ಈ ಶೈಕ್ಷಣಿಕ ವರ್ಷದಿಂದಲೇ ನೂತನ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿ: ಡಿಸಿಎಂ ಅಶ್ವತ್ಥನಾರಾಯಣ

ನೂತನ ರಾಷ್ಟ್ರೀಯ ಶಿಕ್ಷಣ ನೀತಿ ಮುಂಬರುವ ಶೈಕ್ಷಣಿಕ ವರ್ಷದಿಂದ ಜಾರಿಯಾಗಲಿದೆ ಎಂದು ಉಪಮುಖ್ಯಮಂತ್ರಿ ಡಾ.ಸಿ.ಎನ್ ಅಶ್ವಥ್ ನಾರಾಯಣ ಅವರು ಶುಕ್ರವಾರ ಹೇಳಿದ್ದಾರೆ.

Published: 19th February 2021 08:08 PM  |   Last Updated: 19th February 2021 08:08 PM   |  A+A-


Dr C N Ashwath Narayan

ಡಾ ಸಿ ಎನ್ ಅಶ್ವಥ್ ನಾರಾಯಣ್

Posted By : Lingaraj Badiger
Source : UNI

ಬೆಂಗಳೂರು: ನೂತನ ರಾಷ್ಟ್ರೀಯ ಶಿಕ್ಷಣ ನೀತಿ ಮುಂಬರುವ ಶೈಕ್ಷಣಿಕ ವರ್ಷದಿಂದ ಜಾರಿಯಾಗಲಿದೆ ಎಂದು ಉಪಮುಖ್ಯಮಂತ್ರಿ ಡಾ.ಸಿ.ಎನ್ ಅಶ್ವಥ್ ನಾರಾಯಣ ಅವರು ಶುಕ್ರವಾರ ಹೇಳಿದ್ದಾರೆ.

ಮಂಡ್ಯದಲ್ಲಿ ಆಯೋಜಿಸಿದ್ದ 18ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಉದ್ಘಾಟನೆ ನೆರವೇರಿಸಿ ಮಾತನಾಡಿದ ಅವರು, ಸಮಾಜದ ಬದಲಾವಣೆ ಶಿಕ್ಷಣದಿಂದ ಮಾತ್ರ ಸಾಧ್ಯ. ಜೊತೆಗೆ ಪ್ರತಿಯೊಂದು ಸಮಸ್ಯೆಗೆ ಪರಿಹಾರ ಶಿಕ್ಷಣವಾಗಿದೆ. ಉತ್ತಮವಾದ ಸಾಹಿತ್ಯದ ಮೂಲಕ ನಮ್ಮ ನಾಡಿನ ಹಿರಿಮೆ ಗರಿಮೆ ಹೆಚ್ಚಿಸುವುದು ಪ್ರಮುಖ ಗುರಿಯಾಗಿರುತ್ತದೆ. ನಾವು ನಮ್ಮತನವನ್ನು ಹೆಚ್ಚಿಸಿಕೊಳ್ಳಬೇಕು ಎಂದರೆ ಅದು ಸಾಹಿತ್ಯದಿಂದ ಮಾತ್ರ ಸಾಧ್ಯವಾಗುತ್ತದೆ ಎಂದು ಹೇಳಿದರು.

ರಾಜ್ಯದಲ್ಲಿ ನಿರುದ್ಯೋಗ ಮಟ್ಟವನ್ನು ಕಡಿಮೆ ಮಾಡಲು ಅತಿ ಶೀಘ್ರದಲ್ಲೇ 1 ಕೋಟಿ ಉದ್ಯೋಗವನ್ನು ಸೃಷ್ಟಿಸಲಾಗುವುದು. ಜಿಲ್ಲೆಯಲ್ಲಿ ವ್ಯವಸಾಯವನ್ನು ನಂಬಿ ಬದುಕುತ್ತಿರುವ ರೈತಾಪಿ ವರ್ಗವು ಹೆಚ್ಚಿನ ಸಂಖ್ಯೆಯಲ್ಲಿವೆ, ವ್ಯವಸಾಯ ಕಾರ್ಯಕ್ಷೇತ್ರದಲ್ಲಿ ಆಧುನಿಕ ತಂತ್ರಜ್ಞಾನ ಬಳಸಿಕೊಂಡು ವೈಜ್ಞಾನಿಕ ಪದ್ಧತಿಯನ್ನು ಅಳವಡಿಸಿಕೊಂಡು ಇಸ್ರೇಲ್ ಮಾದರಿಯಲ್ಲಿ ಕೃಷಿಯನ್ನು ಮಾಡೋಣ ಎಂದರು.

ರೈತರು ಡಿಜಿಟಲ್ ಫಾರ್ಮಿಂಗ್ ಗಳನ್ನು ಅಳವಡಿಸಿಕೊಳ್ಳುವುದರ ಮೂಲಕ ವೈಜ್ಞಾನಿಕವಾಗಿ ಕೃಷಿಯನ್ನು ಮಾಡಲು ಸಾಧ್ಯವಿದೆ ಎಂದು ತಿಳಿಸಿದರು.

ವ್ಯವಸಾಯವನ್ನು ನಂಬಿ ಬದುಕುತ್ತಿರುವ ರೈತರ ಬೆಳೆಗಳಿಗೆ ಉತ್ತಮವಾದ ಬೆಲೆ ದೊರಕಿ ಅವರ ಆದಾಯದಲ್ಲಿ ಹೆಚ್ಚಳವಾಗಬೇಕು ಮತ್ತು ಅವರನ್ನು ಆರ್ಥಿಕವಾಗಿ ಸಬಲರಾಗಲು ಬೇಕಾಗುವಂತಹ ಸೌಕರ್ಯಗಳನ್ನು ಒದಗಿಸುವುದಾಗಿ ತಿಳಿಸಿದರು.

ಜಿಲ್ಲಾ ಕನ್ನಡ ಸಮ್ಮೇಳಾನಾಧ್ಯಕ್ಷೆ ಮೀರಾ ಶಿವಲಿಂಗಯ್ಯರವರ ಸಾಹಿತ್ಯ, ಸೇವೆ ಎಲ್ಲವೂ ಮಂಡ್ಯ ಜನತೆಗೆ ಮಾದರಿ ಎಂದರು.

Stay up to date on all the latest ರಾಜ್ಯ news
Poll
Mamata_PM_Modi1

ಕೋವಿಡ್ ಉಲ್ಬಣದ ಕಾರಣ ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಮತ್ತು ಟಿಎಂಸಿ ಸಾಮೂಹಿಕ ಚುನಾವಣಾ ಪ್ರಚಾರವನ್ನು ಸ್ಥಗಿತಗೊಳಿಸಬೇಕೇ?


Result
ಹೌದು
ಬೇಡ
flipboard facebook twitter whatsapp