ರಾಮ ಮಂದಿರ ನಿರ್ಮಾಣಕ್ಕೆ ದೇಣಿಗೆ ವಿಚಾರ: ಕುಮಾರಸ್ವಾಮಿ 'ನಾಜಿ' ಆರೋಪದಲ್ಲಿ ಹುರುಳಿಲ್ಲ- ಪೇಜಾವರ ಶ್ರೀ

ರಾಮಮಂದಿರ ನಿರ್ಮಾಣಕ್ಕೆ ದೇಣಿಗೆ ನೀಡದವರ ಮನೆಗಳನ್ನು ಮಾರ್ಕಿಂಗ್ ಮಾಡಲಾಗುತ್ತಿದೆ ಎಂಬ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರ ಆರೋಪಕ್ಕೆ ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

Published: 17th February 2021 12:55 PM  |   Last Updated: 17th February 2021 01:00 PM   |  A+A-


Sri Vishwaprasanna Theertha

ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ

Posted By : Shilpa D
Source : The New Indian Express

ಉಡುಪಿ: ರಾಮಮಂದಿರ ನಿರ್ಮಾಣಕ್ಕೆ ದೇಣಿಗೆ ನೀಡದವರ ಮನೆಗಳನ್ನು ಮಾರ್ಕಿಂಗ್ ಮಾಡಲಾಗುತ್ತಿದೆ ಎಂಬ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರ ಆರೋಪಕ್ಕೆ ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣದ ಕುರಿತು ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಅವರು ಮಾಡಿರುವ ಟ್ವಿಟ್ಟರ್ ಹೇಳಿಕೆಗೆ ತೀಕ್ಷ್ಣ ಪ್ರತಿಕ್ರಿಯೆ ನೀಡಿರುವ  ಪೇಜಾವರ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದರು ,ಇದೊಂದು ಆಧಾರ ರಹಿತವಾದ ಆರೋಪವಾಗಿದ್ದು, ಶ್ರೀ ರಾಮ ಜನ್ಮಭೂಮಿಯ ನಿಧಿ ಸಂಗ್ರಹ ಪಾರದರ್ಶಕವಾಗಿ ನಡೆಯುತ್ತಿದೆ. ದೇಶದ ಪ್ರತಿಯೊಂದು ರಾಮಭಕ್ತರ ಮನೆಯನ್ನು ಸಂಪರ್ಕಿಸಬೇಕು ಎನ್ನುವುದು ನಮ್ಮ ಉದ್ದೇಶವಾಗಿದೆ ಎಂದರು.

ಈ ಉದ್ದೇಶದಿಂದ ನಿಧಿ ಸಂಗ್ರಹದ ಸಮಯದಲ್ಲಿ ಭೇಟಿ ನೀಡಿದ ಮನೆಗಳನ್ನು ಗುರುತು ಮಾಡಿಕೊಳ್ಳುತ್ತಿದ್ದೇವೆ. ಕಾರ್ಯಕರ್ತರು ಸಂಪರ್ಕಿಸದ ಮನೆಗಳನ್ನು ಗುರುತು ಮಾಡಿಕೊಳ್ಳುತ್ತಿದ್ದೇವೆ. ಇದು ನಿಧಿ ಸಮರ್ಪಣೆ ಮಾಡದವರನ್ನು ಗುರುತಿಸುವ ಪ್ರಕ್ರಿಯೆಯಲ್ಲ ಎಂದು ಸ್ಪಷ್ಟನೆ ನೀಡಿದರು.

ಯಾವ ಮನೆಗಳು ಬಿಟ್ಟುಹೋಗಿವೆ ಅದನ್ನು ಮರು ಸಂಪರ್ಕ ಮಾಡುವ ನಿಟ್ಟಿನಲ್ಲಿ ಈ ಕೆಲಸ ಸಾಗುತ್ತಿದ್ದು, ಇಂತಹ ಮಹತ್ಕಾರ್ಯದ ಬಗ್ಗೆ ಪ್ರತಿಕ್ರಿಯೆ ನೀಡುವಾಗ ಜವಾಬ್ದಾರಿಯುತವಾಗಿ ಇರಬೇಕು ಎಂದು ತಿರುಗೇಟು ನೀಡಿದರು.

ಇದೇ ವೇಳೆ ಮಾಜಿ ಸಿಎಂ ಸಿದ್ದರಾಮಯ್ಯ ಅವರು ರಾಮ ಜನ್ಮಭೂಮಿಗೆ ದೇಣಿಗೆ ನೀಡಲು ನಿರಾಕರಿಸಿದ ವಿಚಾರವಾಗಿ, ಯಾರಿಗೂ ನಿಧಿ ಸಮರ್ಪಣೆ ಮಾಡುವಂತೆ ನಾವು ಒತ್ತಾಯಿಸುವುದಿಲ್ಲ. ಯಾರಿಗೆ ಇಷ್ಟವಿದೆ ಅವರು ನೀಡಬಹುದು, ಇಷ್ಟವಿಲ್ಲದವರು ನೀಡದೆ ಇರಬಹುದು ಎಂದು ತಿಳಿಸಿದರು. 

ಇನ್ನು ರಾಮ ಜನ್ಮ ಭೂಮಿ ವಿವಾದಿತ ಪ್ರದೇಶ ಎನ್ನುವ ಅವರ ಅಭಿಪ್ರಾಯದ ಬಗ್ಗೆ ನಾವು ಪ್ರತಿಕ್ರಿಯಿಸುವುದಿಲ್ಲ. ದೇಶದ ಸರ್ವೋಚ್ಚ ನ್ಯಾಯಾಲಯವೇ ಅಯೋಧ್ಯೆ ರಾಮನ ಜನ್ಮಭೂಮಿ ಒಂದು ಒಪ್ಪಿದೆ. ದೇಶದ ಸರ್ವೋಚ್ಚ ನ್ಯಾಯಾಲಯದ ತೀರ್ಪನ್ನು ಅಗೌರವದಿಂದ ಕಾಣುವವರ ಬಗ್ಗೆ ದೇಶನಿಷ್ಠೆಯ ಬಗ್ಗೆ ನಮಗೆ ಸಂದೇಹವಿದೆ ಎಂದು ಉಡುಪಿಯಲ್ಲಿ ಪೇಜಾವರ ಶ್ರೀ ಪ್ರತಿಕ್ರಿಯೆ ನೀಡಿದರು.

Stay up to date on all the latest ರಾಜ್ಯ news
Poll
The grand Central Vista project is estimated to cost `20,000 crore

ಕೋವಿಡ್ ಬಿಕ್ಕಟ್ಟಿನ ದೃಷ್ಟಿಯಿಂದ ಪ್ರಧಾನಿ ಮೋದಿ ಸೆಂಟ್ರಲ್ ವಿಸ್ಟಾ ಯೋಜನೆಯನ್ನು ತಡೆಹಿಡಿಯಬೇಕೇ?


Result
ಹೌದು
ಬೇಡ
flipboard facebook twitter whatsapp