ಕಲಬುರಗಿ: ಅಕ್ರಮ ಗಾಂಜಾ ಸಾಗಾಟ ಮಾಡುತ್ತಿದ್ದ ಆರೋಪಿ ಕಾಲಿಗೆ ಗುಂಡು ಹಾರಿಸಿ ಬಂಧನ

ಗಾಂಜಾ ಸಾಗಾಟ ಮಾಡುತ್ತಿದ್ದ ವ್ಯಕ್ತಿಯ ಕಾಲಿಗೆ ಗುಂಡು ಹಾರಿಸಿ ಬಂಧಿಸಿ ಆತನಿಂದ ಸುಮಾರು 300 ಕೆಜಿ ಗಾಂಜಾವನ್ನು ವಶಕ್ಕೆ ಪಡೆದಿದ್ದಾರೆ.

Published: 22nd February 2021 09:55 AM  |   Last Updated: 22nd February 2021 09:55 AM   |  A+A-


Ganja accused

ಭೀಮು ಕಾಲಿಗೆ ಗುಂಡೇಟು

Posted By : Srinivasamurthy VN
Source : The New Indian Express

ಕಲಬುರಗಿ: ಗಾಂಜಾ ಸಾಗಾಟ ಮಾಡುತ್ತಿದ್ದ ವ್ಯಕ್ತಿಯ ಕಾಲಿಗೆ ಗುಂಡು ಹಾರಿಸಿ ಬಂಧಿಸಿ ಆತನಿಂದ ಸುಮಾರು 300 ಕೆಜಿ ಗಾಂಜಾವನ್ನು ವಶಕ್ಕೆ ಪಡೆದಿದ್ದಾರೆ.

ಕಲಬುರಗಿ ನಗರದ ಹೊರ ವಲಯದಲ್ಲಿರುವ ಸ್ವಾಮಿ ಸಮರ್ಥ ದೇವಾಲಯದ ಬಳಿ ಈ ಘಟನೆ ನಡೆದಿದ್ದು, ಕಾರಿನಲ್ಲಿ ಅಕ್ರಮವಾಗಿ ಗಾಂಜಾ ಸಾಗಿಸಲಾಗುತ್ತಿದ್ದ ಮಾಹಿತಿ ಪಡೆದ ಕಲಬುರಗಿ ರೌಡಿ ನಿಗ್ರಹ ದಳದ ಪೊಲೀಸರು ಕಾರನ್ನು ನಿಲ್ಲಿಸಲು ಯತ್ನಿಸಿದ್ದಾರೆ. ಈ ವೇಳೆ ಕಾರಿನಲ್ಲಿದ್ದ ಭೀಮು ಎಂಬ ವ್ಯಕ್ತಿ ಪೊಲೀಸರ ಮೇಲೆ ದಾಳಿ ಮಾಡಿ ಪರಾರಿಯಾಗಲು ಯತ್ನಿಸಿದ್ದಾನೆ.

ಈ ವೇಳೆ ಪೊಲೀಸರು ಆತ್ಮರಕ್ಷಣೆಗಾಗಿ ಭೀಮು ಕಾಲಿಗೆ ಗುಂಡು ಹಾರಿಸಿದ್ದಾರೆ. ರೌಡಿ ನಿಗ್ರಹ ದಳದ ಪಿಎಸ್‍ಐ ವಾಹೀದ್ ಕೋತ್ವಾಲ್ ಅವರು ಫೈರಿಂಗ್ ಮಾಡಿದ್ದು, ಗುಂಡೇಟಿನಿಂದ ಆತ ಸ್ಥಳದಲ್ಲೇ ಕುಸಿದ್ದಾನೆ. ಆತನನ್ನು ವಶಕ್ಕೆ ಪಡೆದ ಪೊಲೀಸರು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದಾರೆ.  

ಆರೋಪಿ ಭೀಮು ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ನಿವಾಸಿ. ಇಬ್ಬರು ಹೆಣ್ಣುಮಕ್ಕಳು ಸೇರಿ ನಾಲ್ಕು ಜನ ಎರಡು ಕಾರಿನಲ್ಲಿ ಗಾಂಜಾ ಸಾಗಾಟ ಮಾಡುತ್ತಿದ್ದರು. ಈ ಮಾಹಿತಿ ಆಧರಿಸಿ ಕಾರ್ಯಾಚರಣೆ ನಡೆಸಿದ ಅಧಿಕಾರಿಗಳು ಸುಮಾರು 300 ಕೆಜಿಗೂ ಅಧಿಕ ಗಾಂಜಾವನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಸದ್ಯ ಆರೋಪಿ ಭೀಮುವನ್ನು ಕಲಬುರಗಿ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. 


Stay up to date on all the latest ರಾಜ್ಯ news
Poll
kangana ranaut

ಗುಲಾಮರು ಇಟ್ಟಿರುವ 'ಇಂಡಿಯಾ' ಹೆಸರನ್ನು 'ಭಾರತ್' ಎಂದು ಬದಲಾಯಿಸುವಂತೆ ಕಂಗನಾ ರಣಾವತ್ ಹೇಳಿದ್ದಾರೆ. ನೀವು ಏನಂತೀರಿ?


Result
ಹೌದು, ಅವರು ಹೇಳಿದ್ದು ಸರಿ.
ಇಲ್ಲ, ಇದು ತುಂಬಾ ಸಿಲ್ಲಿ.
flipboard facebook twitter whatsapp