ಮದುವೆ ಸಮಾರಂಭಕ್ಕೆ ಮಾರ್ಷಲ್ ಗಳ ಆಗಮನ: ಕೋವಿಡ್ ನಿಯಮ ಪಾಲಿಸದಿದ್ದರೆ ಸ್ಥಳದಲ್ಲೇ ದಂಡ

ಮದುವೆ ಸಮಾರಂಭಗಳಲ್ಲಿ ಕೋವಿಡ್ ಸುರಕ್ಷತಾ ಕ್ರಮ ಪಾಲಿಸಲು ಮಾರ್ಷಲ್ ಗಳನ್ನು ನಿಯೋಜಿಸಲಾಗುವುದು ಎಂಬ ಆರೋಗ್ಯ ಇಲಾಖೆಯ ಸೂಚನೆ ಬೆನ್ನಲ್ಲೇ ಇಂದಿನಿಂದಲೇ ಬೆಂಗಳೂರಿನಲ್ಲಿ ಮಾರ್ಷಲ್ ಗಳು ತಮ್ಮ ಕೆಲಸ ಆರಂಭಿಸಿದ್ದಾರೆ.

Published: 24th February 2021 01:10 PM  |   Last Updated: 24th February 2021 01:10 PM   |  A+A-


BBMP marshals

ಮದುವೆಗೆ ಆಗಮಿಸಿದ ಮಾರ್ಷಲ್ ಗಳು

Posted By : Srinivasamurthy VN
Source : The New Indian Express

ಬೆಂಗಳೂರು: ಮದುವೆ ಸಮಾರಂಭಗಳಲ್ಲಿ ಕೋವಿಡ್ ಸುರಕ್ಷತಾ ಕ್ರಮ ಪಾಲಿಸಲು ಮಾರ್ಷಲ್ ಗಳನ್ನು ನಿಯೋಜಿಸಲಾಗುವುದು ಎಂಬ ಆರೋಗ್ಯ ಇಲಾಖೆಯ ಸೂಚನೆ ಬೆನ್ನಲ್ಲೇ ಇಂದಿನಿಂದಲೇ ಬೆಂಗಳೂರಿನಲ್ಲಿ ಮಾರ್ಷಲ್ ಗಳು ತಮ್ಮ ಕೆಲಸ ಆರಂಭಿಸಿದ್ದಾರೆ.

ಹೌದು... ನಗರದ ಬಸವನಗುಡಿಯ ಕಲ್ಯಾಣ ಮಂಟಪಕ್ಕೆ ದಿಢೀರ್ ಆಗಮಿಸಿದ ಮಾರ್ಷಲ್ ಗಳು ಕೋವಿಡ್ ನಿಯಮಾವಳಿ ಪಾಲಿಸುವಂತೆ ಸಭಿಕರಲ್ಲಿ ಮನವಿ ಮಾಡಿದರು. ಒಂದು ವೇಳೆ ನಿಯಮ ಪಾಲಿಸದಿದ್ದರೆ ಸ್ಥಳದಲ್ಲೇ ದಂಡ ಹಾಕುವುದಾಗೆ ಹೇಳಿದರು.

ಸಾಮಾಜಿಕ ಅಂತರ ಮತ್ತು ಮಾಸ್ತ್ ಧರಿಸುವುದನ್ನು ಕಡ್ಡಾಯವಾಗಿ ಪಾಲಿಸಲು ಮಾರ್ಷಲ್ ಗಳನ್ನು ನಿಯೋಜಿಸಲಾಗಿದ್ದು, ನಿಯಮ ಪಾಲಿಸದಿದ್ದರೆ ಸ್ಥಳದಲ್ಲೇ ದಂಡ ಹಾಕಲು ಮಾರ್ಷಲ್ ಗಳಿಗೆ ಸೂಚಿಸಲಾಗಿದೆ. 

ಈ ಹಿಂದೆ ಇದೇ ವಿಚಾರವಾಗಿ ಮಾತನಾಡಿದ್ದ ಆರೋಗ್ಯ ಶಿಕ್ಷಣ ಸಚಿವ ಕೆ ಸುಧಾಕರ್ ಅವರು, ಮದುವೆ ಸಮಾರಂಭಗಳಲ್ಲಿ ಕೋವಿಡ್ ಸುರಕ್ಷತಾ ಕ್ರಮ ಪಾಲಿಸಲು ಮಾರ್ಷಲ್ ನಿಯೋಜಿಸಲಾಗುವುದು. 500 ಕ್ಕಿಂತ ಹೆಚ್ಚು ಜನರು ಕಾಕ್ಯಕ್ರಮದಲ್ಲಿರಬಾರದು, ಎಲ್ಲರೂ ಮಾಸ್ಕ್ ಧರಿಸುವ ನಿಯಮವನ್ನು ಪಾಲಿಸ ಬೇಕು ಮತ್ತು ಸಾಮಾಜಿಕ ಅಂತರ ಪಾಲಿಸಲು ಈ ಕ್ರಮ ವಹಿಸಲಾಗುವುದು. ಆಹಾರ ಪೂರೈಕೆ ಮಾಡುವವರಿಗೂ ಪರೀಕ್ಷೆ ಮಾಡಿಸಲು ಸೂಚಿಸಲಾಗಿದೆ ಎಂದು ಹೇಳಿದ್ದರು.

ಅಲ್ಲದೆ  ಕೋವಿಡ್ ಮಾರ್ಗಸೂಚಿಗೆ ವಿರುದ್ಧವಾಗಿ ಸಭೆ, ಸಮಾರಂಭ, ಹೋರಾಟ ನಡೆಯುತ್ತಿದೆ. ಇದನ್ನು ಪಾಲಿಸದೇ ಕೋವಿಡ್ ಸೋಂಕು ಹೆಚ್ಚಾದರೆ ಮತ್ತಷ್ಟು ಕಠಿಣ ಕ್ರಮ ಕೈಗೊಳ್ಳಬೇಕಾಗುತ್ತದೆ. ಮಹಾರಾಷ್ಟ್ರದ ಕೆಲ ಜಿಲ್ಲೆಗಳಲ್ಲಿ ಲಾಕ್ ಡೌನ್ ಆಗಿದ್ದು, ಆ ಪರಿಸ್ಥಿತಿ ರಾಜ್ಯಕ್ಕೆ ಬರಬೇಕೆ ಎಂದು ಆಲೋಚಿಸಬೇಕು ಎಂದು ಕಿವಿಮಾತು ಹೇಳಿದರು.
 

Stay up to date on all the latest ರಾಜ್ಯ news
Poll
The grand Central Vista project is estimated to cost `20,000 crore

ಕೋವಿಡ್ ಬಿಕ್ಕಟ್ಟಿನ ದೃಷ್ಟಿಯಿಂದ ಪ್ರಧಾನಿ ಮೋದಿ ಸೆಂಟ್ರಲ್ ವಿಸ್ಟಾ ಯೋಜನೆಯನ್ನು ತಡೆಹಿಡಿಯಬೇಕೇ?


Result
ಹೌದು
ಬೇಡ
flipboard facebook twitter whatsapp