ಅರಮನೆ ಮೈದಾನದಲ್ಲಿ ಪಂಚಮಸಾಲಿ ಮಹಾ ಸಮಾವೇಶ: 10 ಲಕ್ಷ ಮಂದಿ ಭಾಗಿ ಸಾಧ್ಯತೆ

ಲಿಂಗಾಯತ ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ಕಲ್ಪಿಸುವಂತೆ ಆಗ್ರಹಿಸಿ ಕೂಡಲಸಂಗಮದ ಪಂಚಮಸಾಲಿ ಪೀಠದ ಬಸವ ಜಯಮೃತ್ಯುಂಜಯ ಸ್ವಾಮೀಜಿ ನೇತೃತ್ವದಲ್ಲಿ ಹಮ್ಮಿಕೊಂಡಿರುವ 38 ದಿನಗಳ ಪಾದಯಾತ್ರೆ ಶನಿವಾರ ಅಂತಿಮಗೊಂಡಿದ್ದು, ಭಾನುವಾರ ನಗರದ ಅರಮನೆ ಮೈದಾನದಲ್ಲಿ ಪಂಚಮಸಾಲಿ ಸಮುದಾಯದ ಬೃಹತ್ ಸಮಾವೇಶ ನಡೆಯಲಿದೆ.

Published: 21st February 2021 08:28 AM  |   Last Updated: 21st February 2021 01:57 PM   |  A+A-


File photo

ಸಂಗ್ರಹ ಚಿತ್ರ

Posted By : Manjula VN
Source : The New Indian Express

ಬೆಂಗಳೂರು: ಲಿಂಗಾಯತ ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ಕಲ್ಪಿಸುವಂತೆ ಆಗ್ರಹಿಸಿ ಕೂಡಲಸಂಗಮದ ಪಂಚಮಸಾಲಿ ಪೀಠದ ಬಸವ ಜಯಮೃತ್ಯುಂಜಯ ಸ್ವಾಮೀಜಿ ನೇತೃತ್ವದಲ್ಲಿ ಹಮ್ಮಿಕೊಂಡಿರುವ 38 ದಿನಗಳ ಪಾದಯಾತ್ರೆ ಶನಿವಾರ ಅಂತಿಮಗೊಂಡಿದ್ದು, ಭಾನುವಾರ ನಗರದ ಅರಮನೆ ಮೈದಾನದಲ್ಲಿ ಪಂಚಮಸಾಲಿ ಸಮುದಾಯದ ಬೃಹತ್ ಸಮಾವೇಶ ನಡೆಯಲಿದೆ.

ಸಮಾವೇಶಕ್ಕೆ ಸಕಲ ಸಿದ್ಧತೆ ನಡೆಸಲಾಗಿದ್ದು, ಅಂದಾಜು 10 ಲಕ್ಷ ಜನರು ಭಾಗವಹಿಸುವ ನಿರೀಕ್ಷೆಗಳಿವೆ. ಪಂಚಮಸಾಲಿ ಶಾಸಕರು, ಸಂಸದರು, ಮಠಾಧೀಶರು ಸೇರಿದಂತೆ ಹೋರಾಟಕ್ಕೆ ಬೆಂಬಲ ನೀಡುತ್ತಿರುವ ಇತರೆ ಸಮುದಾಯದ ಮುಖಂಡರು ಕೂಡ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ.

ಅರಮನೆ ಮೈದಾನದಲ್ಲಿ 2 ಲಕ್ಷಕ್ಕೂ ಹೆಚ್ಚು ಕುರ್ಚಿಗಳನ್ನು ಹಾಕಲಾಗಿದೆ. ಜೊತೆಗೆ ಮ್ಯಾಟ್ ಗಳನ್ನು ಹಾಸಲಾಗಿದೆ. 10 ಸಾವಿರ ಚದರದಡಿ ವಿಸ್ತೀರ್ಣದಲ್ಲಿ ಒಟ್ಟು 3 ವೇದಿಕೆಗಳನ್ನು ನಿರ್ಮಾಣ ಮಾಡಲಾಗಿದೆ. ಮಠಾಧೀಶರು ಒಳಗೊಂಡಂತೆ ವೇದಿಕೆಯಲ್ಲಿ 300 ಗಣ್ಯರ ಆಸನಕ್ಕೆ ವ್ಯವಸ್ಥೆ ಕಲ್ಪಿಸಲಾಗಿದೆ. ವೇದಿಕೆಯ ಮಧ್ಯದಲ್ಲಿ ಮಠಾಧೀಶರು ಬಲಭಾಗಕ್ಕೆ ಗಣ್ಯರು ಹಾಗೂ ಎಡಭಾಗದಲ್ಲಿ ವಿಶೇಷ ಆಹ್ವಾನಿತರಿಗೆ ಆಸನಗಳನ್ನು ಮೀಸಲಿಡಲಾಗಿದೆ. ಸಮಾವೇಶಕ್ಕೆ ಆಗಮಿಸುವ ಜನರಿಗಾಗಿ ಮೈದಾನದಲ್ಲಿ ಆಂದಾಜು ಒಂದು ಲಕ್ಷ ಆಸನ ವ್ಯವಸ್ಥೆ ಹಾಗೂ ಮಹಿಳೆಯರಿಗೆ ಪ್ರತ್ಯಕ ಆಸನವ್ಯವಸ್ಥೆ ಕಲ್ಪಿಸಲಾಗಿದೆ. ಕುಡಿಯುವ ನೀರು, ಶೌಚಾಲಯ ವ್ಯವಸ್ಥೆಯನ್ನೂ ಮಾಡಲಾಗಿದೆ. ಉತ್ತರ ಕರ್ನಾಟಕದಿಂದ ಸಮಾಜದವರು 2.5 ಲಕ್ಷ ರೊಟ್ಟಿ ತಂದಿದ್ದಾರೆ. ಜೊತಗೆ ಪಲಾವ್ ಮತ್ತು ಮಜ್ಜಿಗೆ ನೀಡಲಾಗುತ್ತಿದೆ.

ಸಮಾವೇಶದಲ್ಲಿ 18 ಜಿಲ್ಲೆಗಳಿಂದ 10 ಲಕ್ಷ ಜನರು ಪಾಲ್ಗೊಳ್ಳಲಿದ್ದಾರೆ. ಭಾನುವಾರ ಸಂಜೆಯೊಳಗಾಗಿ ರಾಜ್ಯ ಸರ್ಕಾರ ನಿರ್ಧಾರ ಕೈಗೊಳ್ಳದೇ ಹೋದರೆ, ವಿಧಾನಸೌಧದ ಮುಂದೆ ನಮ್ಮ ಪ್ರತಿಭಟನೆ ಮುಂದುವರೆಯಲಿದೆ ಎಂದು ಮಾಜಿ ಶಾಸಕ ವಿಜಯಾನಂದ ಕಾಶಪ್ಪನವರ್ ಹೇಳಿದ್ದಾರೆ.

Stay up to date on all the latest ರಾಜ್ಯ news
Poll
The grand Central Vista project is estimated to cost `20,000 crore

ಕೋವಿಡ್ ಬಿಕ್ಕಟ್ಟಿನ ದೃಷ್ಟಿಯಿಂದ ಪ್ರಧಾನಿ ಮೋದಿ ಸೆಂಟ್ರಲ್ ವಿಸ್ಟಾ ಯೋಜನೆಯನ್ನು ತಡೆಹಿಡಿಯಬೇಕೇ?


Result
ಹೌದು
ಬೇಡ
flipboard facebook twitter whatsapp