ಎಫ್‌ಡಿಎ ಪ್ರಶ್ನೆ ಪತ್ರಿಕೆ ಸೋರಿಕೆ: ಸಿಸಿಬಿ ಪೊಲೀಸರಿಂದ ಮತ್ತೊಬ್ಬ ಆರೋಪಿ ಶಿವಲಿಂಗ ಪಾಟೀಲ್ ಬಂಧನ

ಕರ್ನಾಟಕ ಲೋಕಸೇವಾ ಆಯೋಗದ ಪ್ರಥಮ ದರ್ಜೆ ಸಹಾಯಕ ಪರೀಕ್ಷೆಗಳ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿವಲಿಂಗ ಪಾಟೀಲ್ ಎಂಬ ಆರೋಪಿಯನ್ನು ಬೆಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

Published: 17th February 2021 08:11 AM  |   Last Updated: 17th February 2021 01:30 PM   |  A+A-


KPSC

ಕೆಪಿಎಸ್ ಸಿ

Posted By : Sumana Upadhyaya
Source : ANI

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ಪ್ರಥಮ ದರ್ಜೆ ಸಹಾಯಕ (ಎಫ್‌ಡಿಎ) ಹುದ್ದೆ ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೋರ್ವ ಪ್ರಮುಖ ಆರೋಪಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಬೆಳಗಾವಿ ಮೂಲದ ಶಿವಲಿಂಗ ಪಾಟೀಲ್ ಎಂಬಾತನನ್ನು ಬಂಧಿಸಲಾಗಿದೆ. ಸಿಸಿಬಿ ಜಂಟಿ ಪೊಲೀಸ್ ಆಯುಕ್ತ ಸಂದೀಪ್ ಈ ಕುರಿತು ಪ್ರತಿಕ್ರಿಯಿಸಿ, ಮಂಗಳವಾರ ಆರೋಪಿ ಶಿವಲಿಂಗನನ್ನು ಬೆಳಗಾವಿಯಲ್ಲಿ ಬಂಧಿಸಲಾಗಿದೆ.

ಬಂಧಿತ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ ನೀಡುವ ಕೋಚಿಂಗ್ ಸೆಂಟರ್ ನಡೆಸುತ್ತಿದ್ದ. ಕಳೆದ ಒಂದು ವರ್ಷದ ಹಿಂದಷ್ಟೇ ಈ ಕೇಂದ್ರವನ್ನು ಮುಚ್ಚಿದ್ದರು. ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಸಿಸಿಬಿಯಿಂದ ಬಂಧಿತ ಆರೋಪಿ ರಾಚಪ್ಪ ಎಂಬುವವರಿಂದ ಪ್ರಶ್ನೆ ಪತ್ರಿಕೆ ತರಿಸಿಕೊಂಡು ಪರೀಕ್ಷೆ ಬರೆಯುತ್ತಿರುವ ಅಭ್ಯರ್ಥಿಗಳನ್ನು ಸಂಪರ್ಕಿಸಿ, ಪ್ರಶ್ನೆಪತ್ರಿಕೆ ರವಾನಿಸುತ್ತಿದ್ದ ಎಂದು ಮಾಹಿತಿ ನೀಡಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಈವರೆಗೆ 25 ಜನ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

ರಾಜ್ಯದಾದ್ಯಂತ ಕಳೆದ ಜನವರಿ 24 ನಡೆಯಬೇಕಿದ್ದ ಎಫ್‌ಡಿಎ ಪರೀಕ್ಷೆ ಕೊನೆ ಗಳಿಕೆಯಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆಯಾದ ಹಿನ್ನೆಲೆಯಲ್ಲಿ ಮುಂದೂಡಲ್ಪಟ್ಟಿತ್ತು. ಎಫ್‌ಡಿಎ ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆಯಾದ ನಂತರ ಆರೋಪಿಗಳ ಪತ್ತೆಗೆ ವಿಶೇಷ ತಂಡ ರಚಿಸಿ ಕಾರ್ಯಾಚರಣೆ ನಡೆಸಿ, ಆರೋಪಿಗಳನ್ನು ಬಂಧಿಸಲಾಗಿದೆ. 

Stay up to date on all the latest ರಾಜ್ಯ news
Poll
The grand Central Vista project is estimated to cost `20,000 crore

ಕೋವಿಡ್ ಬಿಕ್ಕಟ್ಟಿನ ದೃಷ್ಟಿಯಿಂದ ಪ್ರಧಾನಿ ಮೋದಿ ಸೆಂಟ್ರಲ್ ವಿಸ್ಟಾ ಯೋಜನೆಯನ್ನು ತಡೆಹಿಡಿಯಬೇಕೇ?


Result
ಹೌದು
ಬೇಡ
flipboard facebook twitter whatsapp