ಅಕ್ರಮ ಗಣಿಗಾರಿಕೆ ಪ್ರಕರಣ: ಗಾಲಿ ಜನಾರ್ಧನ ರೆಡ್ಡಿ ಪತ್ನಿಗೆ ನಿರಾಳ

ಬಳ್ಳಾರಿ ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಗಾಲಿ ಜನಾರ್ಧನ ರೆಡ್ಡಿ ಅವರ ಪತ್ನಿ ಅರುಣಾ ಅವರನ್ನು ಕೈಬಿಟ್ಟು ಸಿಬಿಐ ವಿಶೇಷ ನ್ಯಾಯಾಲಯ ಹೊರಡಿಸಿದ್ದ ಆದೇಶವನ್ನು ಹೈಕೋರ್ಟ್ ಎತ್ತಿ ಹಿಡಿದಿದೆ. 

Published: 24th February 2021 07:35 AM  |   Last Updated: 24th February 2021 12:50 PM   |  A+A-


File photo

ಸಂಗ್ರಹ ಚಿತ್ರ

Posted By : Manjula VN

ಬೆಂಗಳೂರು: ಬಳ್ಳಾರಿ ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಗಾಲಿ ಜನಾರ್ಧನ ರೆಡ್ಡಿ ಅವರ ಪತ್ನಿ ಅರುಣಾ ಅವರನ್ನು ಕೈಬಿಟ್ಟು ಸಿಬಿಐ ವಿಶೇಷ ನ್ಯಾಯಾಲಯ ಹೊರಡಿಸಿದ್ದ ಆದೇಶವನ್ನು ಹೈಕೋರ್ಟ್ ಎತ್ತಿ ಹಿಡಿದಿದೆ. 

ಜನಾರ್ದನ ರೆಡ್ಡಿ ಮತ್ತು ಲಕ್ಷ್ಮಿ ಅರುಣಾ ಅವರು ಅಸೋಸಿಯೇಟೆಡ್ ಮೈನಿಂಗ್ ಕಂಪನಿಗೆ(ಎಎಂಸಿ) ಪಾಲುದಾರರಾಗಿದ್ದು, ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಇಬ್ಬರ ವಿರುದ್ಧ ಸಿಬಿಐ ದೋಷಾರೋಪ ಪಟ್ಟಿ ಸಲ್ಲಿಸಿತ್ತು. ಆರೋಪಗಳಿಂದ ಬಿಡುಗಡೆ ಕೋರಿ ಲಕ್ಷ್ಮಿ ಅರುಣಾ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದರು.

ತನಿಖಾಧಿಕಾರಿ ದಾಖಲಿಸಿದ್ದ ಸಾಕ್ಷ್ಯಗಳಲ್ಲಿ ಯಾರೊಬ್ಬರು ಲಕ್ಷ್ಮಿ ಅವರ ವಿರುದ್ಧ ಆರೋಪ ಹೊರಿಸದಿರುವುದನ್ನು ಗಮನಿಸಿದ ನ್ಯಾಯಾಲಯ, ಅವರನ್ನು ಆರೋಪದಿಂದ ಕೈಬಿಟ್ಟು 2015ರಲ್ಲಿ ಆದೇಶ ಹೊರಡಿಸಿತ್ತು. ಇದನ್ನು ಪ್ರಶ್ನಿಸಿ ಸಮಾಜ ಪರಿವರ್ತನ ಸಮುದಾಯ (ಎಸ್‌ಪಿಎಸ್)ದ ಎಸ್.ಆರ್. ಹಿರೇಮಠ ಅವರು ಹೈಕೋರ್ಟ್‌ನಲ್ಲಿ ಕ್ರಿಮಿನಲ್ ಅರ್ಜಿ ದಾಖಲಿಸಿದ್ದರು. 

ಮುಖ್ಯ ಆರೋಪಿ ಜನಾರ್ದನ ರೆಡ್ಡಿ ಅವರಷ್ಟೇ ಜವಾಬ್ದಾರಿಯನ್ನು ಇತರ ಪಾಲುದಾರರು ಹೊಂದಿದ್ದಾರೆ. ಮೀಸಲು ಅರಣ್ಯದಿಂದ ಅಕ್ರಮವಾಗಿ ಅದಿರು ಸಾಗಿಸುವ ಕೃತ್ಯದಲ್ಲಿ ಲಕ್ಷ್ಮಿ ಅರುಣಾ ಅವರೂ ಭಾಗಿದಾರರು’  ಎಂದು ಆರೋಪಿಸಿದ್ದರು.

ಈ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸೋಮಶೇಖರ್‌ ಅವರಿದ್ದ ಏಕ ಸದಸ್ಯ ನ್ಯಾಯಪೀಠ, ಲಕ್ಷ್ಮೀ ಅರುಣಾ ಅವರು ಮೆಸ​ರ್ಸ್ ಅಸೋಸಿಯೇಟೆಡ್‌ ಮೈನಿಂಗ್‌ ಕಂಪನಿಯ ದಾಖಲೆಗೆ ಸಹಿ ಹಾಕಿದ್ದಾರೆ. ಪತಿ ಗಾಲಿ ಜನಾರ್ದನ ರೆಡ್ಡಿ ಹೇಳಿದ ದಾಖಲೆಗೆ ಸಹಿ ಹಾಕಿದ್ದಾರೆ. ಅದಕ್ಕಾಗಿ ಅಕ್ರಮ ಗಣಿಗಾರಿಕೆಯಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಹೇಳಲಾಗುವುದಿಲ್ಲ. ಹೀಗಾಗಿ, ಪ್ರಕರಣದಿಂದ ಲಕ್ಷ್ಮೀ ಅರುಣಾ ಹೆಸರು ಕೈಬಿಟ್ಟ ಸಿಬಿಐ ನ್ಯಾಯಾಲಯದ ಆದೇಶ ಸರಿಯಿದೆ ಎಂದು ಹೈಕೋರ್ಟ್‌ ಆದೇಶದಲ್ಲಿ ತಿಳಿಸಿದೆ.

ಅಸೋಸಿಯೇಟೆಡ್‌ ಮೈನಿಂಗ್‌ ಕಂಪನಿ ಬಳ್ಳಾರಿಯಲ್ಲಿ ಅಕ್ರಮ ಗಣಿಗಾರಿಕೆ ನಡೆಸಿದ ಆರೋಪ ಸಂಬಂಧ ತನಿಖೆ ನಡೆಸಿದ್ದ ಸಿಬಿಐ ತನಿಖಾಧಿಕಾರಿಗಳು ವಿಶೇಷ ನ್ಯಾಯಾಲಯಕ್ಕೆ ಸಲ್ಲಿಸಿದ್ದ ದೋಷಾರೋಪ ಪಟ್ಟಿಯಲ್ಲಿ ಜನಾರ್ದನ ರೆಡ್ಡಿ ಮೊದಲನೆ ಆರೋಪಿ ಹಾಗೂ ಅವರ ಪತ್ನಿ ಲಕ್ಷ್ಮೀ ಅರುಣಾ ಎರಡನೇ ಆರೋಪಿಯಾಗಿದ್ದಾರೆಂದು ತಿಳಿಸಿದ್ದರು.

Stay up to date on all the latest ರಾಜ್ಯ news
Poll
representation purpose only

ಕೋವಿಡ್ ಲಸಿಕೆ ವಿತರಿಸುವಲ್ಲಿ ಮೋದಿ ಸರ್ಕಾರ ಪಕ್ಷಪಾತ ಮಾಡುತ್ತಿದೆ ಎಂದು ರಾಹುಲ್ ಗಾಂಧಿ ಆರೋಪಿಸಿದ್ದಾರೆ. ನೀವು ಏನಂತೀರಿ?


Result
ಇಲ್ಲ, ಇದು ಅಸಂಬದ್ಧ ಆರೋಪ
ಹೌದು, ಪಕ್ಷಪಾತ ಮಾಡುತ್ತಿದೆ
flipboard facebook twitter whatsapp