ಯುಜಿಸಿ ವೇತನ ಸಮಸ್ಯೆ ಶೀಘ್ರದಲ್ಲೇ ಪರಿಹಾರ: ಸಚಿವ ಡಾ. ಸಿ.ಎನ್. ಅಶ್ವತ್ಥ್ ನಾರಾಯಣ್

ಯುಜಿಸಿ ವೇತನ ಹಿಂಬಾಕಿ ಪಾವತಿ, ವರ್ಗಾವಣೆ, ಪ್ರಾಂಶುಪಾಲರ ನೇಮಕ ಸೇರಿದಂತೆ ಸರ್ಕಾರಿ ಪದವಿ ಕಾಲೇಜು ಪ್ರಾಧ್ಯಾಪಕರ ಬೇಡಿಕೆಗಳನ್ನು ಶೀಘ್ರವೇ ಈಡೇರಿಸಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಡಾ. ಸಿ.ಎನ್. ಅಶ್ವತ್ಥ್ ನಾರಾಯಣ್ ಅವರು ಭರವಸೆ ನೀಡಿದ್ದಾರೆ.

Published: 12th February 2021 08:00 AM  |   Last Updated: 12th February 2021 12:54 PM   |  A+A-


Ashwath Narayan

ಅಶ್ವತ್ಥ್ ನಾರಾಯಣ್

Posted By : Manjula VN
Source : The New Indian Express

ಬೆಂಗಳೂರು: ಯುಜಿಸಿ ವೇತನ ಹಿಂಬಾಕಿ ಪಾವತಿ, ವರ್ಗಾವಣೆ, ಪ್ರಾಂಶುಪಾಲರ ನೇಮಕ ಸೇರಿದಂತೆ ಸರ್ಕಾರಿ ಪದವಿ ಕಾಲೇಜು ಪ್ರಾಧ್ಯಾಪಕರ ಬೇಡಿಕೆಗಳನ್ನು ಶೀಘ್ರವೇ ಈಡೇರಿಸಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಸಚಿವ ಡಾ. ಸಿ.ಎನ್. ಅಶ್ವತ್ಥ್ ನಾರಾಯಣ್ ಅವರು ಭರವಸೆ ನೀಡಿದ್ದಾರೆ.

ವಿವಿಧ ಬೇಡಿಕೆಗಳನ್ನು ಈಡೇರಿಸುವ ಸಂಬಂಧ ಕರ್ನಾಟಕ ಸರ್ಕಾರಿ ಕಾಲೇಜುಗಳು ಬೋಧಕ ಸಂಘದ ಪದಾಧಿಕಾರಿಗಳ ಜೊತೆ ನಡೆಸಿದ ಸಭೆಯಲ್ಲಿ ಮಾತನಾಡಿದ ಅವರು, 2006ರ ಯುಜಿಸಿ ವೇತನ ಹಿಂಬಾಕಿ ಮತ್ತು 2019ರ ಏಪ್ರಿಲ್ ತಿಂಗಳಿನಿಂದ ಪಾವತಿಯಾಗಬೇಕಿರುವ ವೇತನ ಕುರಿತು ಸದ್ಯದಲ್ಲಿಯೇ ಹಣಕಾಸು ಇಲಾಖೆಯೊಂದಿಗೆ ಚರ್ಚಿಸಲಾಗುವುದು. ಪ್ರಾಧ್ಯಾಪಕರ ರಾಷ್ಟ್ರೀಯ ಪಿಂಚಣಿ ಯೋಜನೆಗೆ ರಾಜ್ಯ ಸರ್ಕಾರದ ಪಾಲನ್ನು ಕೂಡಲೇ ತುಂಬಲಾಗುವುದು ಎಂದು ಹೇಳಿದರು.

ಈ ವರ್ಷದ ವರ್ಗಾವಣೆ ಪ್ರಕ್ರಿಯೆ ಹಾಗೂ 310 ಪ್ರಾಂಶುಪಾಲರ ಹುದ್ದೆ ಭರ್ತಿಗೆ ಶೀಘ್ರವೇ ಚಾಲನೆ ನೀಡಲಾಗುವುದು. ಗರಿಷ್ಠ ವಯೋಮಿತಿಗೆ ವಿನಾಯಿತಿ ನೀಡಿ ಯುಜಿಸಿ ವೇತನ ಶ್ರೇಣಿಯನ್ನು ಸಹ ಪ್ರಾಧ್ಯಾಪಕರ ನೇಮಕ ಮಾಡಿಕೊಳ್ಳಲಾಗುವುದು ಎಂದು ತಿಳಿಸಿದರು.

Stay up to date on all the latest ರಾಜ್ಯ news
Poll
Kumbh-Covid-19

ಚುನಾವಣಾ ಸಮಾವೇಶ, ಕುಂಭಮೇಳ, ಧಾರ್ಮಿಕ ಸಭೆಗಳು ದೇಶದಲ್ಲಿ ಕೋವಿಡ್-19 ಪರಿಸ್ಥಿತಿಯನ್ನು ಹದಗೆಡಿಸುತ್ತಿವೆಯೇ?


Result
ಹೌದು, ಅದು ನಿಜ.
ಇಲ್ಲ, ಖಂಡಿತ ಅಲ್ಲ.
flipboard facebook twitter whatsapp