ಪಂಚಮಸಾಲಿ ಮೀಸಲಾತಿ ಹೋರಾಟ: ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವ ಜವಾಬ್ದಾರಿ ಇಬ್ಬರು ಸಚಿವರ ಹೆಗಲಿಗೆ

ಪ್ರವರ್ಗ-2ಎ ಮೀಸಲಾತಿ ಕಲ್ಪಿಸುವಂತೆ ಆಗ್ರಹಿಸಿ ನಗರದಲ್ಲಿ ಪಂಚಮಸಾಲಿ ಲಿಂಗಾಯತ ಸಮಾಜ ತೀವ್ರವಾಗಿ ಪ್ರತಿಭಟನೆ ನಡೆಸುತ್ತಿದ್ದು, ಈ ಹಿನ್ನೆಲೆಯಲ್ಲಿ ಸಮಸ್ಯೆ ಇತ್ಯರ್ಥಗೊಳಿಸುವ ಜವಾಬ್ದಾರಿಯನ್ನು ಇಬ್ಬರು ಸಚಿವರಿಗೆ ಮುಖ್ಯಮಂತ್ರಿ ಯಡಿಯೂರಪ್ಪ ಅವರು ನೀಡಿದ್ದಾರೆ.

Published: 22nd February 2021 12:49 PM  |   Last Updated: 22nd February 2021 12:53 PM   |  A+A-


File photo

ಸಂಗ್ರಹ ಚಿತ್ರ

Posted By : Manjula VN
Source : The New Indian Express

ಬೆಂಗಳೂರು: ಪ್ರವರ್ಗ-2ಎ ಮೀಸಲಾತಿ ಕಲ್ಪಿಸುವಂತೆ ಆಗ್ರಹಿಸಿ ನಗರದಲ್ಲಿ ಪಂಚಮಸಾಲಿ ಲಿಂಗಾಯತ ಸಮಾಜ ತೀವ್ರವಾಗಿ ಪ್ರತಿಭಟನೆ ನಡೆಸುತ್ತಿದ್ದು, ಈ ಹಿನ್ನೆಲೆಯಲ್ಲಿ ಸಮಸ್ಯೆ ಇತ್ಯರ್ಥಗೊಳಿಸುವ ಜವಾಬ್ದಾರಿಯನ್ನು ಇಬ್ಬರು ಸಚಿವರಿಗೆ ಮುಖ್ಯಮಂತ್ರಿ ಯಡಿಯೂರಪ್ಪ ಅವರು ನೀಡಿದ್ದಾರೆ.

ತಮ್ಮದೇ ಸಮುದಾಯದವರು ಪ್ರತಿಭಟನೆ ನಡೆಸುತ್ತಿರುವ ಹಿನ್ನೆಲೆಯಲ್ಲಿ ನೇರವಾಗಿ ಯಾವುದೇ ಹೇಳಿಕೆಗಳನ್ನು ನೀಡದಿರಲು ನಿರ್ಧರಿಸಿದ್ದು, ಸಮಸ್ಯೆ ಬಗೆಹರಿಸುವ ಜವಾಬ್ದಾರಿಯನ್ನು ಸಚಿವರಾದ ಮುರುಗೇಶ್ ನಿರಾಣಿ ಹಾಗೂ ಸಿಸಿ ಪಾಟೀಲ್ ಅವರಿಗೆ ನೀಡಿದ್ದಾರೆ.

ಈಗಾಗಲೇ ಇಬ್ಬರು ಸಚಿವರು ಪ್ರತಿಭಟನಾನಿರತ ಮನವೊಲಿಸಲು ಸಾಕಷ್ಟು ಪ್ರಯತ್ನಗಳನ್ನು ನಡೆಸಿದ್ದಾರೆ. ಆದರೂ, ಯಾವುದೇ ಪ್ರಯೋಜನಗಳಾಗಿಲ್ಲ. ನಗರದಲ್ಲಿ ಸ್ವಾಮೀಜಿಗಳು ಹಾಗೂ ಮುಖಂಡರು ತಮ್ಮ ಧರಣಿಯನ್ನು ಮುಂದುವರೆಗಿದ್ದು, ಇಂದು ಸಮುದಾಯದ ಸಚಿವರು ಹಾಗೂ ಆಡಳಿತಾರೂಢ ಬಿಜೆಪಿ ಶಾಸಕರು ಪತ್ರಿಕಾಗೋಷ್ಠಿ ನಡೆಸಲಿದ್ದಾರೆ.

ಸಮುದಾಯದ ಕಲ್ಯಾಣವನ್ನು ಮುಖ್ಯಮಂತ್ರಿಗಳು ಬಯಸುತ್ತಿದ್ದಾರೆ. ಈಗಾಗಲೇ ಹಿಂದುಳಿದ ವರ್ಗಗಳ ಆಯೋಗಕ್ಕೆ ಅಧ್ಯಯನ ನಡೆಸಿ ವರದಿಯನ್ನು ಸಲ್ಲಿಸುವಂತೆ ಪತ್ರವನ್ನೂ ಬರೆದಿದ್ದಾರೆ. ಹೀಗಾಗಿ ಸಮುದಾಯದ್ ಮುಖಂಡರು ತಾಳ್ಮೆಯಿಂದ ಇರಬೇಕು ಹಾಗೂ ಸರ್ಕಾರದ ಮೇಲೆ ನಂಬಿಕೆ ಇಡಬೇಕೆಂದು. ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನೀಡಲು ಎಲ್ಲಾ ರೀತಿಯ ಪ್ರಯತ್ನಗಳನ್ನು ಮಾಡಲಾಗುತ್ತಿದೆ ಎಂದು ಮುರುಗೇಶ್ ನಿರಾಣಿ ಹೇಳಿದ್ದಾರೆ.

ರಾಜ್ಯ ಮತ್ತು ಕೇಂದ್ರದಲ್ಲಿ ಸಿಎಂ ಮತ್ತು ಬಿಜೆಪಿ ಸರ್ಕಾರವನ್ನು ಮುಜುಗರಕ್ಕೀಡು ಮಾಡುವ ಪ್ರಯತ್ನಗಳಾಗುತ್ತಿವೆ ಎಂಬ ಮಾತುಗಳು ಕೇಳಿ ಬರುತ್ತಿವೆ.

ಸಿಎಂ ಯಡಿಯೂರಪ್ಪ ಅವರು ವೀರಶೈವ-ಲಿಂಗಾಯತಗಳನ್ನು ಒಟ್ಟಾರೆಯಾಗಿ ಕೇಂದ್ರದ ಒಬಿಸಿ ಪಟ್ಟಿಯಲ್ಲಿ ಸೇರಿಸಲು ಹೆಚ್ಚು ಆಸಕ್ತಿ ಹೊಂದಿದ್ದಾರೆ. ಸಮುದಾಯದ ಮೀಸಲಾತಿ ಹೋರಾಟಕ್ಕೆ ಧಾರ್ಮಿಕ ಮುಖ್ಯಸ್ಥರ ಅಗತ್ಯವಿರಲಿಲ್ಲ, ಬಿಜೆಪಿ ನಾಯಕನನ್ನು ಕೊಲೆ ಮಾಡಿದ ಆರೋಪ ಹೊತ್ತಿರುವ ಕಾಂಗ್ರೆಸ್'ನ ವಿನಯ್ ಕುಲಕರ್ಣಿಯವರನ್ನು ವೇದಿಕೆಯಲ್ಲಿ ಹೊಗಳಲಾಗಿದೆ. ಮುಖ್ಯಮಂತ್ರಿಗಳನ್ನು ಸದಾಕಾಲ ನಿಂದಿಸುವ ಯತ್ನಾಳ್ ಅವರಿಗೆ ಭಾಷಣ ಮಾಡಲು ಅವಕಾಶ ನೀಡಲಾಗಿದೆ. ಬಿಜೆಪಿ ಹಾಗೂ ಮುಖ್ಯಮಂತ್ರಿಗಳ ವರ್ಚಸ್ಸಿಗೆ ಧಕ್ಕೆಯುಂಟು ಮಾಡುವ ಕಾಶಪ್ಪನವರ್ ಅವರಿಗೆ ವೇದಿಕೆಯಲ್ಲಿ ಅವಕಾಶ ನೀಡಲಾಗಿದೆ ಎಂದು ಬಿಜೆಪಿ ಶಾಸಕರೊಬ್ಬರು ಪ್ರತಿಭಟನೆ ಕುರಿತು ಕಿಡಿಕಾರಿದ್ದಾರೆ.

Stay up to date on all the latest ರಾಜ್ಯ news
Poll
The grand Central Vista project is estimated to cost `20,000 crore

ಕೋವಿಡ್ ಬಿಕ್ಕಟ್ಟಿನ ದೃಷ್ಟಿಯಿಂದ ಪ್ರಧಾನಿ ಮೋದಿ ಸೆಂಟ್ರಲ್ ವಿಸ್ಟಾ ಯೋಜನೆಯನ್ನು ತಡೆಹಿಡಿಯಬೇಕೇ?


Result
ಹೌದು
ಬೇಡ
flipboard facebook twitter whatsapp