ಮಂಗಳೂರು ಸೇರಿದಂತೆ ರಾಜ್ಯದ ಇತರ ನಗರಗಳಿಗೆ ಐಟಿ ಉದ್ಯಮ ವಿಸ್ತರಣೆ: ಡಿಸಿಎಂ ‌ಅಶ್ವತ್ಥನಾರಾಯಣ

ಬೆಂಗಳೂರು ನಗರದಿಂದ ಹೊರಗೆ ಕೂಡ ಮಾಹಿತಿ ತಂತ್ರಜ್ಞಾನ ಉದ್ಯಮವನ್ನು ವಿಸ್ತರಿಸಲು ಮುಂದಾಗಿರುವ ರಾಜ್ಯ ಸರ್ಕಾರ ಮಂಗಳೂರು ನಗರವನ್ನು ಅತ್ಯಂತ ಪ್ರಮುಖ ಕ್ಲಸ್ಟರ್‌ ಆಗಿ ಗುರುತಿಸಿದೆ...

Published: 24th February 2021 08:26 PM  |   Last Updated: 24th February 2021 08:26 PM   |  A+A-


ashwatha

ಸಿ.ಎನ್.‌ಅಶ್ವತ್ಥನಾರಾಯಣ

Posted By : Lingaraj Badiger
Source : UNI

ಮಂಗಳೂರು: ಬೆಂಗಳೂರು ನಗರದಿಂದ ಹೊರಗೆ ಕೂಡ ಮಾಹಿತಿ ತಂತ್ರಜ್ಞಾನ ಉದ್ಯಮವನ್ನು ವಿಸ್ತರಿಸಲು ಮುಂದಾಗಿರುವ ರಾಜ್ಯ ಸರ್ಕಾರ ಮಂಗಳೂರು ನಗರವನ್ನು ಅತ್ಯಂತ ಪ್ರಮುಖ ಕ್ಲಸ್ಟರ್‌ ಆಗಿ ಗುರುತಿಸಿದೆ ಎಂದು ಉಪ ಮುಖ್ಯಮಂತ್ರಿ ಹಾಗೂ ಐಟಿ-ಬಿಟಿ ಸಚಿವ ಡಾ.ಸಿ.ಎನ್.‌ಅಶ್ವತ್ಥನಾರಾಯಣ ಅವರು ಹೇಳಿದ್ದಾರೆ.

ಮಂಗಳೂರಿನಲ್ಲಿ ಮಂಗಳವಾರ ನಡೆದ ʼಮಂಗಳೂರು ಆವಿಷ್ಕಾರ ಸಮಾವೇಶ' ಉದ್ಘಾಟಿಸಿ ಮತನಾಡಿದ ಅವರು, ಅನೇಕ ವರ್ಷಗಳಿಂದ ಬೆಂಗಳೂರು ಐಟಿ ನಗರವಾಗಿ ಬೆಳೆದಿದೆ. ಇದೀಗ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಮತ್ತು ಕೊಡಗು ಜಿಲ್ಲೆಗಳನ್ನು ಒಳಗೊಂಡಂತೆ ಮಂಗಳೂರನ್ನು ಉದಯೋನ್ಮುಖ ತಂತ್ರಜ್ಞಾನ ಕ್ಲಸ್ಟರ್ ಆಗಿ ಗುರುತಿಸಿದ್ದು, ಅದನ್ನು ವೇಗಗತಿಯಲ್ಲಿ ಮುಂದಕ್ಕೆ ಕೊಂಡಯ್ಯಲಾಗುವುದು ಎಂದರು.

ಮುಂದಿನ ದಿನಗಳಲ್ಲಿ ಐಟಿ ಉದ್ಯಮಗಳ ನೆಲೆಯಾಗುವುದರ ಜತೆಗೆ, ನವೋದ್ಯಮಗಳ ತಾಣವಾಗಿಯೂ ಮಂಗಳೂರು ಹೊರಹೊಮ್ಮಲಿದೆ. ಅದಕ್ಕೆ ಬೇಕಾದ ಎಲ್ಲ ಕ್ರಮಗಳನ್ನು ಸರಕಾರ ಕೈಗೊಳ್ಳುತ್ತಿದೆ ಎಂದು ಹೇಳಿದರು.

ಐಟಿ ಉದ್ಯಮದ ಜತೆಗೆ ಎಲೆಕ್ಟ್ರಾನಿಕ್‌ ಸಿಸ್ಟಮ್ಸ್‌ ಮತ್ತು ಅಭಿವೃದ್ಧಿ ನಿರ್ವಹಣೆ ಕ್ಷೇತ್ರದಲ್ಲೂ ಮಂಗಳೂರು ನಗರವನ್ನು ಪ್ರಮುಖ ಕ್ಲಸ್ಟರ್‌ ಆಗಿ ಪರಿಗಣಿಸಲಾಗಿದೆ. ಅಲ್ಲದೆ, ಬೆಂಗಳೂರು ಹೊರಗಿನ ಯೋಜನೆಗಳ ಮುಖ್ಯ ಭಾಗವಾಗಿದೆ. ರಾಜ್ಯದ ಎಲೆಕ್ಟ್ರಾನಿಕ್ಸ್‌, ಐಟಿ-ಬಿಟಿ, ವಿಜ್ಞಾನ-ತಂತ್ರಜ್ಞಾನ ಇಲಾಖೆಗಳು ರಾಜ್ಯಾದ್ಯಂತ ಆವಿಷ್ಕಾರ ಹಬ್‌ಗಳನ್ನು ಸ್ಥಾಪಿಸುತ್ತಿವೆ. ಈ ಪಟ್ಟಿಯಲ್ಲಿ ಮಂಗಳೂರು ಕೂಡ ಇದೆ ಎಂದರು.

ಮಂಗಳೂರು ಸೇರಿದಂತೆ ರಾಜ್ಯದ ಐದು ನಗರಗಳಲ್ಲಿ ಸಿಐಎಫ್‌ ವ್ಯವಸ್ಥೆ ಮಾಡಲಾಗಿದ್ದು, ಈ ಪಟ್ಟಿಯಲ್ಲಿ ಶಿವಮೊಗ್ಗ, ಬೆಳಗಾವಿ, ಮೈಸೂರು ಹಾಗೂ ಬೆಂಗಳೂರು ನಗರಗಳೂ ಇವೆ. ವ್ಯವಸ್ಥೆಯೂ ಕ್ಲಸ್ಟರ್‌ಗಳ ಅಭಿವೃದ್ಧಿಗೆ ಪೂರಕವಾಗ ಕೆಲಸ ಮಾಡುತ್ತವೆ ಎಂದರು.

ಬೆಂಗಳೂರಿನ ಆಚೆಗಿನ ಪ್ರದೇಶಗಳಲ್ಲಿ ಆವಿಷ್ಕಾರ ಮತ್ತು ತಂತ್ರಜ್ಞಾನದ ಬೆಳವಣಿಗೆಯನ್ನು ಉತ್ತೇಜಿಸಲು, ಡಿಜಿಟಲ್ ಉದ್ಯಮವನ್ನು ಪ್ರೋತ್ಸಾಹಿಸಲು ಕರ್ನಾಟಕ ಡಿಜಿಟಲ್ ಎಕಾನಮಿ ಮಿಷನ್ (ಕೆಡಿಇಎಂ) ರಚಿಸಲಾಗಿದೆ. ಉದ್ಯಮಗಳ ಬೆಳವಣಿಗೆ- ಹೂಡಿಕೆಗಳನ್ನು ಆಕರ್ಷಿಸಿ ತಂತ್ರಜ್ಞಾನ ಉದ್ಯಮವನ್ನು ಮುನ್ನಡೆಸುವ ನಿಟ್ಟಿನಲ್ಲಿ ಈ ಸಂಸ್ಥೆ ಕೆಲಸ ಮಾಡುತ್ತದೆ ಎಂದು ಡಾ.ಅಶ್ವತ್ಥನಾರಾಯಣ ಹೇಳಿದರು.

ಆವಿಷ್ಕಾರ ಮತ್ತು ತಂತ್ರಜ್ಞಾನ ಕ್ಷೇತ್ರದಲ್ಲಿ ರಾಜ್ಯದ ಆರ್ಥಿಕ ಶಕ್ತಿಯನ್ನು ವೃದ್ಧಿಸುವ ನಿಟ್ಟಿನಲ್ಲಿ ಈ ಮಿಷನ್‌ ಕೆಲಸ ಮಾಡುತ್ತದೆ. ಈ ಮೂಲಕ ನಮ್ಮ ರಾಜ್ಯದ ಜಿಎಸ್‌ಡಿಪಿಯನ್ನು ಶೇ.30ರಷ್ಟು ಹೆಚ್ಚಿಸುವ ಹಾಗೂ ಮುಂದಿನ 5 ವರ್ಷಗಳಲ್ಲಿ 30 ಲಕ್ಷ ಹೆಚ್ಚುವರಿ ಉದ್ಯೋಗಗಳನ್ನು ಸೃಷ್ಟಿ ಮಾಡುವ ಕಾರ್ಯಸೂಚಿಯೊಂದಿಗೆ ಅದು ಕೆಲಸ ಮಾಡುತ್ತಿದೆ. ಅಲ್ಲದೆ, ಮುಂದಿನ ಐದು ವರ್ಷಗಳಲ್ಲಿ ಕರ್ನಾಟಕದ ಐಟಿ ರಫ್ತು ವಹಿವಾಟು 150 ಬಿಲಿಯನ್ ಡಾಲರ್‌ ಮೀರುವ ಗುರಿಯನ್ನು ಹಾಕಿಕೊಳ್ಳಲಾಗಿದೆ ಎಂದರು.

Stay up to date on all the latest ರಾಜ್ಯ news
Poll
Mamata_PM_Modi1

ಕೋವಿಡ್ ಉಲ್ಬಣದ ಕಾರಣ ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಮತ್ತು ಟಿಎಂಸಿ ಸಾಮೂಹಿಕ ಚುನಾವಣಾ ಪ್ರಚಾರವನ್ನು ಸ್ಥಗಿತಗೊಳಿಸಬೇಕೇ?


Result
ಹೌದು
ಬೇಡ
flipboard facebook twitter whatsapp