ಆಸಿಡ್ ದಾಳಿ ಆರೋಪಿಗೆ ಜಾಮೀನು ರದ್ದುಪಡಿಸಿದ ಹೈಕೋರ್ಟ್!

ದಕ್ಷಿಣ ಕನ್ನಡ ಜಿಲ್ಲೆ ಕಡಬ ತಾಲೂಕಿನಲ್ಲಿ ಅತ್ತಿಗೆ ಮತ್ತು ಆಕೆಯ ಮಗುವಿನ ಮೇಲೆ ಆಸಿಡ್ ದಾಳಿ ನಡೆಸಿದ್ದ ಆರೋಪಿಗೆ ನೀಡಲಾಗಿದ್ದ ಜಾಮೀನನ್ನು ಹೈಕೋರ್ಟ್ ರದ್ದುಪಡಿಸಿದ್ದು, ಆತನನ್ನು ಬಂಧಿಸುವಂತೆ ಪೊಲೀಸರಿಗೆ ನಿರ್ದೇಶನ ನೀಡಿದೆ.

Published: 11th February 2021 08:37 AM  |   Last Updated: 11th February 2021 01:20 PM   |  A+A-


Casual_Photo1

ಸಾಂದರ್ಭಿಕ ಚಿತ್ರ

Posted By : Nagaraja AB
Source : The New Indian Express

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆ ಕಡಬ ತಾಲೂಕಿನಲ್ಲಿ ಅತ್ತಿಗೆ ಮತ್ತು ಆಕೆಯ ಮಗುವಿನ ಮೇಲೆ ಆಸಿಡ್ ದಾಳಿ ನಡೆಸಿದ್ದ ಆರೋಪಿಗೆ ನೀಡಲಾಗಿದ್ದ ಜಾಮೀನನ್ನು ಹೈಕೋರ್ಟ್ ರದ್ದುಪಡಿಸಿದ್ದು, ಆತನನ್ನು ಬಂಧಿಸುವಂತೆ ಪೊಲೀಸರಿಗೆ ನಿರ್ದೇಶನ ನೀಡಿದೆ.

ಜಿಲ್ಲಾ ಸೆಷನ್ಸ್ ನ್ಯಾಯಾಲಯ ನೀಡಿದ ಜಾಮೀನು ರದ್ದುಗೊಳಿಸುವಂತೆ ಸಂತ್ರಸ್ತೆ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದರು. ಕೋಡಿಂಬಳದಲ್ಲಿ ಕಳೆದ ವರ್ಷ ಜನವರಿಯಲ್ಲಿ ಈ ಘಟನೆ ನಡೆದಿತ್ತು.  ಸಂತ್ರಸ್ತೆಯ ಗಂಡ ಸಾವನ್ನಪ್ಪಿದ್ದು, ಎರಡು ವರ್ಷದ ಮಗಳೊಂದಿಗೆ ಆಕೆ ವಾಸಿಸುತ್ತಿದ್ದಳು. 

ಸಂತ್ರಸ್ತೆಯ ಪತಿಯ ಹಿರಿಯ ಸಹೋದರ ಕೆ. ಜಯನಂದ ಆಗಾಗ್ಗೆ  ಸಾಲ ನೀಡುವಂತೆ ಪೀಡುಸುತ್ತಿದ್ದನ್ನಲ್ಲದೇ, ಜನವರಿ 23 ರಂದು ಆಕೆಯ ಮನೆಗೆ ಹೋಗಿ ನಿಂಧಿಸಿದ್ದಾನೆ. ಅದನ್ನು ವಿಡಿಯೋಗ್ರಾಫ್ ಮಾಡಲು ಸಂತ್ರಸ್ತೆ ಮುಂದಾದಾಗ, ಆಕೆ ಹಾಗೂ ಮಗುವಿನ ಮೇಲೆ ಆಸಿಡ್ ಎರಚಿದ್ದಾನೆ. 

ಆಕೆ ನೀಡಿದ ದೂರಿನ ಆಧಾರದ ಮೇಲೆ ಪೊಲೀಸರು ಜಯನಂದನನ್ನು ಬಂಧಿಸಿ, ನ್ಯಾಯಾಂಗ ಬಂಧನಕ್ಕೆ ಕಳುಹಿಸಿದ್ದರು. ಕಳೆದ ವರ್ಷ ಆಗಸ್ಟ್ ತಿಂಗಳಲ್ಲಿ ಆರೋಪಿಗೆ ಜಿಲ್ಲಾ ಸೆಷನ್ಸ್  ನ್ಯಾಯಾಲಯ ಜಾಮೀನು ನೀಡಿತ್ತು. ಇದೀಗ ಆ ಜಾಮೀನನ್ನು ಹೈಕೋರ್ಟ್ ರದ್ದುಪಡಿಸಿದೆ.
 

Stay up to date on all the latest ರಾಜ್ಯ news
Poll
The grand Central Vista project is estimated to cost `20,000 crore

ಕೋವಿಡ್ ಬಿಕ್ಕಟ್ಟಿನ ದೃಷ್ಟಿಯಿಂದ ಪ್ರಧಾನಿ ಮೋದಿ ಸೆಂಟ್ರಲ್ ವಿಸ್ಟಾ ಯೋಜನೆಯನ್ನು ತಡೆಹಿಡಿಯಬೇಕೇ?


Result
ಹೌದು
ಬೇಡ
flipboard facebook twitter whatsapp