ಡಿಜಿಟಲ್ ಕಲಿಕೆಗೆ ಆದ್ಯತೆ : ಡಾ. ಸಿ.ಎನ್. ಅಶ್ವತ್ಥ ನಾರಾಯಣ್

ಕೋವಿಡ್ ನಂತರ ರಾಜ್ಯದಲ್ಲಿ ಡಿಜಿಟಲ್ ಕಲಿಕೆಯನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ಇನ್ನು ಎರಡು ತಿಂಗಳಲ್ಲಿ ರಾಜ್ಯದ ಶಿಕ್ಷಣ ಸಂಸ್ಥೆಗಳ ೨ ಸಾವಿರದ ೫೦೦ ತರಗತಿ ಕೊಠಡಿಗಳನ್ನು ಸ್ಮಾರ್ಟ್‌ಕ್ಲಾಸ್ ರೂಮುಗಳನ್ನಾಗಿ ಪರಿವರ್ತನೆ ಮಾಡಲಾಗುವುದು ಎಂದು ಉನ್ನತ ಶಿಕ್ಷಣ ಸಚಿವರೂ ಆದ ಉಪಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ್ ತಿಳಿಸಿದ್ದಾರೆ. 

Published: 18th February 2021 08:52 PM  |   Last Updated: 18th February 2021 08:52 PM   |  A+A-


DCM_Ashwathnarayan1

ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥ ನಾರಾಯಣ್

Posted By : Nagaraja AB
Source : UNI

ಬೆಂಗಳೂರು: ಕೋವಿಡ್ ನಂತರ ರಾಜ್ಯದಲ್ಲಿ ಡಿಜಿಟಲ್ ಕಲಿಕೆಯನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ಇನ್ನು ಎರಡು ತಿಂಗಳಲ್ಲಿ ರಾಜ್ಯದ ಶಿಕ್ಷಣ ಸಂಸ್ಥೆಗಳ ೨ ಸಾವಿರದ ೫೦೦ ತರಗತಿ ಕೊಠಡಿಗಳನ್ನು ಸ್ಮಾರ್ಟ್‌ಕ್ಲಾಸ್ ರೂಮುಗಳನ್ನಾಗಿ ಪರಿವರ್ತನೆ ಮಾಡಲಾಗುವುದು ಎಂದು ಉನ್ನತ ಶಿಕ್ಷಣ ಸಚಿವರೂ ಆದ ಉಪಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ್ ತಿಳಿಸಿದ್ದಾರೆ. 

ನಗರದ ಕಲಾ ಕಾಲೇಜ್‌ನಲ್ಲಿ ಇಂದು ನೂತನ ಜಿಮ್‌ಹೌಸ್‌ಗೆ ಚಾಲನೆ ನೀಡಿ ಮಾತನಾಡಿದ ಅವರು, ಕೋವಿಡ್‌ನಿಂದಾಗಿ ಕಲಿಕೆಯ ಮಾದರಿಗಳೇ ಬದಲಾಗಿವೆ. ಹೀಗಾಗಿ ಸರಕಾರ ತಂತ್ರಜ್ಞಾನವನ್ನು ಬಳಸಿಕೊಂಡು ಸ್ಲಾರ್ಟ್‌ಕ್ಲಾಸ್ ರೂಂ ಪರಿಕಲ್ಪನೆ ರೂಪಿಸಿದೆ. ಮುಂಬರುವ ೬ ತಿಂಗಳಲ್ಲಿ ಇನ್ನೂ ೫ಸಾವಿರ ತರಗತಿ ಕೊಠಡಿಗಳನ್ನು ಸ್ಮಾರ್ಟ್‌ಕ್ಲಾಸ್ ರೂಮುಗಳಾಗಿ ರೂಪಿಸಲಾಗುವುದು ಎಂದರು.

 ಹೈಸ್ಪೀಡ್ ಇಂಟರ್‌ನೆಟ್, ಅತ್ಯಾಧುನಿಕ ಗುಣಮಟ್ಟದ ಟ್ಯಾಬ್ ಹಾಗೂ ಸಮಗ್ರ ಕಲಿಕಾ ವ್ಯವಸ್ಥೆಯನ್ನು ಜಾರಿ ಮಾಡುವ ಮೂಲಕ ಸ್ಮಾರ್ಟ್‌ಕ್ಲಾಸ್ ರೂಂ ವ್ಯವಸ್ಥೆಯನ್ನು ಪರಿಪೂರ್ಣಗೊಳಿಸಲಾಗುವುದು. ಇದರಿಂದ ವಿದ್ಯಾರ್ಥಿಗಳ ಕಲಿಕೆಯ ಗತಿಯೇ ಬದಲಾಗುತ್ತದೆ. ಗುಣಮಟ್ಟದ ಕಲಿಕೆಯ ಕನಸು ಈ ಮೂಲಕ ಸಾಕಾರವಾಗುತ್ತದೆ ಎಂದು ಉಪಮುಖ್ಯಮಂತ್ರಿ ಡಾ. ಅಶ್ವತ್ಥನಾರಾಯಣ್ ಹೇಳಿದರು.

Stay up to date on all the latest ರಾಜ್ಯ news
Poll
Kumbh-Covid-19

ಚುನಾವಣಾ ಸಮಾವೇಶ, ಕುಂಭಮೇಳ, ಧಾರ್ಮಿಕ ಸಭೆಗಳು ದೇಶದಲ್ಲಿ ಕೋವಿಡ್-19 ಪರಿಸ್ಥಿತಿಯನ್ನು ಹದಗೆಡಿಸುತ್ತಿವೆಯೇ?


Result
ಹೌದು, ಅದು ನಿಜ.
ಇಲ್ಲ, ಖಂಡಿತ ಅಲ್ಲ.
flipboard facebook twitter whatsapp