ಆಪರೇಷನ್ ಕಮಲ ಪ್ರಕರಣ: ಸಿಎಂ ಬಿಎಸ್ ಯಡಿಯೂರಪ್ಪ ವಿರುದ್ಧದ ವಿಚಾರಣೆ ಮುಂದೂಡಿಕೆ
ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ವಿರುದ್ಧ ರಾಯಚೂರು ಜಿಲ್ಲೆ ದೇವದುರ್ಗ ಆಪರೇಷನ್ ಕಮಲ ಆಡಿಯೋ ಪ್ರಕರಣದ ವಿಚಾರಣೆಯನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಮಾರ್ಚ್ 5ಕ್ಕೆ ಮುಂದೂಡಿದೆ.
Published: 20th February 2021 07:58 PM | Last Updated: 20th February 2021 07:58 PM | A+A A-

ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ
ಬೆಂಗಳೂರು: ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ವಿರುದ್ಧ ರಾಯಚೂರು ಜಿಲ್ಲೆ ದೇವದುರ್ಗ ಆಪರೇಷನ್ ಕಮಲ ಆಡಿಯೋ ಪ್ರಕರಣದ ವಿಚಾರಣೆಯನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಮಾರ್ಚ್ 5ಕ್ಕೆ ಮುಂದೂಡಿದೆ.
ದೂರುದಾರರ ಪರ ವಕೀಲರು ಸಮಯ ಕೇಳಿದ್ದರಿಂದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಮೂರ್ತಿ ಜಾನ್ ಮೈಕಲ್ ಡಿ ಕುನ್ಹಾ ವಿಚಾರಣೆ ಮುಂದೂಡಿದರು.
ಕಲಬುರಗಿ ಹೈಕೋರ್ಟ್ ಪೀಠದಲ್ಲಿ ವಿಡಿಯೋ ಕಾನ್ಫರೆನ್ಸ್ ಮೂಲಕ ಅರ್ಜಿ ವಿಚಾರಣೆ ನಡಸಲಾಯಿತು.
2018ರ ಪೆಬ್ರವರಿಯಲ್ಲಿ ತಮಗೆ ಪಕ್ಷಕ್ಕೆ ಸೇರುವಂತೆ ಆಮಿಷ ಒಡ್ಡಿದ್ದಾಗಿ ಯಾದಗಿರಿ ಜಿಲ್ಲೆಯ ಗುರುಮಠಕಲ್ ಶಾಸಕ ನಾಗನಗೌಡ ಕಂದಕೂರ ಪುತ್ರ ಶರಣಗೌಡ ಯಡಿಯೂರಪ್ಪ ವಿರುದ್ಧ ದೂರು ನೀಡಿದ್ದರು.
ಈ ಪ್ರಕರಣದ ವಿಚಾರಣೆ ಕಲಬುರಗಿ ಹೈಕೋರ್ಟ್ ತಡೆಯಾಜ್ಞೆ ನೀಡಿತ್ತಲ್ಲದೆ, ಪ್ರಕರಣವನ್ನು ಜನಪ್ರತಿನಿಧಿಗಳ ಕೋರ್ಟ್ ಗೆ ವರ್ಗಾಯಿಸಿತ್ತು.