌ಎಸ್ ಉಪಕುಲಪತಿ ಡಾ.ಎಸ್.ಸಚಿದಾನಂದ ಅವರು ಸ್ಪಷ್ಟಪಡಿಸಿದ್ದಾರೆ.

2015 ರವರೆಗೆ ವಿಶ್ವವಿದ್ಯಾಲಯದ ಕ್ಯಾಂಪಸ್‌ಗಾಗಿ ಸ್ವಾಧೀನಪಡಿಸಿಕೊಂಡ ಭೂಮಿಯಲ್ಲಿ ಬಾಕಿ ಇರುವ ಎಲ್ಲಾ ದಾವೆಗಳನ್ನು ಸುಪ್ರೀಂ ಕೋರ್ಟ್ ತೆರವುಗೊಳಿಸಿತ್ತು. ಆದರೆ, ರೈತರು ಮತ್ತೆ ಹೆಚ್ಚಿನ ಪರಿಹಾರ ಬೇಕೆಂದು ನ್ಯಾಯಾಲಯದ ಮೊರೆ ಹೋದರು. ಇದರಿಂದಾಗಿ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳಲು ವಿಳಂಬವಾಯಿತು ಎಂದು ಹೇಳಿದ್ದಾರೆ.

ಕುತೂಹಲಕಾರಿ ವಿಚಾರವೆಂದರೆ, ಆಗಿನ ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರು ವಿಶ್ವವಿದ್ಯಾಲಯವನ್ನು ರಾಮನಗರಕ್ಕೆ ಸ್ಥಳಾಂತರಿಸುವ ಪ್ರಕ್ರಿಯೆಯನ್ನು ಪುನರಾರಂಭಿಸಲು ತೀವ್ರ ಆಸಕ್ತಿ ತೋರಿಸಿದ್ದರು. ಈ ವೇಳೆ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ನಿರ್ಮಾಣಕ್ಕಾಗಿ 2007 ರ ಟೆಂಡರ್ ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 500 ಕೋಟಿ ರೂ ಬಿಡುಗಡೆ ಮಾಡಿದ್ದರು. ಆದರೆ, ವಿಶ್ವವಿದ್ಯಾನಿಲಯದ ಸಿಂಡಿಕೇಟ್ ಸದಸ್ಯರು ಅನುದಾನ ಬಿಡುಗಡೆ ಮಾಡಲು ಸಿದ್ಧರಿರಲಿಲ್ಲ. ಈ ನಡುವಲ್ಲೇ ರೈತರು ಕೂಡ ಹೆಚ್ಚಿನ ಪರಿಹಾರಕ್ಕಾಗಿ ಆಗ್ರಹಿಸಿದ್ದು, ನಿರ್ಮಾಣ ಕಾರ್ಯಕ್ಕೆ ತಡೆಯುಂಟು ಮಾಡಿತ್ತು ಎಂದು ವರದಿಗಳು ತಿಳಿಸಿವೆ.

ಇದೀಗ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಸ್ತಿತ್ವದಲ್ಲಿದ್ದು, ಉಪ ಮುಖ್ಯಮಂತ್ರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಅಶ್ವತ್ಥ್ ನಾರಾಯಣ್ ಅವರು ಕಳೆದ ಆರು ತಿಂಗಳಿನಿಂದಲೂ ವಿವಿ ಬಗ್ಗೆ ಮಾತನಾಡುತ್ತಲೇ ಇದ್ದಾರೆ. ಇದರಂತೆ ನಿನ್ನೆಯಷ್ಟೇ ಅರ್ಚಕನಹಳ್ಳಿಯಲ್ಲಿ ಸ್ಥಳ ಪರಿಶೀಲನೆ ಮಾಡಿರುವ ಅವರು, ಶೀಘ್ರದಲ್ಲಿಯೇ ನಿರ್ಮಾಣ ಕಾರ್ಯ ಆರಂಭಿಸುವ ಭರವಸೆ ನೀಡಿದ್ದಾರೆ.

ಲಭ್ಯವಿರುವ ಜಾಗದಲ್ಲಿಯೇ ಆಡಳಿತಾತ್ಮಕ ಮಂಜೂರಾತಿ ಪಡೆದು ಕೂಡಲೇ ನಿರ್ಮಾಣ ಕೆಲಸಗಳನ್ನು ಆರಂಭಿಸುವಂತೆ ರಾಜೀವ್ ಗಾಂಧಿ ವಿವಿ ಕುಲಪತಿ ಡಾ.ಸಚ್ಚಿದಾನಂದ ಹಾಗೂ ಅಧಿಕಾರಿಗಳಿಗೆ ಸೂಚನೆ ನೀಲಾಗಿದೆ. ವಿವಿಗೆ ಅಗತ್ಯವಿರುವ ಇನ್ನಷ್ಟು ಭೂಮಿಯ ಬಗ್ಗೆ ಕೆಲ ಪ್ರಕರಣಗಳು ನ್ಯಾಯಾಲಯದಲ್ಲಿವೆ. ವಿಚಾರಣೆ ಮುಗಿದು ಆದೇಶ ಹೊರಬಿದ್ದ ಮೇಲೆ ಉಳಿದ ಪ್ರಕ್ರಿಯೆಗಳನ್ನು ವೇಗವಾಗಿ ಪೂರೈಸಬಹುದು. ನ್ಯಾಯಾಲಯದ ಆದೇಶದಂತೆ ಭೂ ಮಾಲೀಕರಿಗೆ ಪರಿಹಾರ ನೀಡಲಾಗುವುದು. ಅದೂವರೆಗೂ ಸ್ವಾಧೀನದಲ್ಲಿರುವ ಭೂಮಿಯಲ್ಲಿ ನಿರ್ಮಾಣ ಕಾಮಗಾರಿಗಳನ್ನು ಆರಂಭಿಸಲಾಗುವುದು ಹೇಳಿದ್ದಾರೆ.

Stay up to date on all the latest ರಾಜ್ಯ news
Poll
Kumbh-Covid-19

ಚುನಾವಣಾ ಸಮಾವೇಶ, ಕುಂಭಮೇಳ, ಧಾರ್ಮಿಕ ಸಭೆಗಳು ದೇಶದಲ್ಲಿ ಕೋವಿಡ್-19 ಪರಿಸ್ಥಿತಿಯನ್ನು ಹದಗೆಡಿಸುತ್ತಿವೆಯೇ?


Result
ಹೌದು, ಅದು ನಿಜ.
ಇಲ್ಲ, ಖಂಡಿತ ಅಲ್ಲ.
flipboard facebook twitter whatsapp