ಕಬಿನಿಯಲ್ಲಿ 48 ಕೋಟಿ ರೂ. ವೆಚ್ಚದಲ್ಲಿ ಉದ್ಯಾನವನ: ಸಚಿವ ಎಸ್.ಟಿ.ಸೋಮಶೇಖರ್

ಕಬಿನಿಯಲ್ಲಿ 48 ಕೋಟಿ ರೂ. ವೆಚ್ಚದಲ್ಲಿ ಉದ್ಯಾನವನ ನಿರ್ಮಿಸಲು ಬಜೆಟ್‌ನಲ್ಲಿ ಘೋಷಿಸಲಾಗುವುದು ಎಂದು ಸಹಕಾರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಅವರು ಮಂಗಳವಾರ ಹೇಳಿದ್ದಾರೆ.

Published: 23rd February 2021 05:14 PM  |   Last Updated: 23rd February 2021 05:14 PM   |  A+A-


Minister ST somashekar

ಸಚಿವ ಎಸ್‌.ಟಿ.ಸೋಮಶೇಖರ್

Posted By : Lingaraj Badiger
Source : UNI

ಮೈಸೂರು: ಕಬಿನಿಯಲ್ಲಿ 48 ಕೋಟಿ ರೂ. ವೆಚ್ಚದಲ್ಲಿ ಉದ್ಯಾನವನ ನಿರ್ಮಿಸಲು ಬಜೆಟ್‌ನಲ್ಲಿ ಘೋಷಿಸಲಾಗುವುದು ಎಂದು ಸಹಕಾರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಅವರು ಮಂಗಳವಾರ ಹೇಳಿದ್ದಾರೆ.

ಇಂದು ಎಚ್.ಡಿ.ಕೋಟೆ ತಾಲ್ಲೂಕಿನ ಮೈಸೂರು ಗಡಿಭಾಗದ ಕಂಚಮಳ್ಳಿಯ ಹತ್ತಿರ ಸ್ವಾಗತ ಕಮಾನು ಉದ್ಘಾಟಿಸಿ ಮಾತನಾಡಿದ ಅವರು, ಕೆಆರ್‌ಎಸ್‌ನಲ್ಲಿರುವ ಬೃಂದಾವನ ಉದ್ಯಾನದಂತೆ ಕಬಿನಿಯಲ್ಲಿಯೂ 48 ಕೋಟಿ ರೂ. ವೆಚ್ಚದಲ್ಲಿ ಉದ್ಯಾನವನ ನಿರ್ಮಿಸಲು ಬಜೆಟ್‌ನಲ್ಲಿ ಘೋಷಿಸಲಾಗುವುದು ಎಂದರು.

ಬಹಳಷ್ಟು ಮಂದಿ ಎಚ್.ಡಿ.ಕೋಟೆ ಹೆಸರು ಕೇಳಿದ್ದಾರೆ. ಆದರೆ, ಇಲ್ಲಿನ ಪ್ರವಾಸೋದ್ಯಮ ವೈಶಿಷ್ಟ್ಯತೆಗಳ ಬಗ್ಗೆ ತಿಳಿದಿಲ್ಲ. ಆದ್ದರಿಂದ ತಾಲ್ಲೂಕಿನ ಪ್ರಕೃತಿ ಸೌಂದರ್ಯ, ಸಂಪತ್ತನ್ನು ಪರಿಚಯಿಸಲು ಸ್ವಾಗತ ಕಮಾನು ನೆರವಾಗಲಿದೆ ಎಂದರು.

ಎಚ್.ಡಿ.ಕೋಟೆ ತಾಲ್ಲೂಕಿನಲ್ಲಿ ಈಗಾಗಲೇ ಒಂದು ಸೇತುವೆ, ರಸ್ತೆ ನಿರ್ಮಾಣಕ್ಕೆ ಅನುಮೋದನೆ ಸಿಕ್ಕಿದೆ. ಜಿಲ್ಲೆಯ ಸಮಗ್ರ ಪ್ರವಾಸೋದ್ಯಮ ಅಭಿವೃದ್ಧಿಗೆ ತಾವು ಬದ್ಧರಾಗಿರುವುದಾಗಿ ಅವರು ತಿಳಿಸಿದರು.

Stay up to date on all the latest ರಾಜ್ಯ news
Poll
Second phase election for urban local bodies on May 29

ಪುದುಚೇರಿ ಮತ್ತು ಮಧ್ಯಪ್ರದೇಶದಲ್ಲಿ ಚುನಾಯಿತ ಸರ್ಕಾರಗಳು ಪತನಗೊಂಡ ಉದಾಹರಣೆ ನೋಡಿದರೆ, ಚುನಾವಣೆಗಳು ಕೇವಲ ಹಳೇಯ ಪ್ರಜಾಪ್ರಭುತ್ವದ ಸಂಕೇತಗಳಾಗಿವೆಯೇ?


Result
ಹೌದು
ಇಲ್ಲ
flipboard facebook twitter whatsapp