ಬಿಎಂಟಿಸಿ ಬಸ್ ಪ್ರಯಾಣ ದರ ಹೆಚ್ಚಳಕ್ಕೆ ಮುಂದಾದ ಸರ್ಕಾರ, ಜನತೆಗೆ ಮತ್ತೊಂದು ಶಾಕ್

ಕೊರೋನಾ ಸೋಂಕಿನಿಂದ ಈಗ ತಾನೆ ಚೇತರಿಕೊಳ್ಳುತ್ತಿರುವ ಜನತೆಗೆ ರಾಜ್ಯ ಸರ್ಕಾರ ಬಿಎಂಟಿಸಿ ಬಸ್ ಪ್ರಯಾಣ ದರ ಹೆಚ್ಚಿಸುವ ಮೂಲಕ ಮತ್ತೊಂದು ಶಾಕ್ ಕೊಡಲು ಹೊರಟಿದೆ. 

Published: 25th February 2021 03:24 PM  |   Last Updated: 25th February 2021 03:24 PM   |  A+A-


bmtcbuses1

ಬಿಎಂಟಿಸಿ ಬಸ್

Posted By : Lingaraj Badiger
Source : UNI

ಬೆಂಗಳೂರು: ಕೊರೋನಾ ಸೋಂಕಿನಿಂದ ಈಗ ತಾನೆ ಚೇತರಿಕೊಳ್ಳುತ್ತಿರುವ ಜನತೆಗೆ ರಾಜ್ಯ ಸರ್ಕಾರ ಬಿಎಂಟಿಸಿ ಬಸ್ ಪ್ರಯಾಣ ದರ ಹೆಚ್ಚಿಸುವ ಮೂಲಕ ಮತ್ತೊಂದು ಶಾಕ್ ಕೊಡಲು ಹೊರಟಿದೆ. 

ಬಸ್ ಪ್ರಯಾಣ ದರ ಹೆಚ್ಚಳದ ಚಿಂತನೆ ಮಾಡಿದ್ದು, ಈ ಬಗ್ಗೆ ಮುಖ್ಯಮಂತ್ರಿಗಳು ಅಂತಿಮ ನಿರ್ಧಾರ ಕೈಗೊಳ್ಳಲಿದ್ದಾರೆ ಎಂದು ಸಾರಿಗೆ ಸಚಿವ ಲಕ್ಷ್ಮಣ್ ಸವದಿ ಅವರು ತಿಳಿಸಿದ್ದಾರೆ. 

ಈಗಾಗಲೇ ಮೂರು ಸಾರಿಗೆ ನಿಗಮಗಳ ಟಿಕೆಟ್ ದರವನ್ನು ಕಳೆದ ವರ್ಷ ಶೇ. 12 ರಷ್ಟು ಹೆಚ್ಚಳ ಮಾಡಲಾಗಿದೆ. ಆದರೆ ಬಿಎಂಟಿಸಿ ಟಿಕೆಟ್ ದರವನ್ನು ಹೆಚ್ಚಳ ಮಾಡಿಲ್ಲ. ಹೀಗಾಗಿ ಬಿಎಂಟಿಸಿ ಟಿಕೆಟ್ ದರ ಹೆಚ್ಚಿಸುವ ಪ್ರಸ್ತಾಪ ಇದ್ದು, ದರ ಹೆಚ್ಚಿಸುವ ಚಿಂತನೆ ಇದೆ ಎಂದು ಸ್ಪಷ್ಟಪಡಿಸಿದರು.

ಬಿಎಂಟಿಸಿ ಶೇಕಡ 1 ರಷ್ಟು ಟಿಕೆಟ್ ದರ ಹೆಚ್ಚಿಸುವಂತೆ ಪ್ರಸ್ತಾಪ ಮಾಡಿದೆ. ಆದರೆ ಅಷ್ಟು ದೊಡ್ಡ ಪ್ರಮಾಣದಲ್ಲಿ ಟಿಕೆಟ್ ದರ ಏರಿಕೆ ಮಾಡಲು ಸಾಧ್ಯವಾಗುವುದಿಲ್ಲ. ಇದರಿಂದ ಸಾರ್ವಜನಿಕರಿಗೆ ಹೆಚ್ಚಿನ ಹೊರೆಯಾಗಲಿದೆ. ಹೀಗಾಗಿ ಸಾರ್ವಜನಿಕರಿಗೆ ಹೊರೆಯಾಗದಂತೆ ಟಿಕೆಟ್ ದರ ಹೆಚ್ಚಿಸಲಾಗುವುದು. ಟಿಕೆಟ್ ದರ ಹೆಚ್ಚಳ ಸಂಬಂಧ ಸಿಎಂ ಅಂತಿಮ ನಿರ್ಧಾರ ಕೈಗೊಳ್ಳಲಿದ್ದಾದೆ ಎಂದೂ ಸಚಿವರು ಹೇಳಿದರು.

Stay up to date on all the latest ರಾಜ್ಯ news
Poll
Mamata_PM_Modi1

ಕೋವಿಡ್ ಉಲ್ಬಣದ ಕಾರಣ ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಮತ್ತು ಟಿಎಂಸಿ ಸಾಮೂಹಿಕ ಚುನಾವಣಾ ಪ್ರಚಾರವನ್ನು ಸ್ಥಗಿತಗೊಳಿಸಬೇಕೇ?


Result
ಹೌದು
ಬೇಡ
flipboard facebook twitter whatsapp