ಚಿಕ್ಕಬಳ್ಳಾಪುರ ಜಿಲೆಟಿನ್ ಸ್ಫೋಟ ಪ್ರಕರಣ: ಇಬ್ಬರು ಆರೋಪಿಗಳು ಪೊಲೀಸ್ ವಶಕ್ಕೆ

ಜಿಲೆಟಿನ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿಕ್ಕಬಳ್ಳಾಪುರ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ.

Published: 23rd February 2021 12:04 PM  |   Last Updated: 23rd February 2021 12:04 PM   |  A+A-


K Sudhakar

ಘಟನಾ ಸ್ಥಳಕ್ಕೆ ಭೇಟಿ ನೀಡಿದ್ದ ಸಚಿವ ಸುಧಾಕರ್

Posted By : Srinivasamurthy VN
Source : Online Desk

ಚಿಕ್ಕಬಳ್ಳಾಪುರ: ಜಿಲೆಟಿನ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿಕ್ಕಬಳ್ಳಾಪುರ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ.

ಚಿಕ್ಕಬಳ್ಳಾಪುರ ಜಿಲ್ಲೆಯ ಹಿರೇನಾಗವಲ್ಲಿ ಗ್ರಾಮದ ಬಳಿ ಜಿಲೆಟಿನ್ ಸ್ಫೋಟದಿಂದ ಆರು ಮಂದಿ ಸಾವನ್ನಪ್ಪಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವರು ಆಗಿರುವ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.

ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿರುವ ಸಚಿವರು, ತನಿಖೆ ವಿಚಾರವಾಗಿ ಘಟನಾ ಸ್ಥಳದಿಂದಲೇ ಮುಖ್ಯಮಂತ್ರಿ ಜೊತೆ ದೂರವಾಣಿ ಮೂಲಕ ಮಾತನಾಡಿದ್ದಾನೆ. ಕಾನೂನು ಉಲ್ಲಂಘಿಸಿ ಅಕ್ರಮ ಚಟುವಟಿಕೆಗಳಲ್ಲಿ ತೊಡಗಿರುವವರ ವಿರುದ್ಧ ತನಿಖೆ ನಡೆಸಿ ಕಠಿಣ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿ ಪೊಲೀಸ್ ಅಧಿಕಾರಿಗಳು ಈಗಾಗಲೇ ಇಬ್ಬರು ವ್ಯಕ್ತಿಗಳನ್ನು ಬಂಧಿಸಿದ್ದಾರೆ ಎಂದು ಹೇಳಿದ್ದಾರೆ.

ಇದೇ ವಿಚಾರವಾಗಿ ಟ್ವೀಟ್ ಮಾಡಿರುವ ಅವರು, 'ಚಿಕ್ಕಬಳ್ಳಾಪುರ ತಾಲೂಕು ಹಿರೇನಾಗವಲ್ಲಿ ಗ್ರಾಮದ ಬಳಿ ಜಿಲೆಟಿನ್ ಸ್ಫೋಟ ಸಂಭವಿಸಿದ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಲಾಯಿತು. ಇದು ಅತ್ಯಂತ ವಿಷಾದಕರ ಘಟನೆಯಾಗಿದ್ದು, ಕಾನೂನು ಉಲ್ಲಂಘಿಸಿ ಅಕ್ರಮ ಚಟುವಟಿಕೆಗಳಲ್ಲಿ ತೊಡಗಿರುವವರ ವಿರುದ್ಧ ತನಿಖೆ ನಡೆಸಿ ಕಠಿಣ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾನ್ಯ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಜೊತೆ ಘಟನಾ ಸ್ಥಳದಿಂದಲೇ ದೂರವಾಣಿ ಮೂಲಕ ಮಾತನಾಡಿದ್ದೇನೆ. ಪೊಲೀಸ್ ಅಧಿಕಾರಿಗಳು ಈಗಾಗಲೇ ಇಬ್ಬರು ವ್ಯಕ್ತಿಗಳನ್ನು ಬಂಧಿಸಿದ್ದಾರೆ. ಈ ದುರಂತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ಈ ನೋವನ್ನು ಭರಿಸುವ ಶಕ್ತಿ ನೀಡಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ ಎಂದು ಟ್ವೀಟ್ ಮಾಡಿದ್ದಾರೆ. 

Stay up to date on all the latest ರಾಜ್ಯ news
Poll
Second phase election for urban local bodies on May 29

ಪುದುಚೇರಿ ಮತ್ತು ಮಧ್ಯಪ್ರದೇಶದಲ್ಲಿ ಚುನಾಯಿತ ಸರ್ಕಾರಗಳು ಪತನಗೊಂಡ ಉದಾಹರಣೆ ನೋಡಿದರೆ, ಚುನಾವಣೆಗಳು ಕೇವಲ ಹಳೇಯ ಪ್ರಜಾಪ್ರಭುತ್ವದ ಸಂಕೇತಗಳಾಗಿವೆಯೇ?


Result
ಹೌದು
ಇಲ್ಲ
flipboard facebook twitter whatsapp