ಡಿ.ಜೆ. ಹಳ್ಳಿ ಗಲಭೆ ಪ್ರಕರಣ: ಮಾಜಿ ಮೇಯರ್ ಸಂಪತ್ ರಾಜ್‌ಗೆ ಷರತ್ತುಬದ್ಧ ಜಾಮೀನು ಮಂಜೂರು

ಡಿ.ಜೆ. ಹಳ್ಳಿ ಗಲಭೆ ಪ್ರಕರಣ ಸಂಬಂಧ ಬಂಧನಕ್ಕೆ ಒಳಗಾಗಿರುವ ಮಾಜಿ ಮೇಯರ್‌ ಸಂಪತ್‌ ರಾಜ್‌ಗೆ ಹೈಕೋರ್ಟ್ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದೆ.

Published: 13th February 2021 09:21 AM  |   Last Updated: 13th February 2021 12:54 PM   |  A+A-


sampath raj

ಸಂಪತ್ ರಾಜ್

Online Desk

ಬೆಂಗಳೂರು:ಡಿ.ಜೆ. ಹಳ್ಳಿ ಗಲಭೆ ಪ್ರಕರಣ ಸಂಬಂಧ ಬಂಧನಕ್ಕೆ ಒಳಗಾಗಿರುವ ಮಾಜಿ ಮೇಯರ್‌ ಸಂಪತ್‌ ರಾಜ್‌ಗೆ ಹೈಕೋರ್ಟ್ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದೆ.

ಜಾಮೀನು ಕೋರಿ ಸಂಪತ್‌ ರಾಜ್‌ ಸಲ್ಲಿಸಿದ್ದ ಅರ್ಜಿಯನ್ನು ಪುರಸ್ಕರಿಸಿದ ನ್ಯಾಯಮೂರ್ತಿ ಜಾನ್‌ ಮೈಕೆಲ್‌ ಕುನ್ಹಾ ಅವರು ಈ ಆದೇಶ ಮಾಡಿದರು.

ಪ್ರಕರಣ ಕುರಿತ ಪೊಲೀಸರ ತನಿಖೆ ಅಂತಿಮ ಹಂತಕ್ಕೆ ಬಂದಿದೆ. ಈಗಾಗಲೇ ತನಿಖಾಧಿಕಾರಿಗಳು ನ್ಯಾಯಾಲಯಕ್ಕೆ ಎರಡು ದೋಷಾರೋಪ ಪಟ್ಟಿ ಸಲ್ಲಿಸಿದ್ದಾರೆ. ಈ ಹಂತದಲ್ಲಿ ಆರೋಪಿಗೆ ಜಾಮೀನು ನೀಡಬಹುದು ಎಂದು ನ್ಯಾಯಪೀಠ ಆದೇಶದಲ್ಲಿ ತಿಳಿಸಿದೆ.

ಸಾಕ್ಷಿಗಳ ಮೇಲೆ ಪ್ರಭಾವ ಬೀರಲು ಅಥವಾ ಸಾಕ್ಷ್ಯ ನಾಶ ಪಡಿಸಲು ಯತ್ನಿಸಬಾರದು. ಪೊಲೀಸರ ತನಿಖೆಗೆ ಸಹಕರಿಸಬೇಕು ಹಾಗೂ ವಿಚಾರಣಾ ನ್ಯಾಯಾಲಯದ ವಿಚಾರಣೆಗೆ ತಪ್ಪದೇ ಹಾಜರಾಗಬೇಕು. ಕೋರ್ಟ್‌ ಅನುಮತಿ ಇಲ್ಲದೆ ಬೆಂಗಳೂರು ನಗರ ಬಿಟ್ಟು ತೆರಳುವಂತಿಲ್ಲ ಎಂದು ಜಾಮೀನಿಗೆ ಷರತ್ತು ವಿಧಿಸಿರುವ ಹೈಕೋರ್ಟ್‌, ಒಂದೊಮ್ಮೆ ಆರೋಪಿ ಷರತ್ತು ಉಲ್ಲಂಘಿಸಿದರೆ ಜಾಮೀನು ರದ್ದು ಕೋರಿ ಸಿಸಿಬಿ ಪೊಲೀಸರು ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಬಹುದು ತಿಳಿಸಿದೆ.

ಕೆ.ಜಿ. ಹಳ್ಳಿ ಮತ್ತು ಡಿ.ಜಿ.ಹಳ್ಳಿ ಗಲಭೆ ವೇಳೆ ಶಾಸಕ ಅಖಂಡ ಶ್ರೀನಿವಾಸ್‌ ಮೂರ್ತಿ ಅವರ ಮನೆ ಮೇಲೆ ದಾಳಿ ನಡೆಸಲು ತಮ್ಮ ಬೆಂಬಲಿಗರ ಮೂಲಕ ಕಿಡಿಗೇಡಿಗಳಿಗೆ ಕುಮ್ಮಕ್ಕು ನೀಡಿದ್ದಾರೆಂಬ ಆರೋಪ ಸಂಪತ್‌ ರಾಜ್‌ ಮೇಲೆ ಕೇಳಿಬಂದಿತ್ತು.


Stay up to date on all the latest ರಾಜ್ಯ news
Poll
Swami Prasad Maurya joins Samajwadi Party

ಉತ್ತರ ಪ್ರದೇಶದಲ್ಲಿ ಏಳು ಮಂದಿ ನಾಯಕರು ಪಕ್ಷ ತೊರೆದಿರುವುದು ಬಿಜೆಪಿಗೆ ಸೋಲಿನ ಮೊದಲ ಮುನ್ಸೂಚನೆಯೇ?


Result
ಹೌದು
ಇಲ್ಲ

Comments

Disclaimer : We respect your thoughts and views! But we need to be judicious while moderating your comments. All the comments will be moderated by the kannadaprabha.com editorial. Abstain from posting comments that are obscene, defamatory or inflammatory, and do not indulge in personal attacks. Try to avoid outside hyperlinks inside the comment. Help us delete comments that do not follow these guidelines.

The views expressed in comments published on kannadaprabha.com are those of the comment writers alone. They do not represent the views or opinions of kannadaprabha.com or its staff, nor do they represent the views or opinions of The New Indian Express Group, or any entity of, or affiliated with, The New Indian Express Group. kannadaprabha.com reserves the right to take any or all comments down at any time.

flipboard facebook twitter whatsapp