ಬೆಂಗಳೂರಿನ ನರ್ಸಿಂಗ್ ಕಾಲೇಜಿನ 40 ವಿದ್ಯಾರ್ಥಿಗಳಿಗೆ ಕೋವಿಡ್-19, ಬಹುತೇಕರು ಕೇರಳದವರು

 ನಗರದ ಮಂಜುಶ್ರೀ ನರ್ಸಿಂಗ್ ಕಾಲೇಜಿನ 40 ವಿದ್ಯಾರ್ಥಿಗಳಿಗೆ ಶನಿವಾರ ಕೋವಿಡ್-19 ಸೋಂಕು ದೃಢಪಟ್ಟಿದೆ. ಈ ವಿದ್ಯಾರ್ಥಿಗಳಲ್ಲಿ ಬಹುತೇಕ ಕೇರಳದವರಾಗಿದ್ದಾರೆ ಎಂದು ಆರೋಗ್ಯ ಅಧಿಕಾರಿಗಳು ಸ್ಪಷ್ಪಪಡಿಸಿದ್ದಾರೆ.

Published: 13th February 2021 07:31 PM  |   Last Updated: 13th February 2021 07:31 PM   |  A+A-


Casual_images1

ಸಾಂದರ್ಭಿಕ ಚಿತ್ರ

Posted By : Nagaraja AB
Source : The New Indian Express

ಬೆಂಗಳೂರು: ನಗರದ ಮಂಜುಶ್ರೀ ನರ್ಸಿಂಗ್ ಕಾಲೇಜಿನ 40 ವಿದ್ಯಾರ್ಥಿಗಳಿಗೆ ಶನಿವಾರ ಕೋವಿಡ್-19 ಸೋಂಕು ದೃಢಪಟ್ಟಿದೆ. ಈ ವಿದ್ಯಾರ್ಥಿಗಳಲ್ಲಿ ಬಹುತೇಕ ಕೇರಳದವರಾಗಿದ್ದಾರೆ ಎಂದು ಆರೋಗ್ಯ ಅಧಿಕಾರಿಗಳು ಸ್ಪಷ್ಪಪಡಿಸಿದ್ದಾರೆ.

ಬೆಂಗಳೂರಿನ ಶಿಕ್ಷಣ ಸಂಸ್ಥೆಗೆ ಬರುವ ಎಲ್ಲಾ ವಿದ್ಯಾರ್ಥಿಗಳು ಕೋವಿಡ್-19 ಪರೀಕ್ಷೆಯ ನೆಗೆಟಿವ್ ಪ್ರಮಾಣ ಪತ್ರ ತರುವುದನ್ನು ರಾಜ್ಯ ಸರ್ಕಾರ ಕಡ್ಡಾಯ ಮಾಡಿದೆ. ಅದು 72 ಗಂಟೆಗಿಂತ ಹಳೆಯದಾಗಿರುವಂತಿಲ್ಲ, ಅಲ್ಲದೇ, ನಗರದಲ್ಲಿನ ಎಲ್ಲಾ ನರ್ಸಿಂಗ್ ಮತ್ತು ವೈದ್ಯಕೀಯ ಕಾಲೇಜುಗಳಲ್ಲಿ ಸಾಮೂಹಿಕ ಪರೀಕ್ಷಾ ಶಿಬಿರಗಳನ್ನು ಆಯೋಜಿಸುತ್ತಿದೆ. ಇದರಿಂದಾಗಿ 40 ನರ್ಸಿಂಗ್ ವಿದ್ಯಾರ್ಥಿಗಳಲ್ಲಿ ಸೋಂಕು ಇರುವುದು ಪತ್ತೆಯಾಗಿದೆ.

ಕೇರಳದಲ್ಲಿ ದೇಶದಲ್ಲಿಯೇ ಅತ್ಯಂತ ಹೆಚ್ಚಿನ ಸಂಖ್ಯೆಯಲ್ಲಿ ಪ್ರತಿದಿನ 5 ಸಾವಿರಕ್ಕೂ ಹೆಚ್ಚು ಪ್ರಕರಣಗಳು ಕಂಡುಬರುತ್ತಿವೆ. ಕೆಲ ವಾರಗಳ ಹಿಂದಷ್ಟೇ ದಕ್ಷಿಣ ಕನ್ನಡ, ಮೈಸೂರು, ಚಾಮರಾಜನಗರದ ಅನೇಕ ವಿದ್ಯಾರ್ಥಿಗಳಲ್ಲಿ ಕೋವಿಡ್-19 ಸೋಂಕು ಪತ್ತೆಯಾಗಿತ್ತು. ಇದಾದ ನಂತರ ಕೇರಳದಿಂದ ದಕ್ಷಿಣ ಕನ್ನಡ, ಉಡುಪಿ, ಮೈಸೂರು, ಕೊಡಗು ಮತ್ತು ಚಾಮರಾಜನಗರ ಜಿಲ್ಲೆಗಳಿಗೆ ಆಗಮಿಸುವ ವಿದ್ಯಾರ್ಥಿಗಳಿಗೆ ಆರ್ ಟಿಪಿಸಿಆರ್ ಪರೀಕ್ಷೆಯ ವರದಿಯನ್ನು ಕಡ್ಡಾಯ ಮಾಡಲಾಗಿದೆ.

ಈ ಮಧ್ಯೆ ಕಾಲೇಜಿಗೆ ಭೇಟಿ ನೀಡಿದ ನಂತರ ಮಾತನಾಡಿದ ಬಿಬಿಎಂಪಿ ಆಯುಕ್ತ ಎನ್.ಮಂಜುನಾಥ್ ಪ್ರಸಾದ್, ಪುಲಿಕೇಶಿನಗರದ ಖಾಸಗಿ ಸಂಸ್ಥೆಯಲ್ಲಿ 210 ನರ್ಸಿಂಗ್ ವಿದ್ಯಾರ್ಥಿಗಳಿದ್ದಾರೆ. ಅವರಲ್ಲಿ ಶೇ.70 ರಷ್ಟು ಮಂದಿ ಕೇರಳದವರಾಗಿದ್ದಾರೆ. ಜನವರಿ 25 ಮತ್ತು ಫೆಬ್ರವರಿ 10ರ ನಡುವೆ ಎಲ್ಲಾ ವಿದ್ಯಾರ್ಥಿಗಳಿಗೆ ಕೊರೋನಾ ಪರೀಕ್ಷೆ ಮಾಡಲಾಗಿದ್ದು, 40 ವಿದ್ಯಾರ್ಥಿಗಳಲ್ಲಿ ಸೋಂಕು ಪತ್ತೆಯಾಗಿದೆ. ಇವರಲ್ಲಿ 28 ಮಂದಿಯಲ್ಲಿ ರೋಗ ಲಕ್ಷಣಗಳು ಕಂಡುಬಂದಿಲ್ಲ. 12 ವಿದ್ಯಾರ್ಥಿಗಳಲ್ಲಿ ಲಘು ರೋಗ ಲಕ್ಷಣಗಳು ಕಂಡುಬಂದಿದೆ ಎಂದು ತಿಳಿಸಿದರು.

ಎಲ್ಲಾ 40 ವಿದ್ಯಾರ್ಥಿಗಳಿಗೂ ಹಾಸ್ಟೆಲ್ ನಲ್ಲಿ ಎಲ್ಲಾ ಸೌಕರ್ಯಗಳೊಂದಿಗೆ ಐಸೋಲೇಷನ್ ವ್ಯವಸ್ಥೆಯನ್ನು ಕಾಲೇಜಿನಿಂದ ಮಾಡಲಾಗಿದೆ. ಮುಂದಿನ 14 ದಿನಗಳವರೆಗೂ ಎಲ್ಲಾ 210 ವಿದ್ಯಾರ್ಥಿಗಳನ್ನು ಐಸೋಲೇಷನ್ ಮತ್ತು ಕ್ವಾರಂಟೈನ್ ಮಾಡಲು ಸಲಹೆ ನೀಡಲಾಗಿದೆ ಎಂದು ಬಿಬಿಎಂಪಿ ಆಯುಕ್ತರು ವಿವರಿಸಿದರು.

Stay up to date on all the latest ರಾಜ್ಯ news
Poll
The grand Central Vista project is estimated to cost `20,000 crore

ಕೋವಿಡ್ ಬಿಕ್ಕಟ್ಟಿನ ದೃಷ್ಟಿಯಿಂದ ಪ್ರಧಾನಿ ಮೋದಿ ಸೆಂಟ್ರಲ್ ವಿಸ್ಟಾ ಯೋಜನೆಯನ್ನು ತಡೆಹಿಡಿಯಬೇಕೇ?


Result
ಹೌದು
ಬೇಡ
flipboard facebook twitter whatsapp