ಬುಡಕಟ್ಟು ಜನಾಂಗಕ್ಕೂ ಕಲ್ಯಾಣ ಯೋಜನೆಗಳನ್ನು ತಲುಪಿಸಿ: ಯಡಿಯೂರಪ್ಪ

ರಾಜ್ಯದಲ್ಲಿ ಶೇ.22.8ರಷ್ಟಿರುವ ಅರಣ್ಯ ಪ್ರದೇಶವನ್ನು ಶೇ.33ಕ್ಕೆ ಹೆಚ್ಚಳಗೊಳಿಸುವುದು ನಮ್ಮ ಗುರಿ. ಇದಕ್ಕಾಗಿ ಅಗತ್ಯ ನೆರವನ್ನು ನೀಡಲು ಸರ್ಕಾರ ಸಿದ್ಧವಿದೆ

Published: 25th February 2021 10:05 AM  |   Last Updated: 25th February 2021 10:05 AM   |  A+A-


Yediyurappa

ಯಡಿಯೂರಪ್ಪ

Posted By : Shilpa D
Source : The New Indian Express

ಬೆಂಗಳೂರು: ರಾಜ್ಯದಲ್ಲಿ ಶೇ.22.8ರಷ್ಟಿರುವ ಅರಣ್ಯ ಪ್ರದೇಶವನ್ನು ಶೇ.33ಕ್ಕೆ ಹೆಚ್ಚಳಗೊಳಿಸುವುದು ನಮ್ಮ ಗುರಿ. ಇದಕ್ಕಾಗಿ ಅಗತ್ಯ ನೆರವನ್ನು ನೀಡಲು ಸರ್ಕಾರ ಸಿದ್ಧವಿದೆ. ಹೀಗಾಗಿ ಇಲಾಖೆಯ ಅಧಿಕಾರಿಗಳು ಗುರಿ ಸಾಧನೆಗಾಗಿ ಶ್ರಮಿಸಬೇಕು ಎಂದು ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಕರೆ ನೀಡಿದ್ದಾರೆ.

ಅರಣ್ಯ ಅಧಿಕಾರಿಗಳ ಕಾರ್ಯಾಗಾರ ಉದ್ಘಾಟಿಸಿ  ಮಾತನಾಡಿದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು  ಅಧಿಕಾರಿಗಳ ಪ್ರಯತ್ನದ ಜತೆಗೆ ಅರಣ್ಯ ವಾಸಿಗಳು ಮತ್ತು ಕಾಡಂಚಿನ ಗ್ರಾಮಸ್ಥರ ಸಹಕಾರ ಅತ್ಯಂತ ಮುಖ್ಯ. ಈ ನಿಟ್ಟಿನಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳೀಯ ಗ್ರಾಮಸ್ಥರೊಂದಿಗೆ ಅತ್ಯಂತ ಸೌಹಾರ್ದಯುತವಾಗಿ ವ್ಯವಹರಿಸಬೇಕು. ಅವರ ಹಿತರಕ್ಷಣೆಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಸೂಚಿಸಿದರು.

ಅರಣ್ಯ ಪ್ರದೇಶದಲ್ಲಿನ ಪ್ರಾಣಿ, ಪಕ್ಷಿಗಳಿಗೆ ಆಹಾರ ಒದಗಿಸಬೇಕಾಗಿದೆ. ಅರಣ್ಯ ಉಳಿಯಬೇಕಾದಲ್ಲಿ ಅಲ್ಲಿಯ ಪ್ರಾಣಿ ಮತ್ತು ಪಕ್ಷಿ ಸಂಕುಲ ಮುಖ್ಯ ಪಾತ್ರ ವಹಿಸಲಿದೆ. ಅವುಗಳಿಗೆ ನೆರವಾಗುವುದಕ್ಕಾಗಿ ಅರಣ್ಯ ಪ್ರದೇಶದಲ್ಲಿ ಹಣ್ಣಿನ ಜಾತಿಯ ಮರಗಳನ್ನು ಬೆಳೆಸಲು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಸಿಎಂ ಸಲಹೆ ನೀಡಿದರು.

ಇನ್ನೂ ಸರ್ಕಾರದ ಹಲವು ಜನಪರ ಯೋಜನೆಗಳನ್ನು ಬುಡಕಟ್ಟು ಜನಾಂಗಕ್ಕೂ ತಲುಪುವಂತೆ ನೋಡಿಕೊಳ್ಳಬೇಕು ಎಂದು ಸಿಎಂ ಅರಣ್ಯಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಬೇಸಿಗೆ ಶುರುವಾಗ್ತಿದೆ. ಈ ವೇಳೆ ಸ್ವಲ್ಪ ಬೆಂಕಿ ಬಿದ್ದರೂ ಇಡೀ ಅರಣ್ಯ ನಾಶ ಆಗುತ್ತದೆ. ಹೀಗಾಗಿ ಅಗತ್ಯ ಮುನ್ನೆಚ್ಚರಿಕೆ ವಹಿಸಬೇಕು ಎಂದು ಹೇಳಿದ್ದಾರೆ.
 


Stay up to date on all the latest ರಾಜ್ಯ news
Poll
Yediyurappa

ಕರ್ನಾಟಕ ಸಿಎಂ ಆಗಿ ಬಿ.ಎಸ್. ಯಡಿಯೂರಪ್ಪ ನಿರ್ಗಮನವು ರಾಜ್ಯದಲ್ಲಿ ಬಿಜೆಪಿಯ ಚುನಾವಣಾ ಭವಿಷ್ಯದ ಮೇಲೆ ಪರಿಣಾಮ ಬೀರುತ್ತದೆಯೇ?


Result
ಹೌದು
ಇಲ್ಲ
flipboard facebook twitter whatsapp