
ಸಾಂದರ್ಭಿಕ ಚಿತ್ರ
ಹುಬ್ಬಳ್ಳಿ: ಎರಡು ಬೈಕ್ಗಳು ಮುಖಾಮುಖಿ ಡಿಕ್ಕಿಯಾದ ಪರಿಣಾಮ ಸ್ಥಳದಲ್ಲೇ ಮೂವರು ಮೃತಪಟ್ಟಿರುವ ಘಟನೆ ಹುಬ್ಬಳ್ಳಿಯ ಕುಂದಗೋಳ ತಾಲೂಕಿನ ಶೇರೆವಾಡ ಟೋಲ್ ಬಳಿ ಅಪಘಾತ ಸಂಭವಿಸಿದೆ.
ಮೃತ ಬೈಕ್ ಸವಾರರ ಗುರುತು ಪತ್ತೆಯಾಗಿಲ್ಲ. ಡಿಕ್ಕಿಯ ರಭಸಕ್ಕೆ ಬೈಕ್ಗಳು ಸಂಪೂರ್ಣವಾಗಿ ಜಖಂಗೊಂಡಿವೆ.
ಬೈಕ್ ಸವಾರರು ನೂಲ್ವಿಯಿಂದ ಕುಂದಗೋಳಕ್ಕೆ ಹೊರಟಿದ್ದರು. ಈ ವೇಳೆ ಕುಂದಗೋಳದಿಂದ ವಾಪಸ್ಸಾಗುತ್ತಿದ್ದ ಮತ್ತೊಂದು ಬೈಕ್ಗೆ ಪರಸ್ಪರ ಡಿಕ್ಕಿ ಹೊಡೆದಿದ್ದರಿಂದ ಈ ದುರ್ಘಟನೆ ಸಂಭವಿಸಿದೆ.
ಡಿಕ್ಕಿಯ ರಭಸಕ್ಕೆ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದು, ಇಬ್ಬರೂ ಗಂಭೀರವಾಗಿ ಗಾಯಗೊಂಡಿದ್ದಾರೆ. ಸದ್ಯ ಗಾಯಾಳುಗಳನ್ನು ಕಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಕುಂದಗೋಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.