ಕೆಆರ್'ಎಸ್ ಬಳಿ ಕೊನೆಗೂ ಬೋನಿಗೆ ಬಿದ್ದ ಚಿರತೆ

ಕೆಆರ್'ಎಸ್ ಅಧಿಕಾರಿಗಳು ಹಾಗೂ ಸ್ಥಳೀಯರ ನಿದ್ದೆಗೆಡಿಸಿದ್ದ ಚಿರತೆ ಕೊನೆಗೂ ಸೆರೆ ಸಿಕ್ಕಿದೆ.

Published: 12th February 2021 07:49 AM  |   Last Updated: 12th February 2021 07:49 AM   |  A+A-


File photo

ಸಂಗ್ರಹ ಚಿತ್ರ

Posted By : Manjula VN
Source : The New Indian Express

ಮಂಡ್ಯ: ಕೆಆರ್'ಎಸ್ ಅಧಿಕಾರಿಗಳು ಹಾಗೂ ಸ್ಥಳೀಯರ ನಿದ್ದೆಗೆಡಿಸಿದ್ದ ಚಿರತೆ ಕೊನೆಗೂ ಸೆರೆ ಸಿಕ್ಕಿದೆ.

ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೆಆರ್‌ಎಸ್‌ ಅಣೆಕಟ್ಟೆಯ ಮುಖ್ಯದ್ವಾರದಲ್ಲಿ ಹಾಗೂ ಬೃಂದಾವನ ಗಾರ್ಡನ್‍ನಲ್ಲಿ ಕಳೆದ ಹಲವು ದಿನಗಳಿಂದ ಚಿರತೆಯೊಂದು ಪದೇ ಪದೇ ಕಾಣಿಸಿಕೊಂಡಿತ್ತು.

ಇದರಿಂದಾಗಿ ಸ್ಥಳೀಯರಲ್ಲಿ ಆಂತಕ ಶುರುವಾಗಿತ್ತು. ಕಳೆದ ಶುಕ್ರವಾರ ಕೂಡ ಚಿರತೆ ಓಡಾಡುವ ದೃಶ್ಯ ಇಲ್ಲಿನ ಸಿಸಿ ಟಿವಿಯಲ್ಲಿ ಸೆರೆಯಾಗಿತ್ತು.

ಹೀಗಾಗಿ ಅರಣ್ಯ ಇಲಾಖೆಯ ಅಧಿಕಾರಿಗಳು ಚಿರತೆಯ ಸೆರೆಗೆ ಕೆಆರ್‌ಎಸ್‌ ಅಣೆಕಟ್ಟೆಯ ಮುಖ್ಯದ್ವಾರದ ಬಳಿ ಬೋನ್ ಇರಿಸಿದ್ದರು. ಬೋನ್ ಇರಿಸಿದ ಐದು ದಿನಗಳ ಬಳಿಕ ಗುರುವಾರ ಚಿರತೆ ಕೊನೆಗೂ ಬೋನಿಗೆ ಬಿದ್ದಿದೆ.

ಬೋನಿಗೆ ಬಿದ್ದಿರುವ ಚಿರತೆ ಪರಿಶೀಲನೆ ನಡೆಸಿರುವ ಅರಣ್ಯ ಇಲಾಖೆಯ ಅಧಿಕಾರಿಗಳು, ಇದೀಗ ಚಿರತೆಯನ್ನು ಸುರಕ್ಷಿತ ಸ್ಥಳಕ್ಕೆ ಬಿಡಲು ನಿರ್ಧರಿಸಿದ್ದಾರೆ.

Stay up to date on all the latest ರಾಜ್ಯ news
Poll
The grand Central Vista project is estimated to cost `20,000 crore

ಕೋವಿಡ್ ಬಿಕ್ಕಟ್ಟಿನ ದೃಷ್ಟಿಯಿಂದ ಪ್ರಧಾನಿ ಮೋದಿ ಸೆಂಟ್ರಲ್ ವಿಸ್ಟಾ ಯೋಜನೆಯನ್ನು ತಡೆಹಿಡಿಯಬೇಕೇ?


Result
ಹೌದು
ಬೇಡ
flipboard facebook twitter whatsapp