ರಾಜ್ಯದಲ್ಲಿ ಇಂದು ಕೊರೋನಾದಿಂದ 6 ಸಾವು, ಹೊಸದಾಗಿ 406 ಜನರಿಗೆ ಪಾಸಿಟಿವ್

ರಾಜ್ಯದಲ್ಲಿ ಕೊರೋನಾ ಅಬ್ಬರ ಕಡಿಮೆಯಾಗುತ್ತಿದ್ದು, ಗುರುವಾರ 406 ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ. ಇದರೊಂದಿಗೆ ಸೋಂಕಿತರ ಸಂಖ್ಯೆ 9,46,860ಕ್ಕೆ ಏರಿಕೆಯಾಗಿದೆ.

Published: 18th February 2021 08:25 PM  |   Last Updated: 18th February 2021 08:27 PM   |  A+A-


COVID-19 can affect almost all organs, symptoms maybe unrelated to lungs: AIIMS Experts

ಸಾಂದರ್ಭಿಕ ಚಿತ್ರ

Posted By : Lingaraj Badiger
Source : Online Desk

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಅಬ್ಬರ ಕಡಿಮೆಯಾಗುತ್ತಿದ್ದು, ಗುರುವಾರ 406 ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ. ಇದರೊಂದಿಗೆ ಸೋಂಕಿತರ ಸಂಖ್ಯೆ 9,46,860ಕ್ಕೆ ಏರಿಕೆಯಾಗಿದೆ.

ಇನ್ನು ಕಳೆದ 24 ಗಂಟೆಯಲ್ಲಿ ರಾಜ್ಯದಲ್ಲಿ ಕೊರೋನಾ ಸೋಂಕಿನಿಂದ ಆರು ಮಂದಿ ಮೃತಪಟ್ಟಿದ್ದು, ಸಾವಿನ ಸಂಖ್ಯೆ 12,282ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

ಬೆಂಗಳೂರಿನಲ್ಲಿ ಇಂದು 256 ಮಂದಿಗೆ ಸೋಂಕು ದೃಢಪಟ್ಟಿದ್ದು, ಇದರೊಂದಿಗೆ ಸೋಂಕಿತರ ಸಂಖ್ಯೆ 4,03,027ಕ್ಕೆ ಏರಿಕೆಯಾಗಿದೆ. ಇನ್ನು ನಗರದಲ್ಲಿ ಸೋಂಕಿಗೆ ನಾಲ್ವರು ಬಲಿಯಾಗಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

ರಾಜ್ಯದಲ್ಲಿ ಇಂದು 306 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 9,28,767ಕ್ಕೆ ಏರಿಕೆಯಾಗಿದೆ. ಇನ್ನು 5792 ಸಕ್ರೀಯ ಪ್ರಕರಣಗಳಿದ್ದು, ಈ ಪೈಕಿ 125 ಮಂದಿ ಕೋವಿಡ್ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Stay up to date on all the latest ರಾಜ್ಯ news
Poll
The grand Central Vista project is estimated to cost `20,000 crore

ಕೋವಿಡ್ ಬಿಕ್ಕಟ್ಟಿನ ದೃಷ್ಟಿಯಿಂದ ಪ್ರಧಾನಿ ಮೋದಿ ಸೆಂಟ್ರಲ್ ವಿಸ್ಟಾ ಯೋಜನೆಯನ್ನು ತಡೆಹಿಡಿಯಬೇಕೇ?


Result
ಹೌದು
ಬೇಡ
flipboard facebook twitter whatsapp