ರಾಜ್ಯದ ಅಕ್ರಮ ಕಲ್ಲು ಗಣಿಗಾರಿಕೆಗೂ ಆಂಧ್ರಪ್ರದೇಶದ ಗಣಿ ಲೂಟಿಕೋರರಿಗೂ ನೇರ ಸಂಬಂಧ: ಸಿದ್ದರಾಮಯ್ಯ

ರಾಜ್ಯದಲ್ಲಿ ಅಕ್ರಮ ಕಲ್ಲು ಗಣಿಗಾರಿಕೆಗೂ ಆಂಧ್ರಪ್ರದೇಶದ ಗಣಿಲೂಟಿಕೋರರಿಗೂ ನೇರವಾದ ಸಂಬಂಧವಿದೆ ಎಂದು ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಆರೋಪಿಸಿದ್ದಾರೆ.

Published: 23rd February 2021 02:23 PM  |   Last Updated: 23rd February 2021 02:43 PM   |  A+A-


Siddaramaiah

ಸಿದ್ದರಾಮಯ್ಯ

Posted By : Shilpa D
Source : UNI

ಬೆಂಗಳೂರು: ರಾಜ್ಯದಲ್ಲಿ ಅಕ್ರಮ ಕಲ್ಲು ಗಣಿಗಾರಿಕೆಗೂ ಆಂಧ್ರಪ್ರದೇಶದ ಗಣಿಲೂಟಿಕೋರರಿಗೂ ನೇರವಾದ ಸಂಬಂಧವಿದೆ ಎಂದು ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಆರೋಪಿಸಿದ್ದಾರೆ.

ಜಿಲೆಟಿನ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಟ್ವೀಟ್ ಮಾಡಿರುವ ಅವರು, ಅಕ್ರಮ ಗಣಿಗಳನ್ನು ಸಕ್ರಮ ಮಾಡಲು ಹೊರಟಿರುವ ಕರ್ನಾಟಕ ಮುಖ್ಯಮಂತ್ರಿಗಳ ದುರಾಡಳಿತಕ್ಕೆ ಅಮಾಯಕ ಕಾರ್ಮಿಕರು ಬಲಿಯಾಗಿದ್ದಾರೆ’ ಎಂದು ಟೀಕಿಸಿದ್ದಾರೆ.

ಶಿವಮೊಗ್ಗದಲ್ಲಿ ಜಿಲೆಟಿನ್ ಸ್ಪೋಟ ನಡೆದ ತಿಂಗಳ ಅವಧಿಯಲ್ಲಿ ನಡೆದ ಚಿಕ್ಕಬಳ್ಳಾಪುರ ಸ್ಫೋಟ ರಾಜ್ಯ ಸರ್ಕಾರದ ನಿಷ್ಕ್ರಿಯತೆ, ಬೇಜವಾಬ್ದಾರಿತನ ಮತ್ತು ಅಕ್ರಮದಲ್ಲಿ ಶಾಮೀಲಾಗಿರುವ ಭ್ರಷ್ಟತನಕ್ಕೆ ಸಾಕ್ಷಿ. ಮುಖ್ಯಮಂತ್ರಿಗಳೇ, ನೀವು ಯಾರನ್ನು ರಕ್ಷಿಸುತ್ತಿದ್ದೀರಿ? ಜನರನ್ನೇ? ಭ್ರಷ್ಟರನ್ನೇ? ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ಅಮಾಯಕ ಕಾರ್ಮಿಕರ ದುರ್ಮರಣಕ್ಕೆ ಕಾರಣವಾದ ಚಿಕ್ಕಬಳ್ಳಾಪುರದ ಜಿಲೆಟಿನ್ ಸ್ಫೋಟ ಆಘಾತಕಾರಿ ದುರ್ಘಟನೆ. ಮೃತರ ಆತ್ಮಕ್ಕೆ ಶಾಂತಿ ಕೋರುವೆ. ಪ್ರಕರಣದ ತನಿಖೆ ನಡೆಸುವುದರ ಜೊತೆಗೆ ನೊಂದ ಕುಟುಂಬಗಳಿಗೆ ತಕ್ಷಣ ಪರಿಹಾರ ಘೋಷಿಸಬೇಕೆಂದು ಮುಖ್ಯಮಂತ್ರಿಗಳನ್ನು ಒತ್ತಾಯಿಸುವೆ’ ಎಂದು ಟ್ವೀಟ್‌ನಲ್ಲಿ ಉಲ್ಲೇಖಿಸಿದ್ದಾರೆ.

ಚಿಕ್ಕಬಳ್ಳಾಪುರದ ಕಲ್ಲು ಕ್ವಾರಿ ಬಳಿ ನಡೆದ ಜಿಲೆಟಿನ್ ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. ಟ್ವೀಟ್ ಮಾಡಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ, ಚಿಕ್ಕಬಳ್ಳಾಪುರದ ಜಿಲೆಟಿನ್ ಸ್ಪೋಟ ಅಮಾಯಕ ಕಾರ್ಮಿಕರ ದುರ್ಮರಣಕ್ಕೆ ಕಾರಣವಾಗಿದೆ. ಇದೊಂದು ಆಘಾತಕಾರಿ ದುರ್ಘಟನೆ. ಮೃತರ ಆತ್ಮಕ್ಕೆ ಶಾಂತಿ ಕೋರುತ್ತೇನೆ ಎಂದಿದ್ದಾರೆ.

ಪ್ರಕರಣದ ತನಿಖೆ ನಡೆಸುವುದರ ಜೊತೆಗೆ ನೊಂದ ಕುಟುಂಬಗಳಿಗೆ ತಕ್ಷಣ ಪರಿಹಾರ ಘೋಷಿಸಬೇಕೆಂದು ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.  ಶಿವಮೊಗ್ಗದ ಜಿಲೆಟಿನ್ ಸ್ಪೋಟ ನಡೆದ ತಿಂಗಳ ಅವಧಿಯಲ್ಲಿಯೇ ಚಿಕ್ಕಬಳ್ಳಾಪುರ ಸ್ಪೋಟ ನಡೆದಿದೆ. ಇದು ರಾಜ್ಯ ಸರ್ಕಾರದ ನಿಷ್ಕ್ರಿಯತೆ ತೋರಿಸುತ್ತದೆ ಎಂದು ಕಿಡಿಕಾರಿದ್ದಾರೆ.

Stay up to date on all the latest ರಾಜ್ಯ news
Poll
Second phase election for urban local bodies on May 29

ಪುದುಚೇರಿ ಮತ್ತು ಮಧ್ಯಪ್ರದೇಶದಲ್ಲಿ ಚುನಾಯಿತ ಸರ್ಕಾರಗಳು ಪತನಗೊಂಡ ಉದಾಹರಣೆ ನೋಡಿದರೆ, ಚುನಾವಣೆಗಳು ಕೇವಲ ಹಳೇಯ ಪ್ರಜಾಪ್ರಭುತ್ವದ ಸಂಕೇತಗಳಾಗಿವೆಯೇ?


Result
ಹೌದು
ಇಲ್ಲ
flipboard facebook twitter whatsapp