ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ಕಲ್ಪಿಸಲು ಮುಖ್ಯಮಂತ್ರಿಗಳಿಗೆ ಫೆ. 21ರ ಗಡುವು
ಪಂಚಮಸಾಲಿ ಮತ್ತು ಇತರ ಉಪಜಾತಿಗಳಿಗೆ 2ಎ ಮೀಸಲಾತಿ ಕಲ್ಪಿಸಲು ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಫೆಬ್ರವರಿ 21ರ ವರೆಗೆ ಗಡುವು ನೀಡಲಾಗಿದೆ ಎಂದು ಅಖಿಲ ಭಾರತ ಲಿಂಗಾಯತ ಪಂಚಮಸಾಲಿ ಸಮಾಜ ಟ್ರಸ್ಟ್ ಅಧ್ಯಕ್ಷ ಡಾ.ಬಿ.ಎಸ್ ಪಾಟೀಲ್ ಹೇಳಿದ್ದಾರೆ.
Published: 18th February 2021 08:31 AM | Last Updated: 18th February 2021 08:31 AM | A+A A-

ಯಡಿಯೂರಪ್ಪ
ವಿಜಯಪುರ: ಪಂಚಮಸಾಲಿ ಮತ್ತು ಇತರ ಉಪಜಾತಿಗಳಿಗೆ 2ಎ ಮೀಸಲಾತಿ ಕಲ್ಪಿಸಲು ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಫೆಬ್ರವರಿ 21ರ ವರೆಗೆ ಗಡುವು ನೀಡಲಾಗಿದೆ ಎಂದು ಅಖಿಲ ಭಾರತ ಲಿಂಗಾಯತ ಪಂಚಮಸಾಲಿ ಸಮಾಜ ಟ್ರಸ್ಟ್ ಅಧ್ಯಕ್ಷ ಡಾ.ಬಿ.ಎಸ್ ಪಾಟೀಲ್ ಹೇಳಿದ್ದಾರೆ.
ವಿಜಯಪುರದಲ್ಲಿ ಮಾತನಾಡಿದ ಅವರು, ಯಾವುದೇ ಸಮುದಾಯಕ್ಕೆ 2 ಎ ಸ್ಥಾನಮಾನವನ್ನು ನೀಡುವ ಅಧಿಕಾರವನ್ನು ಮುಖ್ಯಮಂತ್ರಿಗಳಿಗಿದೆ, ಒಂದು ವೇಳೆ ಮೀಸಲಾತಿ ವಿಚಾರದಲ್ಲಿ ಸಿಎಂ ಹಿಂದೆ ಸರಿದರೇ ಅದರಿಂದ ಉಂಟಾಗುವ ಪರಿಣಾಮಗಳನ್ನು ಎದುರಿಸಲು ಯಡಿಯೂರಪ್ಪ ಸಿದ್ದವಾಗಬೇಕು ಎಂದು ಎಚ್ಚರಿಕೆ ನೀಡಿದ್ದಾರೆ.
ಒಂದು ವಾರದೊಳಗೆ ಸಿಎಂ ಯಡಿಯೂರಪ್ಪ ಮೀಸಲಾತಿ ಸಂಬಂಧ ನಿರ್ಧಾರ ಕೈಗೊಳ್ಳಬೇಕು, ಒಂದು ವೇಳೆ ಬೇಡಿಕೆ ಈಡೇರಿಸಲು ವಿಫಲವಾದರೇ ಫೆಬ್ರವರಿ 21 ರಂದು ಫ್ರೀಡಂ ಪಾರ್ಕ್ ನಲ್ಲಿ ಮೆಗಾ ರ್ಯಾಲಿ ನಡೆಸಿ, ವಿಧಾನಸೌಧದ ಎದುರು ರಾಜ್ಯ ಸರ್ಕಾರದ ವಿರುದ್ಧ ಉಪವಾಸ ಸತ್ಯಾಗ್ರಹ ಮಾಡುವ ಎಚ್ಚರಿಕೆ ನೀಡಿದ್ದಾರೆ.
ಕೂಡಲ ಸಂಗಮ ಪಂಚಮಸಾಲಿ ಪೀಠದ ಶ್ರೀಗಳಾದ ಜಯ ಮೃತ್ಯುಂಜಯ ಸ್ವಾಮೀಜಿ ಅವರ ನೇತೃತ್ವದಲ್ಲಿ ನಡೆಯುತ್ತಿರುವ ಪಾದಯಾತ್ರೆ ಬೆಂಗಳೂರು ತಲುಪಲಿದೆ.
ಫೆಬ್ರವರಿ 21ರಂದು ಸಮುದಾಯದ ಸುಮಾರು 10 ಲಕ್ಷ ಮಂದಿ ರ್ಯಾಲಿಯಲ್ಲಿ ಭಾಗವಹಿಸಲಿದ್ದಾರೆ, ಮೀಸಲಾತಿ ಕೇಳುವುದು ನಮ್ಮ ಹಕ್ಕು, ಕಳೆದ ಎರಡು ದಶಕಗಳಿಂದ ಮೀಸಲಾತಿ ವಿಷಯ ನೆನೆಗುದಿಗೆ ಬಿದ್ದಿದೆ ಎಂದು ಅವರು ಹೇಳಿದ್ದಾರೆ.