ನಗರದಲ್ಲಿ ಮತ್ತೆ ಹೆಚ್ಚಿದ ಮಹಾಮಾರಿ ಕೊರೋನಾ ಆತಂಕ: ಕಂಟೈನ್ಮೆಂಟ್ ಝೋನ್ ನಿಯಮ ಪಾಲನೆಗೆ ರಾಜ್ಯ ಸರ್ಕಾರ ಮುಂದು
ನಗರದಲ್ಲಿ ಮತ್ತೆ ಮಹಾಮಾರಿ ಕೊರೋನಾ ಆತಂಕ ಹೆಚ್ಚಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಮತ್ತೆ ಕಂಟೈನ್ಮೆಂಟ್ ಝೋನ್ ನಿಯಮ ಪಾಲನೆ ಮಾಡಲು ರಾಜ್ಯ ಸರ್ಕಾರ ಮುಂದಾಗಿದೆ.
Published: 17th February 2021 11:59 AM | Last Updated: 17th February 2021 12:52 PM | A+A A-

ಸಂಗ್ರಹ ಚಿತ್ರ
ಬೆಂಗಳೂರು: ನಗರದಲ್ಲಿ ಮತ್ತೆ ಮಹಾಮಾರಿ ಕೊರೋನಾ ಆತಂಕ ಹೆಚ್ಚಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಮತ್ತೆ ಕಂಟೈನ್ಮೆಂಟ್ ಝೋನ್ ನಿಯಮ ಪಾಲನೆ ಮಾಡಲು ರಾಜ್ಯ ಸರ್ಕಾರ ಮುಂದಾಗಿದೆ.
ಕೊರೋನಾ ಎರಡನೇ ಅಲೆಯನ್ನು ತಡೆಯಲು ಕಂಟೈನ್ಮೆಂಟ್ ಝೋನ್ ನಿಯಮ ಪಾಲನೆ ಮಾಡುವುದು ಅಗತ್ಯವಿದೆ ಎಂದು ನಿನ್ನೆಯಷ್ಟೇ ತಾಂತ್ರಿಕ ಸಲಹಾ ಸಮಿತಿ ಸಲಹೆ ನೀಡಿದ್ದು, ಈ ಹಿನ್ನೆಲೆಯಲ್ಲಿ ಕಂಟೈನ್ಮೆಂಟ್ ಝೋನ್ ನಿಯಮ ಪಾಲನೆ ಮಾಡಲು ಸರ್ಕಾರ ಚಿಂತನೆ ನಡೆಸುತ್ತಿದೆ ಎಂದು ವರದಿಗಳು ತಿಳಿಸಿವೆ
ಶೈಕ್ಷಣಿಕ ಸಂಸ್ಥೆಗಳು, ವಸತಿ ನಿಲಯಗಳಲ್ಲಿ 5ಕ್ಕಿಂತ ಹೆಚ್ಚು ಕೊರೋನಾ ಪ್ರಕರಣಗಳು ಕಾಣಿಸಿಕೊಂಡರೆ ಅದನ್ನು ಕಂಟೈನ್ಮೆಂಟ್ ವಲಯ ಎಂದು ಘೋಷಿಸಲು ಸರ್ಕಾರ ಮುಂದಾಗಿದೆ.
ಕಂಟೈನ್ಮೆಂಟ್ ವಲಯ ಘೋಷಣೆ ಮಾಡಿದ 7 ದಿನಗಳ ಬಳಿಕ ಎಲ್ಲರೂ ಕೋವಿಡ್ ಪರೀಕ್ಷೆಗೆ ಒಳಗಾಗಬೇಕು. ಶಿಕ್ಷಣ ಸಂಸ್ಥೆ, ಹಾಸ್ಟೆಲ್ಗಳಲ್ಲಿ ಮಾಸ್ಕ್ ಧರಿಸುವುದು, ಸ್ಯಾನಿಟೈಸರ್ ಬಳಕೆ, ಸಾಮಾಜಿಕ ಅಂತರ, ಸೋಂಕಿನ ಲಕ್ಷಣಗಳಿದ್ದವರ ಮೇಲೆ ನಿಗಾ ವಹಿಸುವುದು ಆಯಾ ಸಂಸ್ಥೆಗಳ ಮುಖ್ಯಸ್ಥರ ಜವಾಬ್ದಾರಿಯಾಗಿರುತ್ತದೆ.
ಹಾಸ್ಟೆಲ್ ಮತ್ತು ತರಗತಿಗಳಲ್ಲಿ ನೋಡಲ್ ವ್ಯಕ್ತಿಯೊಬ್ಬರು ಇರಲೇಬೇಕು. ಅವರು ವಿದ್ಯಾರ್ಥಿಗಳ ಆರೋಗ್ಯ ಮತ್ತು ಕೋವಿಡ್-19ರ ಮುನ್ನೆಚ್ಚರಿಕೆ ಕ್ರಮಗಳ ಪಾಲನೆಯ ಮೇಲೆ ನಿಗಾ ಇಡಬೇಕು ಎಂಬ ನಿಮಯಗಳನ್ನು ಸರ್ಕಾರ ಜಾರಿಗೆ ತರಲಿದೆ ಎಂದು ಹೇಳಲಾಗುತ್ತಿದೆ.
ಶಿಕ್ಷಣ ಸಂಸ್ಥೆಗಳು, ವಸತಿ ಶಾಲೆಗಳು ಹಾಸ್ಟೆಲ್ಗಳಲ್ಲಿ ಐದಕ್ಕಿಂತ ಹೆಚ್ಚು ಕೋವಿಡ್-19 ಪ್ರಕರಣಗಳು ಕಾಣಿಸಿಕೊಂಡರೆ ಅದನ್ನು ‘ಕಂಟೈನ್ಮೆಂಟ್ ಜೋನ್’ ಎಂದು ಘೋಷಿಸಲಾಗುವುದು.
ಆದ್ದರಿಂದ ಕೋವಿಡ್ ನಿಯಂತ್ರಣ ಮಾರ್ಗಸೂಚಿಯ ಕಟ್ಟುನಿಟ್ಟಿನ ಪಾಲನೆ ಮತ್ತು ಸಾಂಕ್ರಾಮಿಕತೆ ತಡೆಯುವ ಕ್ರಮಗಳನ್ನು ಕೈಗೊಳ್ಳುವುದು ಸಂಸ್ಥೆಗಳ ಮುಖ್ಯಸ್ಥರ ಜವಾಬ್ದಾರಿ. ಒಂದು ವೇಳೆ ನಿಯಮ ಮುರಿದರೆ ಅಂತಹ ಸಂಸ್ಥೆಯ ಮುಖ್ಯಸ್ಥರನ್ನು ಸಾಂಕ್ರಾಮಿಕ ಕಾಯಿಲೆ ಕಾಯ್ದೆಯಡಿಯಲ್ಲಿ ಹೊಣೆಗಾರರನ್ನಾಗಿ ಮಾಡಲು ನಿರ್ಧರಿಸಲಾಗಿದೆ ಎಂದು ತಿಳಿದುಬಂದಿದೆ.