ಸಕಾಲ ಯೋಜನೆ: ಚಿಕ್ಕಮಗಳೂರು ಪ್ರಥಮ, ಬೆಂಗಳೂರಿಗೆ ಕೊನೆಯ ಸ್ಥಾನ

ಸಕಾಲ ಕಾರ್ಯಕ್ರಮದ ಪ್ರಗತಿ ಕುರಿತು ಪ್ರಾಥಮಿಕ, ಪ್ರೌಢ ಮತ್ತು ಸಕಾಲ ಸಚಿವ ಸುರೇಶ್ ಕುಮಾರ್, ರಾಜ್ಯದ ಎಲ್ಲಾ ಜಿಲ್ಲಾಧಿಕಾರಿ, ಜಿಪಂ ಸಿಇಒ ಗಳ ಜೊತೆ ವಿಡಿಯೋ ಕಾನ್ಫರೆನ್ಸ್ಮೂಲಕ ಸಭೆ ನಡೆಸಿದರು.

Published: 25th February 2021 03:17 PM  |   Last Updated: 25th February 2021 03:23 PM   |  A+A-


Suresh kumar

ಸುರೇಶ್ ಕುಮಾರ್

Posted By : Vishwanath S
Source : UNI

ಬೆಂಗಳೂರು: ಸಕಾಲ ಕಾರ್ಯಕ್ರಮದ ಪ್ರಗತಿ ಕುರಿತು ಪ್ರಾಥಮಿಕ, ಪ್ರೌಢ ಮತ್ತು ಸಕಾಲ ಸಚಿವ ಸುರೇಶ್ ಕುಮಾರ್, ರಾಜ್ಯದ ಎಲ್ಲಾ ಜಿಲ್ಲಾಧಿಕಾರಿ, ಜಿಪಂ ಸಿಇಒ ಗಳ ಜೊತೆ ವಿಡಿಯೋ ಕಾನ್ಫರೆನ್ಸ್ಮೂಲಕ ಸಭೆ ನಡೆಸಿದರು.

ವಿಕಾಸಸೌಧದಲ್ಲಿ ವಿಡಿಯೋ ಕಾನ್ಫರೆನ್ಸ್ ಮೂಲಕ ಸಂವಾದ ನಡೆಸಿದ ಸಚಿವರು, ಉತ್ತಮವಾಗಿ ಕಾರ್ಯನಿರ್ವಹಿಸಿದ ಜಿಲ್ಲೆಗಳಿಗೆ ಪ್ರಶಸ್ತಿ ಪ್ರಕಟಿಸಿದರು. ಜನವರಿ ಮಾಹೆಯಲ್ಲಿ ಚಿಕ್ಕಮಗಳೂರು ಜಿಲ್ಲೆಗೆ ಮೊದಲ ಸ್ಥಾನ, ಚಿಕ್ಕಬಳ್ಳಾಪುರ, ಶಿವಮೊಗ್ಗ ಕ್ರಮವಾಗಿ 2 ಮತ್ತು 3ನೇ ಸ್ಥಾನ ಹಾಗೂ ಬೆಂಗಳೂರು ನಗರ ಕೊನೆಯ ಸ್ಥಾನ ಪಡೆದಿದ್ದು, ತಾಲ್ಲೂಕುವಾರು ಬೆಂಗಳೂರು ದಕ್ಷಿಣ ತಾಲ್ಲೂಕು ಮೊದಲ ಸ್ಥಾನ ಪಡೆದಿದೆ.

ನವೆಂಬರ್ ನಲ್ಲಿ ಮೊದಲ ಸ್ಥಾನ ಗಳಿಸಿದ ಮಂಡ್ಯ ಜಿಲ್ಲಾಧಿಕಾರಿಗಳಿಗೆ ಬೃಹತ್ ಗಡಿಯಾರ ನೀಡಿ ಗೌರವಿಸಲಾಯಿತು. ಜನವರಿಯಲ್ಲಿ ಸಕಾಲ ಮೂಲಕ ಅರ್ಜಿ ವಿಲೇವಾರಿ ಪ್ರಮಾಣ ಶೇ 92.25 ರಷ್ಟಾಗಿದೆ. ಜನವರಿಯಲ್ಲಿ 26,45996 ಅರ್ಜಿ ಸ್ವೀಕಾರವಾಗಿದ್ದು, ಇದರಲ್ಲಿ 22,88,794 ಅರ್ಜಿಗಳ ವಿಲೇವಾರಿಯಾಗಿದೆ.

ಇನ್ನು ಮುಂದೆ ಎಲ್ಲ ಜಿಲ್ಲೆಗಳಲ್ಲಿ ಸಕಾಲ ಸಪ್ತಾಹ ಕಡ್ಡಾಯ ಎಂದು ಸೂಚಿಸಿದ ಸಚಿವರು, ಈ ಬಗ್ಗೆ ಜನಜಾಗೃತಿ ಮೂಡಿಸಲು ಜಿಲ್ಲಾಧಿಕಾರಿಗಳಿಗೆ ಕಟ್ಟಪ್ಪಣೆ ಮಾಡಿದರು. ಎಲ್ಲಾ ಅಪರ ಜಿಲ್ಲಾಧಿಕಾರಿಗಳು ಪ್ರತಿ ಸೋಮವಾರ ಸಕಾಲ ವಿವರ ಪ್ರಗತಿ ಪರಿಶೀಲಿಸಬೇಕು. ಎಲ್ಲ ಕಚೇರಿಗಳ ಮುಂದೆ ಸಕಾಲದ ಮಾಹಿತಿ ಫಲಕ ಕಡ್ಡಾಯಗೊಳಿಸಬೇಕು. 

ಸಕಾಲ ಒಂದೇ ನಾಗರಿಕರಿಗೆ ಸರ್ಕಾರದ ಸೇವೆಯ ತೃಪ್ತಿ ಪಡಿಸುವ ಪ್ರಮುಖ ಯೋಜನೆಯಾಗಿದ್ದು, ಇದಕ್ಕೆ ಹೆಚ್ಚು ಆದ್ಯತೆ ಕೊಡುವಂತೆ ಸಭೆಯಲ್ಲಿ ಜಿಲ್ಲಾಧಿಕಾರಿಗಳಿಗೆ ಸಚಿವ ಸುರೇಶ್ ಕುಮಾರ್ ಖಡಕ್ ಸೂಚನೆ ನೀಡಿದರು.

Stay up to date on all the latest ರಾಜ್ಯ news
Poll
representation purpose only

ಕೋವಿಡ್ ಲಸಿಕೆ ವಿತರಿಸುವಲ್ಲಿ ಮೋದಿ ಸರ್ಕಾರ ಪಕ್ಷಪಾತ ಮಾಡುತ್ತಿದೆ ಎಂದು ರಾಹುಲ್ ಗಾಂಧಿ ಆರೋಪಿಸಿದ್ದಾರೆ. ನೀವು ಏನಂತೀರಿ?


Result
ಇಲ್ಲ, ಇದು ಅಸಂಬದ್ಧ ಆರೋಪ
ಹೌದು, ಪಕ್ಷಪಾತ ಮಾಡುತ್ತಿದೆ
flipboard facebook twitter whatsapp