ಕ್ವಾರಂಟೈನ್ ನಿಯಮದಿಂದ ತಪ್ಪಿಸಿಕೊಳ್ಳಲು ರಸ್ತೆ ಬಳಕೆಗೆ ಮುಂದಾದ ಅಂತರಾಷ್ಟ್ರೀಯ ಪ್ರಯಾಣಿಕರು!

ಕ್ವಾರಂಟೈನ್ ನಿಯಮದಿಂದ ತಪ್ಪಿಸಿಕೊಳ್ಳುವ ಸಲುವಾಗಿ ಅಂತರಾಷ್ಟ್ರೀಯ ಪ್ರಯಾಣಿಕರು ಬೆಂಗಳೂರು, ಮಂಗಳೂರು ಹಾಗೂ ಗೋವಾದ ಅಂತರಾಷ್ಟ್ರೀಯ ವಿಮಾನ ನಿಲ್ದಾಣಗಳಿಗೆ ಬಂದಿಳಿಯುತ್ತಿದ್ದು, ರಸ್ತೆಗಳ ಮೂಲಕ ತಮ್ಮ ತಮ್ಮ ಸ್ಥಳಗಳಿಗೆ ತೆರಳುತ್ತಿದ್ದಾರೆಂದು ತಿಳಿದುಬಂದಿದೆ. 

Published: 18th February 2021 01:31 PM  |   Last Updated: 18th February 2021 01:37 PM   |  A+A-


File photo

ಸಂಗ್ರಹ ಚಿತ್ರ

Posted By : Manjula VN
Source : The New Indian Express

ಮಂಗಳೂರು: ಬ್ರಿಟನ್, ದಕ್ಷಿಣ ಆಫ್ರಿಕಾ, ಯುರೋಪ್ ರಾಷ್ಟ್ರಗಳಿಂದ ಆಗಮಿಸುವ ಪ್ರಯಾಣಿಕರಿಗೆ ಮಹಾರಾಷ್ಟ್ರ ಸರ್ಕಾರ 14 ದಿನಗಳ ಸಾಂಸ್ಥಿಕ ಕ್ವಾರಂಟೈನ್'ನ್ನು ಕಡ್ಡಾಯಗೊಳಿಸಿರುವ ಹಿನ್ನೆಲೆಯಲ್ಲಿ ಕ್ವಾರಂಟೈನ್ ನಿಯಮದಿಂದ ತಪ್ಪಿಸಿಕೊಳ್ಳುವ ಸಲುವಾಗಿ ಅಂತರಾಷ್ಟ್ರೀಯ ಪ್ರಯಾಣಿಕರು ಬೆಂಗಳೂರು, ಮಂಗಳೂರು ಹಾಗೂ ಗೋವಾದ ಅಂತರಾಷ್ಟ್ರೀಯ ವಿಮಾನ ನಿಲ್ದಾಣಗಳಿಗೆ ಬಂದಿಳಿಯುತ್ತಿದ್ದು, ರಸ್ತೆಗಳ ಮೂಲಕ ತಮ್ಮ ತಮ್ಮ ಸ್ಥಳಗಳಿಗೆ ತೆರಳುತ್ತಿದ್ದಾರೆಂದು ತಿಳಿದುಬಂದಿದೆ. 

ದುಬೈ ಮತ್ತು ಇತರೆ ಮಧ್ಯಪ್ರಾಚ್ಯ ನಗರಗಳ ಪ್ರಯಾಣಿಕರಿಗೆ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಅನುಕೂಲಕರವಾಗಿದ್ದರೆ, ಬ್ರಿಟನ್, ದಕ್ಷಿಣ ಆಫ್ರಿಕಾ ಮತ್ತು ಯುರೋಪ್ ರಾಷ್ಟ್ರಗಳ ಪ್ರಯಾಣಿಕರಿಗೆ ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅನುಕೂಲಕರವಾಗಿದೆ ಎಂದು ಹೇಳಲಾಗುತ್ತಿದೆ.

ಬೆಂಗಳೂರು, ಮಂಗಳೂರು ಹಾಗೂ ಗೋವಾದ ಅಂತರಾಷ್ಟ್ರೀಯ ವಿಮಾನ ನಿಲ್ದಾಣಗಳಿಗೆ ಬಂದಿಳಿಯುತ್ತಿರುವ ಅಂತರಾಷ್ಟ್ರೀಯ ಪ್ರಯಾಣಿಕರು ನಂತರ ಇಲ್ಲಿಂದ ದೇಶೀಯ ವಿಮಾನಗಳು ಅಥವಾ ಬಸ್ ಗಳ ಮೂಲಕ ಮುಂಬೈ ಹಾಗೂ ಮಹಾರಾಷ್ಟ್ರ ರಾಜ್ಯಗಳನ್ನು ತಲುಪುತ್ತಿದ್ದಾರೆಂದು ಮೂಲಗಳು ತಿಳಿಸಿವೆ. 

ದುಬೈನಿಂದ ಸೋಮವಾರ ಮಂಗಳೂರು ವಿಮಾನ ನಿಲ್ದಾಣಕ್ಕೆ ಬಂದಿಳಿದ ಪ್ರಯಾಣಿರೊಬ್ಬರು ಮಾತನಾಡಿ, ಮುಂಬೈ ನಲ್ಲಿ ನನ್ನ ಸಂಬಂಧಿಕರೊಬ್ಬರು ಆಸ್ಪತ್ರೆಗೆ ದಾಖಲಾಗಿದ್ದಾರೆ. ಅವರನ್ನು ಭೇಟಿ ಮಾಡಲು ತೆರಳುತ್ತಿದ್ದೇನೆ. ಮಹಾರಾಷ್ಟ್ರದಲ್ಲಿ 14 ದಿನಗಳ ಸಾಂಸ್ಥಿಕ ಕ್ವಾರಂಟೈನ್ ವಿಧಿಸಲಾಗುತ್ತಿದೆ. ಅಷ್ಟು ದಿನ ಸಮಯ ವ್ಯರ್ಥ ಮಾಡಲು ಸಾಧ್ಯವಿಲ್ಲ. ಹೀಗಾಗಿ ನಾನು ಮಂಗಳೂರಿಗೆ ಬಂದಿದ್ದು, ಇಲ್ಲಿಂದ ಮುಂಬೈಗೆ ತೆರಳುತ್ತೇನೆಂದು ಹೇಳಿದ್ದಾರೆ. 

14 ದಿನಗಳ ಸಾಂಸ್ಥಿಕ ಕ್ವಾರಂಟೈನ್'ಗೆ ರೂ.15,000 ವೆಚ್ಚವಾಗುತ್ತದೆ. ಅದೂ ಅಲ್ಲದೆ, 14 ದಿನ ಕ್ವಾರೈಂಟೈನ್'ಗೊಳಗಾಗಬೇಕು. ಎಷ್ಟೊಂದು ಸಮಯ ಯಾರಿಗೆ ಇರುತ್ತದೆ? ಸಂಬಂಧಿಕರನ್ನು ಭೇಟಿಯಾದ ಕೂಡಲೇ ನಾನು ಮರಳಿ ದುಬೈಗೆ ಹೋಗಬೇಕಿದೆ. ಕ್ಯಾಬ್ ಮೂಲಕ ನಾನು ಮುಂಬೈಗೆ ತೆರಳುತ್ತಿದ್ದೇನೆಂದು ತಿಳಿಸಿದ್ದಾರೆ. 

ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಅಧಿಕಾರಿಗಳು, ಪ್ರಯಾಣಿಕರ ಕೊನೆಯ ಭೇಟಿ ಯಾವ ಪ್ರದೇಶ ಎಂಬುದರ ಮಾಹಿತಿ ನಮಗೆ ತಿಳಿದಿರುವುದಿಲ್ಲ. ಮಹಾರಾಷ್ಟ್ರಕ್ಕೆ ತೆರಳುತ್ತಿದ್ದಾರೆಂಬುದು ನಮಗೆ ತಿಳಿದರೂ ನಾವು ಅವರನ್ನು ತಡೆಯಲು ಸಾಧ್ಯವಿಲ್ಲ. ಏಕೆಂದರೆ ಕರ್ನಾಟಕದಲ್ಲಿ ಅಂತರಾಷ್ಟ್ರೀಯ ಪ್ರಯಾಣಿಕರಿಗೆ ಸಾಂಸ್ಥಿಕ ಕ್ವಾರಂಟೈನ್'ನ್ನು ಕಡ್ಡಾಯ ಮಾಡಲಾಗಿಲ್ಲ ಎಂದಿದ್ದಾರೆ. 

Stay up to date on all the latest ರಾಜ್ಯ news
Poll
Kumbh-Covid-19

ಚುನಾವಣಾ ಸಮಾವೇಶ, ಕುಂಭಮೇಳ, ಧಾರ್ಮಿಕ ಸಭೆಗಳು ದೇಶದಲ್ಲಿ ಕೋವಿಡ್-19 ಪರಿಸ್ಥಿತಿಯನ್ನು ಹದಗೆಡಿಸುತ್ತಿವೆಯೇ?


Result
ಹೌದು, ಅದು ನಿಜ.
ಇಲ್ಲ, ಖಂಡಿತ ಅಲ್ಲ.
flipboard facebook twitter whatsapp